ಕೀರ್ತನೆಗಳು 9:14 - ಕನ್ನಡ ಸಮಕಾಲಿಕ ಅನುವಾದ14 ಆಗ ಚೀಯೋನೆಂಬ ನಗರ ದ್ವಾರಗಳಲ್ಲಿ ನಿಮ್ಮ ಸ್ತುತಿಯನ್ನು ಸಾರುವೆನು. ನಿಮ್ಮ ರಕ್ಷಣೆಯಲ್ಲಿ ಆನಂದಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಲುಗಳಲ್ಲಿ ಹರ್ಷಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು. ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು. ಅಧ್ಯಾಯವನ್ನು ನೋಡಿ |