Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 86:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನನಗೆ ಉತ್ತರಕೊಡಿರಿ. ನಾನು ದೀನನೂ ಅಗತ್ಯತೆಯಲ್ಲಿ ಇರುವವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹೇ ಪ್ರಭು, ನೀಡೆನಗೆ ಸದುತ್ತರವನು I ಕಿವಿಗೊಡು, ದೀನನು, ದಲಿತನು ನಾನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; ಕುಗ್ಗಿದವನೂ ದಿಕ್ಕಿಲ್ಲದವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಬಡವನೂ ನಿಸ್ಸಹಾಯಕನೂ ಆಗಿದ್ದೇನೆ. ಯೆಹೋವನೇ, ದಯವಿಟ್ಟು ನನಗೆ ಕಿವಿಗೊಡು; ನನ್ನ ಪ್ರಾರ್ಥನೆಗೆ ಉತ್ತರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 86:1
19 ತಿಳಿವುಗಳ ಹೋಲಿಕೆ  

ನಿಮ್ಮ ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ; ಬೇಗ ಬಂದು ನನ್ನನ್ನು ಬಿಡಿಸಿರಿ; ನನ್ನನ್ನು ರಕ್ಷಿಸುವುದಕ್ಕೆ ನನ್ನ ಆಶ್ರಯದ ಬಂಡೆಯೂ, ಬಲವಾದ ಕೋಟೆಯೂ ಆಗಿರಿ.


ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ; ಆದರೂ ಯೆಹೋವ ದೇವರು ನನ್ನ ಹಿತಚಿಂತಕರಾಗಿದ್ದಾರೆ. ನನ್ನ ದೇವರೇ ನೀವೇ ನನ್ನ ಸಹಾಯವೂ ನನ್ನ ವಿಮೋಚಕರೂ ಆಗಿದ್ದೀರಿ, ನೀವು ತಡಮಾಡಬೇಡಿರಿ.


ನನ್ನ ದೇವರೇ, ನೀವು ಕಿವಿಗೊಟ್ಟು ಕೇಳಿರಿ. ನಿಮ್ಮ ಕಣ್ಣುಗಳನ್ನು ತೆರೆದು ನಮ್ಮ ನಾಶವನ್ನೂ, ನಿಮ್ಮ ಹೆಸರಿನಿಂದ ಕರೆಯಲಾಗುವ ಈ ಹಾಳಾಗಿರುವ ಪಟ್ಟಣವನ್ನೂ ನೋಡಿರಿ. ಏಕೆಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿಮ್ಮ ಮಹಾ ಕರುಣೆಗಾಗಿಯೇ ನಮ್ಮ ವಿಜ್ಞಾಪನೆಗಳನ್ನು ನಿಮ್ಮ ಮುಂದೆ ಅರ್ಪಿಸುತ್ತೇವೆ.


“ಆತ್ಮದಲ್ಲಿ ಬಡವರಾಗಿರುವವರು ಧನ್ಯರು, ಪರಲೋಕ ರಾಜ್ಯವು ಅವರದು.


ಬಡವನಾದ ನಾನು ಕರೆಯಲು ಯೆಹೋವ ದೇವರು ಕೇಳಿ ನನ್ನ ಎಲ್ಲಾ ಇಕ್ಕಟ್ಟುಗಳೊಳಗಿಂದ ನನ್ನನ್ನು ರಕ್ಷಿಸಿದರು.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,


ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.


ನನ್ನ ಸ್ವರವೆತ್ತಿ ಯೆಹೋವ ದೇವರಿಗೆ ಮೊರೆಯಿಟ್ಟಿದ್ದೇನೆ; ಸ್ವರವೆತ್ತಿ ನನ್ನ ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದೇನೆ.


ಯೆಹೋವ ದೇವರು ಬಡವನಿಗೆ ವ್ಯಾಜ್ಯವನ್ನು, ಬಲಹೀನರಿಗೆ ನ್ಯಾಯವನ್ನೂ ತೀರಿಸುವರೆಂದೂ ನಾನು ಬಲ್ಲೆನು.


ನಾನು ನಿಮ್ಮ ಶಾಸನಗಳನ್ನು ಕೈಗೊಂಡ ಕಾರಣ, ಗರ್ವಿಷ್ಠರ ನಿಂದೆಯನ್ನೂ, ತಿರಸ್ಕಾರವನ್ನೂ ನನ್ನಿಂದ ತೊಲಗಿಸಿರಿ.


ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ; ದೇವರು ಅವರ ಪ್ರಾರ್ಥನೆಯನ್ನು ತಿರಸ್ಕರಿಸುವುದಿಲ್ಲ.


ನನ್ನ ದೇವರೇ, ನೀವು ನನಗೆ ಉತ್ತರ ಕೊಡುವುದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನೀವು ನಿಮ್ಮ ಕಿವಿಯನ್ನು ನನ್ನ ಕಡೆ ತಿರುಗಿಸಿ, ನನ್ನ ಪ್ರಾರ್ಥನೆಯನ್ನು ಆಲಿಸಿರಿ.


ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ಮೊರೆಯು ನಿಮಗೆ ಮುಟ್ಟಲಿ.


ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.


ನೀವು ನನ್ನ ಕಡೆಗೆ ತಿರುಗಿ ನನ್ನನ್ನು ಕರುಣಿಸಿರಿ; ನಾನು ಒಬ್ಬಂಟಿಗನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು