Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:51 - ಕನ್ನಡ ಸಮಕಾಲಿಕ ಅನುವಾದ

51 ಯೆಹೋವ ದೇವರೇ, ನಿಮ್ಮ ಶತ್ರುಗಳು ನಿಂದಿಸುತ್ತಿದ್ದಾರೆ. ನಿಮ್ಮ ಅಭಿಷಿಕ್ತನ ಹೆಜ್ಜೆ ಹೆಜ್ಜೆಗೂ ನಿಂದಿಸುತ್ತಾರಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ, ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವುದನ್ನೂ ಜ್ಞಾಪಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51-52 ನಿಂದಿಸುತಿಹರು ಪ್ರಭು, ವೈರಿಗಳು ನಿನ್ನಭಿಷಿಕ್ತನನು I ಹೆಜ್ಜೆಹೆಜ್ಜೆಗು ಅವಮಾನಿಸುತಿಹರು ಶತ್ರುಗಳವನನು I ಆಮೆನ್, ಆಮೆನ್, ಪ್ರಭುವಿಗೆ ಸರ್ವದಾ ಧನ್ಯವಾದವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವದನ್ನೂ ಜ್ಞಾಪಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:51
17 ತಿಳಿವುಗಳ ಹೋಲಿಕೆ  

ದೇವರೇ, ವೈರಿಯು ನಿಂದಿಸುವುದು ಎಷ್ಟರವರೆಗೆ? ಶತ್ರುವು ನಿಮ್ಮ ಹೆಸರನ್ನು ಎಂದೆಂದಿಗೂ ದೂಷಿಸುವನೋ?


ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.


ಇನ್ನೂ ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು ತಿಂದು ಬೇಡಿ ಸೆರೆವಾಸವನ್ನು ಸಹ ಅನುಭವಿಸಿದರು,


ಕೆಲವು ಸಾರಿ ನೀವು ನಿಂದೆಗಳನ್ನೂ ಉಪದ್ರವಗಳನ್ನೂ ಅನುಭವಿಸಿ ಬಹಿರಂಗ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸುವವರ ಭಾಗಿಗಳಾದಿರಿ.


ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು.


ಅದಕ್ಕೆ ಯೆಹೂದಿ ನಾಯಕರು ಯೇಸುವಿಗೆ, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವ ಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೇ?” ಎಂದು ಕೇಳಿದರು.


“ನಾನು ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟಬಲ್ಲೆನೆಂದು ಈತನು ಹೇಳಿದನು,” ಎಂದರು.


ಆದರೆ ಫರಿಸಾಯರು ಇದನ್ನು ಕೇಳಿದಾಗ, “ಈತನು ದೆವ್ವಗಳನ್ನು ಓಡಿಸುತ್ತಿರುವುದು ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದಲೇ,” ಎಂದರು.


ದೇವರು ಪರಲೋಕದಿಂದ ಸಹಾಯ ಕಳುಹಿಸಿ, ನನ್ನನ್ನು ನಿಂದಿಸುವವರನ್ನು ದಂಡಿಸಿ, ನನ್ನನ್ನು ರಕ್ಷಿಸುವರು. ದೇವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನೂ ತಮ್ಮ ಸತ್ಯವನ್ನೂ ಕಳುಹಿಸುವರು.


ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ. ನನ್ನ ಒಡಹುಟ್ಟಿದವರಿಗೇ ಪರಕೀಯನಾಗಿದ್ದೇನೆ.


ಕರ್ತದೇವರೇ, ನಿಮ್ಮ ಎಲ್ಲಾ ನೀತಿಗಳ ಪ್ರಕಾರ ನಿಮ್ಮ ಕೋಪವನ್ನು, ನಿಮ್ಮ ಉಗ್ರತ್ವವನ್ನು ನಿಮ್ಮ ಪಟ್ಟಣವಾದ ಯೆರೂಸಲೇಮಿನಿಂದಲೂ ನಿಮ್ಮ ಪರಿಶುದ್ಧ ಪರ್ವತದಿಂದಲೂ ತಿರುಗಿಸಿಬಿಡಿರಿ. ನಮ್ಮ ಪಾಪಗಳ ನಿಮಿತ್ತದಿಂದಲೂ, ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮ್ ಮತ್ತು ನಿಮ್ಮ ಜನರು ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು