ಕೀರ್ತನೆಗಳು 84:2 - ಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರ ಅಂಗಳಗಳಲ್ಲಿ ಸೇರಲು ನನ್ನ ಪ್ರಾಣವು ಬಯಸಿ ಕುಂದುತ್ತದೆ. ನನ್ನ ಹೃದಯವೂ, ನನ್ನ ಶರೀರವೂ ಜೀವವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ I ಕಾಣಬೇಕೆಂದು ಪ್ರಭುವಿನ ಪ್ರಾಂಗಣ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. [ಆದರೆ ಈಗ] ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿ ಮಾಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ. ಅಧ್ಯಾಯವನ್ನು ನೋಡಿ |