ಕೀರ್ತನೆಗಳು 89:30 - ಕನ್ನಡ ಸಮಕಾಲಿಕ ಅನುವಾದ30 “ಆತನ ಸಂತತಿಯು ನನ್ನ ನಿಯಮವನ್ನು ಬಿಟ್ಟು, ನನ್ನ ಶಾಸನಗಳನ್ನು ಅನುಸರಿಸಿ ನಡೆಯದೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು, ನನ್ನ ಆಜ್ಞೆಗಳಲ್ಲಿ ನಡೆಯದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅವನ ಕುವರರು ತೊರೆದರಾದರೆ ನನ್ನ ಧರ್ಮಶಾಸ್ತ್ರವನು I ಉಲ್ಲಂಘಿಸಿ ನಡೆದರಾದರೆ ನನ್ನ ಆಜ್ಞಾವಿಧಿಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು ನನ್ನ ಆಜ್ಞೆಗಳಲ್ಲಿ ನಡೆಯದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಅವನ ಸಂತತಿಯವರು ನನ್ನ ಧರ್ಮಶಾಸ್ತ್ರವನ್ನು ತೊರೆದುಬಿಟ್ಟು ನನ್ನ ಆಜ್ಞೆಗಳಿಗೆ ಅವಿಧೇಯರಾದರೆ ಅವರನ್ನು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.