Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 84:12 - ಕನ್ನಡ ಸಮಕಾಲಿಕ ಅನುವಾದ

12 ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮಲ್ಲಿ ಭರವಸವಿಡುವವನೇ ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪ್ರಭುವೇ, ಸ್ವರ್ಗಸೇನಾಧೀಶ್ವರನೇ I ನಿನ್ನಲಿ ನಂಬಿಕೆ ಇಡುವವನೇ ಧನ್ಯನು I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವವರು ಭಾಗ್ಯವಂತರೇ ಸರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 84:12
10 ತಿಳಿವುಗಳ ಹೋಲಿಕೆ  

ಜನರೇ, ಎಲ್ಲಾ ಕಾಲದಲ್ಲಿಯೂ ದೇವರಲ್ಲಿ ಭರವಸೆ ಇಡಿರಿ. ನಿಮ್ಮ ಹೃದಯವನ್ನು ದೇವರ ಮುಂದೆ ಒಯ್ಯಿರಿ. ದೇವರು ನಮಗೆ ಆಶ್ರಯವಾಗಿದ್ದಾರೆ.


ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ; ಅವರನ್ನು ಆಶ್ರಯಿಸುವ ಮನುಷ್ಯನು ಭಾಗ್ಯವಂತನು.


ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು, ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು.


ಯೆಹೋವ ದೇವರೇ, ಒಳ್ಳೆಯವರಿಗೂ, ಯಥಾರ್ಥ ಹೃದಯವುಳ್ಳವರಿಗೂ ಒಳ್ಳೆಯದನ್ನು ಮಾಡುತ್ತಾರೆ.


ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ. ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವುದಿಲ್ಲ. ಆದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನಿನ್ನ ದೇವರು ನಿನ್ನ ಬೆಳಗುವ ತೇಜಸ್ಸಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು