Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 86:7 - ಕನ್ನಡ ಸಮಕಾಲಿಕ ಅನುವಾದ

7 ನನ್ನ ಇಕ್ಕಟ್ಟಿನ ದಿವಸದಲ್ಲಿ ನಿಮ್ಮನ್ನು ಕರೆಯುವೆನು. ನೀವು ನನಗೆ ಉತ್ತರ ಕೊಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಂಕಟಬಂದಾಗ ನಿನಗೆ ಮೊರೆಯಿಡುವೆ I ಸದುತ್ತರ ಪಾಲಿಸುವೆಯೆಂದು ನಂಬಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ, ಆಪತ್ತಿನ ಸಮಯದಲ್ಲಿ ನಿನಗೆ ಪ್ರಾರ್ಥಿಸುತ್ತಿದ್ದೇನೆ. ನೀನು ಉತ್ತರವನ್ನು ದಯಪಾಲಿಸುವೆಯೆಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 86:7
14 ತಿಳಿವುಗಳ ಹೋಲಿಕೆ  

ಅವನು ಹೀಗೆ ಹೇಳಿದನು: “ನಾನು ನನ್ನ ವ್ಯಥೆಯಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟೆನು. ಅವರು ನನ್ನ ಕೂಗನ್ನು ಕೇಳಿದರು. ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ನಾನು ಕೂಗಿದೆನು, ಆಗ ನನ್ನ ಕರೆಯನ್ನು ನೀವು ಕೇಳಿದಿರಿ.


ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


ನನ್ನ ದೇವರೇ, ನೀವು ನನಗೆ ಉತ್ತರ ಕೊಡುವುದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನೀವು ನಿಮ್ಮ ಕಿವಿಯನ್ನು ನನ್ನ ಕಡೆ ತಿರುಗಿಸಿ, ನನ್ನ ಪ್ರಾರ್ಥನೆಯನ್ನು ಆಲಿಸಿರಿ.


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ಯೆಹೋವ ದೇವರೇ, ಇಕ್ಕಟ್ಟಿನಲ್ಲಿ ಅವರು ನಿಮ್ಮನ್ನು ಹುಡುಕಿದರು. ನಿಮ್ಮ ಶಿಕ್ಷೆ ಅವರ ಮೇಲಿರುವಾಗ, ಅವರು ಪ್ರಾರ್ಥನೆಯನ್ನು ಮಾಡಿದರು.


ನನ್ನ ಸ್ವರವೆತ್ತಿ ಯೆಹೋವ ದೇವರಿಗೆ ಮೊರೆಯಿಟ್ಟಿದ್ದೇನೆ; ಸ್ವರವೆತ್ತಿ ನನ್ನ ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದೇನೆ.


ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು.


ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ, ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ; ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿ ನನಗೆ ಉರುಲನ್ನು ಒಡ್ಡಿದ್ದಾರೆ.


ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.


ಯೇಸು ವೇದನೆಯಲ್ಲಿದ್ದು ಬಹಳ ಆಸಕ್ತಿಯಿಂದ ಪ್ರಾರ್ಥಿಸಿದರು. ಯೇಸುವಿನ ಬೆವರು ನೆಲಕ್ಕೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳಂತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು