Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:11 - ಕನ್ನಡ ಸಮಕಾಲಿಕ ಅನುವಾದ

11 ಆಕಾಶಗಳು ನಿಮ್ಮವು, ಭೂಮಿಯು ಸಹ ನಿಮ್ಮದು. ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನೀವು ಉಂಟುಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಕಾಶವು ನಿನ್ನದು ಪ್ರಭು, ಭೂಮಿಯೂ ನಿನ್ನದೇ I ಜಗವು, ಅದರಲ್ಲಿರುವುದೆಲ್ಲವು, ನಿನ್ನಿಂದಾದುದೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಕಾಶವು ನಿನ್ನದು, ಭೂವಿುಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವದೆಲ್ಲವನ್ನೂ ನಿರ್ಮಿಸಿದವನು ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರೇ, ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಪ್ರಪಂಚವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:11
11 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.


ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದರು.


ಉನ್ನತ ಆಕಾಶಗಳು ಯೆಹೋವ ದೇವರದೇ, ಆದರೆ ಅವರು ಭೂಮಿಯನ್ನು ಮಾನವರಿಗೆ ಕೊಟ್ಟಿದ್ದಾರೆ.


ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತ ದೇವರದಾಗಿದೆ.”


ನನಗೆ ಹಸಿವಾದರೆ ನಿಮಗೆ ಹೇಳಬೇಕಾಗಿಲ್ಲ, ಏಕೆಂದರೆ ಭೂಲೋಕವೂ ಅದರಲ್ಲಿರುವುದೆಲ್ಲವೂ ನನ್ನವೇ.


ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ಸಂಪೂರ್ಣವಾಗಿ ನಿರ್ಮಿತವಾದವು.


ಆದರೆ ಯಾರಾದರೂ ನಿಮಗೆ, “ಇದು ನೈವೇದ್ಯ ಮಾಡಿದ್ದು,” ಎಂದು ಹೇಳಿದರೆ, ತಿಳಿಸಿದ ವ್ಯಕ್ತಿಯ ನಿಮಿತ್ತವೂ ಆ ವ್ಯಕ್ತಿಯ ಮನಸ್ಸಾಕ್ಷಿಯ ನಿಮಿತ್ತವೂ ತಿನ್ನಬೇಡಿರಿ.


ನಾನು ಸಾಲ ತೀರಿಸಬೇಕೆಂದು ನನಗೆ ವಿರೋಧವಾಗಿ ಹಕ್ಕು ಸಾಧಿಸುವವರು ಯಾರು? ಆಕಾಶದ ಕೆಳಗೆ ಇರುವಂಥ ಪ್ರತಿಯೊಂದೂ ನನ್ನದೇ.


ಭೂವಿಸ್ತಾರಗಳನ್ನು ನೀನು ಗ್ರಹಿಸಿರುವೆಯೋ? ಇದನ್ನೆಲ್ಲಾ ನೀನು ತಿಳಿದಿದ್ದರೆ ನನಗೆ ಹೇಳು ನೋಡೋಣ.


ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು