ಕೀರ್ತನೆಗಳು 84:11 - ಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು. ಅಧ್ಯಾಯವನ್ನು ನೋಡಿ |