ಕೀರ್ತನೆಗಳು 9:10 - ಕನ್ನಡ ಸಮಕಾಲಿಕ ಅನುವಾದ10 ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು, ಏಕೆಂದರೆ ಯೆಹೋವ ದೇವರೇ, ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿನ್ನನು ಅರಸುವವರನು ಹೇ ಪ್ರಭು, ನೀ ಕೈ ಬಿಡುವವನಲ್ಲ I ನಿನ್ನಲ್ಲಿ ಭರವಸೆ ಇಡುವರು ನಿನ್ನ ನಾಮವನರಿತವರೆಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಯಾಕಂದರೆ ನಿನ್ನ ಮರೆಹೊಗುವವರನ್ನು ನೀನು ಕೈಬಿಡುವವನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ. ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.