ಕೀರ್ತನೆಗಳು 86:17 - ಕನ್ನಡ ಸಮಕಾಲಿಕ ಅನುವಾದ17 ನನಗಾಗಿ ನಿಮ್ಮ ಉಪಕಾರದ ಗುರುತೊಂದನ್ನು ತೋರಿಸಿರಿ. ಆಗ ನನ್ನ ವೈರಿಗಳು ಅದನ್ನು ಕಂಡು ನಾಚಿಕೆಪಡುವರು. ಏಕೆಂದರೆ ಯೆಹೋವ ದೇವರೇ, ನೀವು ನನಗೆ ಸಹಾಯಮಾಡಿ ನನ್ನನ್ನು ಆದರಿಸಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿನ್ನ ನೆರವು, ಸಾಂತ್ವನ, ನನಗಿದೆಯೆಂದು I ನೀಡೊಂದು ಪ್ರಭು, ಶುಭಸೂಚನೆಯನು I ಅದನೋಡಿ ಶತ್ರು ಪಡಲಿ ಲಜ್ಜೆಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಹಗೆಗಾರರು ನೋಡಿ - ಯೆಹೋವನು ನೆರವಾಗಿ ಇವನನ್ನು ಸಂತೈಸಿದ್ದಾನೆಂದು ನಾಚಿಕೆಪಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನೇ, ನೀನು ನನಗೆ ಮಾಡಲಿರುವ ಸಹಾಯಕ್ಕಾಗಿ ಸೂಚನೆಯೊಂದನ್ನು ತೋರಿಸು. ನನ್ನ ಶತ್ರುಗಳು ಆ ಸೂಚನೆಯನ್ನು ಕಂಡು ನಿರಾಶರಾಗುವರು. ನೀನು ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಸಹಾಯ ಮಾಡಲಿರುವಿಯೆಂದು ಅದು ತೋರಿಸುತ್ತದೆ. ಅಧ್ಯಾಯವನ್ನು ನೋಡಿ |