Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:16 - ಕನ್ನಡ ಸಮಕಾಲಿಕ ಅನುವಾದ

16 ನಿಮ್ಮ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು, ನಿಮ್ಮ ನೀತಿಯಲ್ಲಿ ಅವರು ಉನ್ನತಕ್ಕೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆನಂದಿಸುವರವರು ಸದಾ ನಿನ್ನ ನಾಮದಲಿ I ಪ್ರವರ್ಧಿಸುವರವರು ನಿನ್ನ ನ್ಯಾಯನೀತಿಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆಹೊಂದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿನ್ನ ಹೆಸರು ಅವರನ್ನು ಯಾವಾಗಲೂ ಸಂತೋಷಗೊಳಿಸುತ್ತದೆ. ಅವರು ನಿನ್ನ ನೀತಿಯನ್ನು ಸ್ತುತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:16
20 ತಿಳಿವುಗಳ ಹೋಲಿಕೆ  

ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ನನ್ನ ಆತ್ಮವು ನನ್ನ ರಕ್ಷಕ ದೇವರಲ್ಲಿ ಉಲ್ಲಾಸಗೊಂಡಿದೆ.


ಉತ್ತರವನ್ನೂ ದಕ್ಷಿಣವನ್ನೂ ನೀವೇ ನಿರ್ಮಿಸಿದ್ದೀರಿ. ತಾಬೋರೂ, ಹೆರ್ಮೋನೂ ನಿಮ್ಮ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.


ಯೆಹೋವ ದೇವರ ಧ್ವನಿಯು ಸಿಡಿಲಿನ ಮಿಂಚಿನಂತೆ ಅಪ್ಪಳಿಸುತ್ತದೆ.


ನಾನು ನಿಮ್ಮ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಿಟ್ಟುಕೊಳ್ಳಲಿಲ್ಲ. ನಿಮ್ಮ ನಂಬಿಗಸ್ತಿಕೆಯನ್ನೂ ನಿಮ್ಮ ರಕ್ಷಣೆಯನ್ನೂ ನಿಮ್ಮ ಪ್ರೀತಿಯನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡದೆ ಸಾರಿದೆನು.


ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.


ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.


ದೇವರ ಪರಿಶುದ್ಧ ನಾಮವನ್ನು ಹೊಗಳಿರಿ; ಯೆಹೋವ ದೇವರನ್ನು ಹುಡುಕುವವರ ಹೃದಯವು ಸಂತೋಷಿಸಲಿ.


ದೇವರಲ್ಲಿ ದಿನವೆಲ್ಲಾ ನಾವು ಹಿಗ್ಗುತ್ತಿದ್ದೇವೆ; ನಿಮ್ಮ ಹೆಸರನ್ನು ಯುಗಯುಗಕ್ಕೂ ಕೊಂಡಾಡುವೆವು.


ದೇವರಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಅವರ ಪರಿಶುದ್ಧ ಹೆಸರಿನಲ್ಲಿ ಭರವಸೆ ಇಟ್ಟಿದ್ದೇವೆ.


ಯೆಹೋವ ದೇವರ ಧ್ವನಿಯು ದೇವದಾರು ವೃಕ್ಷಗಳನ್ನು ಮುರಿಯುತ್ತದೆ; ಯೆಹೋವ ದೇವರು ಲೆಬನೋನಿನ ದೇವದಾರು ವೃಕ್ಷಗಳನ್ನು ಮುರಿಯುತ್ತಾರೆ.


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


“ ‘ಇದಲ್ಲದೆ ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ವರ್ಷಗಳ ಕಾಲವು ಒಟ್ಟು ನಾಲ್ವತ್ತೊಂಬತ್ತು ವರ್ಷಗಳಾಗಿರುವುವು.


ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೆಯ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸಬೇಕು. ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.


ಯಾಕೋಬಿನ ಮನೆತನದವರೇ ಬನ್ನಿರಿ, ಯೆಹೋವ ದೇವರ ಬೆಳಕಿನಲ್ಲಿ ನಡೆಯೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು