Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 84:10 - ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯ್ದುಕೊಂಡಿರುವದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬೇರೊಂದು ಸ್ಥಳದಲ್ಲಿ ಸಾವಿರ ದಿನಗಳಿರುವುದಕ್ಕಿಂತಲೂ ನಿನ್ನ ಆಲಯದಲ್ಲಿ ಒಂದು ದಿನವಿರುವುದೇ ಉತ್ತಮ. ದುಷ್ಟರ ಮನೆಯಲ್ಲಿ ವಾಸಿಸುವುದಕ್ಕಿಂತಲೂ ನನ್ನ ದೇವರ ಆಲಯದಲ್ಲಿ ದ್ವಾರಪಾಲಕನಾಗಿರುವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 84:10
13 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.


ನಾನು ನಿಮ್ಮ ಶಕ್ತಿಯನ್ನೂ ನಿಮ್ಮ ಮಹಿಮೆಯನ್ನೂ ಪರಿಶುದ್ಧ ಸ್ಥಳದಲ್ಲಿ ಕಂಡಿದ್ದೇನೆ. ಹೌದು, ನಾನು ನಿಮ್ಮನ್ನೇ ದೃಷ್ಟಿಸಿದ್ದೇನೆ.


ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು.


ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಆ ವ್ಯಕ್ತಿಗೆ, “ನೀವು ಇಲ್ಲಿಯ ಗೌರವ ಪೀಠದಲ್ಲಿ ಕುಳಿತುಕೊಳ್ಳಿರಿ,” ಎಂತಲೂ ಆ ಬಡವನಿಗೆ, “ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ,” ಎಂತಲೂ ಹೇಳಿದರೆ,


ಮೂರು ದಿವಸಗಳಾದ ಮೇಲೆ ಯೇಸುವನ್ನು ದೇವಾಲಯದಲ್ಲಿ ಕಂಡರು. ಬೋಧಕರ ನಡುವೆ ಕೂತುಕೊಂಡು, ಬಾಲಕ ಯೇಸು ಅವರ ಮಾತುಗಳನ್ನು ಕೇಳಿಸಿಕೊಳ್ಳುತ್ತಾ, ಪ್ರಶ್ನಿಸುತ್ತಾ ಇರುವುದನ್ನು ಅವರು ಕಂಡರು.


ಯೆಹೋವ ದೇವರೇ, ನಿಮ್ಮ ಅಭಿಷಿಕ್ತನನ್ನು ತಿರಸ್ಕರಿಸಬೇಡಿರಿ. ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನಮಾಡಿದ ಮಹಾ ಪ್ರೀತಿಯನ್ನು ನೆನಪುಮಾಡಿಕೊಳ್ಳಿರಿ,” ಎಂದು ಬೇಡಿಕೊಂಡನು.


ನಿಮ್ಮ ಸೇವಕನಾದ ದಾವೀದನ ನಿಮಿತ್ತ, ನಿಮ್ಮ ಅಭಿಷಿಕ್ತನನ್ನು ತಿರಸ್ಕರಿಸಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು