Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:13 - ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರೇ, ನನ್ನ ವೈರಿಗಳು ನನ್ನನ್ನು ಹಿಂಸಿಸುವುದನ್ನು ನೋಡಿರಿ. ನನ್ನನ್ನು ಕರುಣಿಸಿ, ಮರಣ ದ್ವಾರದಿಂದ ನನ್ನನ್ನು ಮೇಲಕ್ಕೆತ್ತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮೃತ್ಯುವಿನ ಬಾಯಿಂದೆನ್ನ ಬದುಕಿಸುವ ಪ್ರಭು, ಕನಿಕರಿಸು I ವೈರಿ-ವಿರೋಧಿಗಳೆನಗೆ ಗೈದ ಕಿರುಕುಳವನು, ನೀ ಗಮನಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಯೆಹೋವನೇ, ನನ್ನನ್ನು ಕನಿಕರಿಸು. ಇಗೋ, ವೈರಿಗಳು ನನಗೆ ಕೇಡುಮಾಡುತ್ತಿದ್ದಾರೆ. ‘ಮರಣ ದ್ವಾರ’ದಿಂದ ತಪ್ಪಿಸಿ ಕಾಪಾಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:13
24 ತಿಳಿವುಗಳ ಹೋಲಿಕೆ  

ನಿಮ್ಮ ಪ್ರೀತಿಯು ನನ್ನ ಮೇಲೆ ಅಗಾಧವಾಗಿದೆ. ಕೆಳಗಿನ ಪಾತಾಳದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀರಿ.


ಯೆಹೋವ ದೇವರೇ, ನನ್ನ ಪ್ರಾಣವನ್ನು ಪಾತಾಳದೊಳಗಿಂದ ಎತ್ತಿದ್ದೀರಿ; ನಾನು ಸಮಾಧಿ ಸೇರದ ಹಾಗೆ ನನ್ನನ್ನು ಬದುಕಿಸಿದ್ದೀರಿ.


ಅವಳ ಜನರೆಲ್ಲರು ನರಳಾಡುತ್ತಾರೆ. ಅವರು ರೊಟ್ಟಿ ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು, ಅವರು ಆಹಾರಕ್ಕಾಗಿ ತಮ್ಮ ಬೊಕ್ಕಸಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ “ಯೆಹೋವ ದೇವರೇ, ನೋಡು, ಲಕ್ಷಿಸಿ; ಏಕೆಂದರೆ ನಾನು ಭ್ರಷ್ಠಳಾದೆನು.”


ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”


“ನನ್ನ ಜೀವನದ ಮಧ್ಯಪ್ರಾಯದಲ್ಲೇ ನಾನು ಪಾತಾಳದ ದ್ವಾರದೊಳಗೆ ಹೋಗಬೇಕು. ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರುಷಗಳು ನನಗೆ ತಪ್ಪಿಹೋಯಿತು,” ಎಂದು ನಾನು ಅಂದುಕೊಂಡೆನು.


ನನ್ನ ಕೂಗನ್ನು ಆಲೈಸಿರಿ, ಏಕೆಂದರೆ ನಾನು ಬಹಳ ಕುಂದಿಹೋಗಿದ್ದೇನೆ; ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸಿರಿ, ಏಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ.


ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸಿರಿ; ಏಕೆಂದರೆ ನಿಮ್ಮ ನಿಯಮವನ್ನು ನಾನು ಮರೆತಿಲ್ಲ.


ನಿಮ್ಮ ನಾಮವನ್ನು ಪ್ರೀತಿಸುವವರಿಗೆ ನೀವು ಯಾವಾಗಲೂ ಮಾಡುವಂತೆ, ನೀವು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕರುಣಿಸಿರಿ.


ಏಕೆಂದರೆ ನೀವು ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀರಿ. ನಾನು ಜೀವದ ಬೆಳಕಿನಲ್ಲಿ ನಿಮ್ಮ ಮುಂದೆ ನಡೆದುಕೊಳ್ಳುವ ಹಾಗೆ ನೀವು ನನ್ನ ಪಾದಗಳನ್ನು ಎಡವದಂತೆ ಕಾಪಾಡಿದ್ದೀರಿ.


ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನನ್ನು ಕರುಣಿಸಿರಿ. ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.


ನನ್ನ ಶತ್ರುಗಳು ಬಲಗೊಂಡಿದ್ದಾರೆ. ನನ್ನನ್ನು ವಿನಾಕಾರಣವಾಗಿ ದ್ವೇಷಿಸುವವರು ಹೆಚ್ಚಿದ್ದಾರೆ.


ನನ್ನ ಶತ್ರುಗಳನ್ನು ನೋಡಿರಿ, ಅವರು ಹೆಚ್ಚಾಗಿದ್ದಾರೆ; ತೀವ್ರ ಹಗೆಯಿಂದ ಅವರು ನನ್ನನ್ನು ದ್ವೇಷಿಸುತ್ತಾರೆ.


ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ. ನನಗೆ ಮರಣ ನಿದ್ರೆ ಉಂಟಾಗದಂತೆ ನನ್ನ ಕಣ್ಣುಗಳನ್ನು ಬೆಳಗಿಸಿರಿ.


“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.


ಯೆಹೂದ್ಯರ ಶುದ್ಧಾಚಾರದ ಪ್ರಕಾರ ಅಲ್ಲಿ ಕಲ್ಲಿನ ಆರು ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಡದ ಅಳತೆಯುಳ್ಳದ್ದಾಗಿತ್ತು.


ಅವರ ಪ್ರಾಣವು ಎಲ್ಲಾ ಆಹಾರಕ್ಕೂ ಅಸಹ್ಯಪಡುವಷ್ಟು ಅಸ್ವಸ್ಥರಾಗುತ್ತಾರೆ. ಅವರು ಮರಣದ ಬಾಗಿಲುಗಳಿಗೆ ಸಮೀಪಿಸುತ್ತಾರೆ.


ಯೆಹೋವ ದೇವರು ಕಾಯಿನನನ್ನು, “ನಿನ್ನ ತಮ್ಮ ಹೇಬೆಲನು ಎಲ್ಲಿ?” ಎಂದು ಕೇಳಲು, ಅವನು, “ನಾನರಿಯೆ. ನಾನು ನನ್ನ ತಮ್ಮನನ್ನು ಕಾಯುವವನೋ?” ಎಂದು ಉತ್ತರಕೊಟ್ಟನು.


ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.


ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ನಾಬೋತನ ರಕ್ತವನ್ನೂ, ಅವನ ಪುತ್ರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ, ಎಂದು ಯೆಹೋವ ದೇವರು ಹೇಳುತ್ತಾರೆ. ಇದಲ್ಲದೆ ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರ ಎತ್ತಿಕೊಂಡು ಆ ಹೊಲದಲ್ಲಿ ಅವನನ್ನು ಹಾಕಿಬಿಡು,” ಎಂದನು.


ಹಾಗೆಯೇ ಅರಸನಾದ ಯೋವಾಷನು, ಇವನ ತಂದೆಯಾದ ಯೆಹೋಯಾದಾವನು ತನಗೆ ತೋರಿಸಿದ ದಯೆಯನ್ನು ಜ್ಞಾಪಕಮಾಡದೆ ಅವನ ಮಗನನ್ನು ಕೊಂದುಹಾಕಿದನು. ಜೆಕರ್ಯನು ಸಾಯುವಾಗ, “ಯೆಹೋವ ದೇವರು ನೋಡಿ ವಿಚಾರಿಸಲಿ,” ಎಂದು ಹೇಳಿದನು.


ಯೆಹೋವ ದೇವರೇ, ಎದ್ದೇಳಿರಿ! ದೇವರೇ, ನಿಮ್ಮ ಕೈ ಎತ್ತಿರಿ. ನಿಸ್ಸಹಾಯಕರನ್ನು ಮರೆಯಬೇಡಿರಿ.


ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು. ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು