Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:49 - ಕನ್ನಡ ಸಮಕಾಲಿಕ ಅನುವಾದ

49 ಯೆಹೋವ ದೇವರೇ, ನಿಮ್ಮ ಸತ್ಯದಲ್ಲಿ ನೀವು ದಾವೀದನಿಗೆ ಆಣೆಯಿಟ್ಟೆ. ನಿಮ್ಮ ಮೊದಲಿನ ಮಹಾ ಪ್ರೀತಿ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು, ದಾವೀದನಿಗೆ ವಾಗ್ದಾನಮಾಡಿ ನಡೆಸುತ್ತಿದ್ದ ಹಿಂದಿನ ಕೃಪಾಕಾರ್ಯಗಳು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ದಾವೀದನಿಗೆ ಪ್ರಭು, ನೀನಿತ್ತ ವಾಗ್ದಾನವೆಲ್ಲಿ? I ಗತಕಾಲದಲಿ ನೀ ತೋರಿದಚಲ ಪ್ರೀತಿಯೆಲ್ಲಿ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು ದಾವೀದನಿಗೆ ವಾಗ್ದಾನಮಾಡಿ ನಡಿಸುತ್ತಿದ್ದ ಮುಂಚಿನ ಕೃಪಾಕಾರ್ಯಗಳು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಯೆಹೋವನೇ, ಹಿಂದಿನಕಾಲದಲ್ಲಿ ನೀನು ತೋರಿದ ಪ್ರೀತಿ ಎಲ್ಲಿ ಹೋಯಿತು? ದಾವೀದ ಕುಟುಂಬಕ್ಕೆ ನಂಬಿಗಸ್ತನಾಗಿರುತ್ತೇನೆಂದು ನೀನು ವಾಗ್ದಾನ ಮಾಡಿದೆಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:49
12 ತಿಳಿವುಗಳ ಹೋಲಿಕೆ  

ಆದರೆ ಸೌಲನ ಮೇಲಿದ್ದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ, ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ. ನಾನು ಸೌಲನನ್ನು ನಿನ್ನ ಮುಂದೆಯೇ ಹೊರಡಿಸಿಬಿಟ್ಟೆನಲ್ಲಾ.


ಆದರೆ ಯೇಸು ದೇವರ ಆಣೆಯಿಂದಲೇ ಯಾಜಕರಾದರು. ಹೀಗೆ ದೇವರು ಹೇಳಿದ್ದೇನೆಂದರೆ: “ ಕರ್ತ ಆಗಿರುವ ನಾನು ಆಣೆಯಿಟ್ಟು ಹೇಳಿದ್ದೇನೆ. ನಾನು ಎಂದಿಗೂ ಮನಸ್ಸನ್ನು ಬದಲಾಯಿಸುವುದಿಲ್ಲ. ‘ನೀನು ಸದಾಕಾಲವೂ ಯಾಜಕನಾಗಿದ್ದೀ.’ ”


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಒಂದೇ ಸಾರಿ ನನ್ನ ಪರಿಶುದ್ಧತ್ವದಿಂದ ಆಣೆಯಿಟ್ಟು ಹೇಳಿದ್ದೇನೆ. ದಾವೀದನಿಗೆ ಸುಳ್ಳಾಡೆನು.


ನನ್ನ ಕೆಡುಕನ್ನು ಬಯಸುವವರು ಕೇಡನ್ನು ಅನುಭವಿಸಲಿ. ನಿಮ್ಮ ನಂಬಿಗಸ್ತಿಕೆಯಿಂದ ನೀವು ಅವರನ್ನು ದಂಡಿಸಿರಿ.


ನಾನು ಸೌಲನ ಕುಟುಂಬದಿಂದ ರಾಜ್ಯವನ್ನು ತಪ್ಪಿಸಿ, ಯೆಹೋವ ದೇವರು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ,


ಆತ್ಮದ ವಿಮೋಚನೆಯು ಬಹು ಬೆಲೆಯುಳ್ಳದ್ದು, ಅದಕ್ಕೆ ಸಾಕಷ್ಟು ಬೆಲೆಯನ್ನು ಕಟ್ಟಲು ಯಾರಿಗೂ ಸಾಧ್ಯವಿಲ್ಲ.


ಏಕೆಂದರೆ, ಜ್ಞಾನಿಗಳು ಸಾಯುವುದನ್ನು ಕಾಣುತ್ತೇವೆ. ಹಾಗೆಯೇ ಮೂರ್ಖರೂ ಜ್ಞಾನಹೀನರೂ ಸಹ ನಾಶವಾಗುತ್ತಾರೆ. ಅವರ ಆಸ್ತಿಯನ್ನು ಇತರರು ಪಡೆಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು