Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಾನು ನಿಮ್ಮನ್ನು ಸ್ತುತಿಸುವೆನು; ನಿಮ್ಮ ಅದ್ಭುತ ಕಾರ್ಯಗಳನ್ನೆಲ್ಲಾ ನಾನು ವರ್ಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮನಃಪೂರ್ವಕವಾಗಿ ಪ್ರಭು, ನಿನ್ನ ಕೊಂಡಾಡುವೆನು I ನಿನ್ನದ್ಭುತಕಾರ್ಯಗಳೆಲ್ಲವನು ನಾ ವರ್ಣಿಸುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:1
22 ತಿಳಿವುಗಳ ಹೋಲಿಕೆ  

ನನ್ನ ದೇವರಾದ ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು. ನಿಮ್ಮ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.


ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ.


ಯೆಹೋವ ದೇವರನ್ನು ಸ್ತುತಿಸಿರಿ. ನಾನು ಯೆಹೋವ ದೇವರನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ, ಸಭೆಯಲ್ಲಿಯೂ ಕೊಂಡಾಡುವೆನು.


ಸ್ತೋತ್ರ ಧ್ವನಿಯೆತ್ತಿ ಸಾರುತ್ತಾ ನಿಮ್ಮ ಅದ್ಭುತಗಳನ್ನೆಲ್ಲಾ ತಿಳಿಸುವೆನು.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.


ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು. ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು.


ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿಮ್ಮನ್ನು ಸ್ತುತಿಸುವೆನು.


ಕರ್ತಾ, ನನ್ನ ತುಟಿಗಳನ್ನು ತೆರೆಯಿರಿ. ಆಗ ನನ್ನ ಬಾಯಿ ನಿಮ್ಮ ಸ್ತೋತ್ರವನ್ನು ಪ್ರಸಿದ್ಧಿ ಮಾಡುವುದು.


ಅದಕ್ಕೆ ಅವನು ಉತ್ತರವಾಗಿ, “ ‘ನೀನು ನಿನ್ನ ದೇವರಾದ ಕರ್ತದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು,’ ಮತ್ತು ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು,’” ಎಂದನು.


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?


ಒಂಟೆಗಳ ಸಮೂಹವು ನಿನ್ನ ದೇಶದಲ್ಲಿ ತುಂಬಿಕೊಳ್ಳುವುದು. ಮಿದ್ಯಾನಿನ ಏಫಾದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೆಬದಿಂದಲೂ ಬರುವುವು. ಬಂಗಾರವನ್ನೂ, ಧೂಪವನ್ನೂ ತರುವುವು. ಯೆಹೋವ ದೇವರ ಸ್ತೋತ್ರಗಳನ್ನು ಸಾರುವುವು.


ಯೆಹೋವ ದೇವರ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸಿರಿ, ದೇವರನ್ನು ತಕ್ಕಂತೆ ಸ್ತುತಿಸುವವರು ಯಾರಿಗೆ ಸಾಧ್ಯ?


ಆಗ ಚೀಯೋನೆಂಬ ನಗರ ದ್ವಾರಗಳಲ್ಲಿ ನಿಮ್ಮ ಸ್ತುತಿಯನ್ನು ಸಾರುವೆನು. ನಿಮ್ಮ ರಕ್ಷಣೆಯಲ್ಲಿ ಆನಂದಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು