Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:15 - ಕನ್ನಡ ಸಮಕಾಲಿಕ ಅನುವಾದ

15 ರಾಷ್ಟ್ರಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲೇ ಅವರ ಕಾಲುಗಳು ಸಿಕ್ಕಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬಿದ್ದರು ಹೊರನಾಡಿಗರು ತಾವು ತೋಡಿದ ಗುಣಿಯಲೆ I ಸಿಕ್ಕಿಕೊಂಡಿತವರ ಕಾಲು ಅವರೊಡ್ಡಿದ ಬಲೆಯಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದುಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅನ್ಯಜನಾಂಗಗಳವರು ತಾವು ತೋಡಿದ ಕುಣಿಗಳಲ್ಲಿ ತಾವೇ ಬಿದ್ದುಹೋಗುವರು; ತಾವು ಹಾಸಿದ ಬಲೆಗಳಲ್ಲಿ ತಾವೇ ಸಿಕ್ಕಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:15
11 ತಿಳಿವುಗಳ ಹೋಲಿಕೆ  

ಶತ್ರುಗಳು ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದಿದ್ದಾರೆ. ಅದರಲ್ಲಿ ತಾವೇ ಬಿದ್ದುಹೋದರು.


ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ.


ನಾಶವು ಅವರಿಗೆ ಅನಿರೀಕ್ಷಿತವಾಗಿ ಬರಲಿ; ಅವರು ಅಡಗಿಸಿಟ್ಟ ಬಲೆಯು ಅವರನ್ನೇ ಹಿಡಿಯಲಿ; ವಿನಾಶನಕ್ಕಾಗಿ ಅವರು ಗುಂಡಿಯಲ್ಲಿ ಬೀಳಲಿ.


ಕೆಟ್ಟತನವನ್ನು ಬಿತ್ತುವವನು ಕೇಡನ್ನು ಕೊಯ್ಯುವನು; ಅವನ ಕೋಪದ ಬೆತ್ತವು ಮುರಿದು ಹೋಗುವುದು.


ವೈರಿಯ ಅಪರಾಧವು ಅವರ ಮೇಲೆಯೇ ತಿರುಗಿ ಬೀಳಲಿ; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಯೆಹೋವ ದೇವರು ಅವರನ್ನು ಸಂಹರಿಸಿ ಬಿಡುವನು.


ಆದರೆ ಅವರ ಖಡ್ಗ ಅವರ ಹೃದಯದಲ್ಲಿ ಇರಿದು ಬಿಡುವುದು; ಅವರ ಬಿಲ್ಲುಗಳು ಮುರಿದುಹೋಗುವವು.


ನಾನು ಯೆಹೋವ ದೇವರಿಗೆ ಸ್ತುತಿ ಹಾಡುವೆನು, ಏಕೆಂದರೆ ಅವರು ನನಗೆ ಒಳ್ಳೆಯವರಾಗಿದ್ದಾರೆ.


ಈಗ ನಾನು ಇದನ್ನು ಬಲ್ಲೆನು: ಯೆಹೋವ ದೇವರು ತಮ್ಮ ಅಭಿಷಿಕ್ತನಿಗೆ ಜಯ ನೀಡುವರು. ತಮ್ಮ ಜಯದ ಬಲಗೈಯ ಶಕ್ತಿಯಿಂದಲೂ ತಮ್ಮ ಪರಿಶುದ್ಧ ಪರಲೋಕದಿಂದಲೂ ಅವನಿಗೆ ಉತ್ತರಕೊಡುವರು.


ಆಗ ನನ್ನ ಪ್ರಾಣವು ಯೆಹೋವ ದೇವರಲ್ಲಿ ಉಲ್ಲಾಸಗೊಂಡು, ದೇವರ ರಕ್ಷಣೆಯಲ್ಲಿ ಸಂತೋಷಿಸುವುದು.


ಧನ್ಯವಾದ ಬಲಿಗಳನ್ನು ಅರ್ಪಿಸಿ, ದೇವರ ಕೆಲಸಗಳನ್ನು ಉತ್ಸಾಹದಿಂದ ಸಾರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು