Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:4 - ಕನ್ನಡ ಸಮಕಾಲಿಕ ಅನುವಾದ

4 ನೀವು ನನ್ನ ನ್ಯಾಯವನ್ನೂ ವ್ಯಾಜ್ಯವನ್ನೂ ತೀರಿಸಲು ನೀತಿಯುಳ್ಳ ನ್ಯಾಯಾಧಿಪತಿಯಾಗಿ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನ್ಯಾಯಪೀಠದಲಿ ಕುಳಿತೆನ್ನ ವ್ಯಾಜ್ಯ ತೀರಿಸಿದೆ I ನೀತಿಗನುಸಾರವಾಗಿ ನ್ಯಾಯ ಸ್ಥಾಪಿಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ನೀತಿವಂತನಾದ ನ್ಯಾಯಾಧಿಪತಿ. ಸಿಂಹಾಸನದ ಮೇಲೆ ಕುಳಿತು ನೀನು ನ್ಯಾಯತೀರಿಸುವೆ. ನೀನು ನನ್ನ ಮೊಕದ್ದಮೆಯನ್ನು ಕೇಳಿ ನನ್ನ ವಿಷಯದಲ್ಲಿ ತೀರ್ಪು ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:4
10 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಬಡವನಿಗೆ ವ್ಯಾಜ್ಯವನ್ನು, ಬಲಹೀನರಿಗೆ ನ್ಯಾಯವನ್ನೂ ತೀರಿಸುವರೆಂದೂ ನಾನು ಬಲ್ಲೆನು.


ಬೈಯ್ಯುವವರನ್ನು ಅವರು ಪ್ರತಿಯಾಗಿ ಬೈಯಲಿಲ್ಲ. ಅವರು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವ ತಂದೆಗೆ ತಮ್ಮನ್ನು ಒಪ್ಪಿಸಿದರು.


ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು.


ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅವರು ಲೋಕಕ್ಕೆ ನೀತಿಗನುಸಾರವಾಗಿಯೂ ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು.


ನೀತಿಯೂ, ನ್ಯಾಯವೂ ನಿಮ್ಮ ಸಿಂಹಾಸನದ ಅಸ್ತಿವಾರವಾಗಿವೆ. ಪ್ರೀತಿಯೂ, ಸತ್ಯತೆಯೂ ನಿಮ್ಮ ಮುಂದೆ ಹೋಗುತ್ತವೆ.


ದೇವರು ಜನಾಂಗಗಳನ್ನು ಆಳುತ್ತಾರೆ. ದೇವರು ತಮ್ಮ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾರೆ.


ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ, ಏಕೆಂದರೆ ಅವರು ಲೋಕಕ್ಕೆ ನೀತಿಯಿಂದಲೂ; ಜನರಿಗೆ ತಮ್ಮ ಸತ್ಯದಿಂದಲೂ ನ್ಯಾಯತೀರಿಸಲು ಬರುತ್ತಾರೆ.


ಯೆಹೋವ ದೇವರೇ, ನೀವೇ ನನ್ನ ಪಾಲೂ, ನನ್ನ ಪಾತ್ರೆಯೂ ಆಗಿದ್ದೀರಿ; ನನ್ನ ಸ್ವಾಸ್ತ್ಯವನ್ನು ಸುರಕ್ಷಿತವಾಗಿ ಇಡುವವರು ನೀವೇ.


ನೀವು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ, ಅವರಿಗೆ ನ್ಯಾಯವನ್ನು ತೀರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು