ಕೀರ್ತನೆಗಳು 9:5 - ಕನ್ನಡ ಸಮಕಾಲಿಕ ಅನುವಾದ5 ರಾಷ್ಟ್ರಗಳನ್ನು ಖಂಡಿಸಿ ದುಷ್ಟರನ್ನು ದಂಡಿಸಿದ್ದೀರಿ; ಅವರ ಹೆಸರನ್ನು ಯುಗಯುಗಾಂತರಗಳವರೆಗೂ ಅಳಿಸಿಬಿಟ್ಟಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಭ್ರಷ್ಟರನು ದಂಡಿಸಿದೆ, ರಾಷ್ಟ್ರಗಳನು ಖಂಡಿಸಿದೆ I ಎಂದೆಂದೂ ಹೆಸರಿಲ್ಲದಂತೆ ಅವರನು ಅಳಿಸಿಹಾಕಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀನು ಜನಾಂಗಗಳನ್ನು ಭಂಗಿಸಿ ದುಷ್ಟರನ್ನು ನಾಶಮಾಡಿದ್ದೀ; ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದೀ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀನು ಜನಾಂಗಗಳನ್ನು ಟೀಕಿಸಿ ಆ ದುಷ್ಟರನ್ನು ನಾಶಮಾಡಿದೆ. ನೀನು ಅವರ ಹೆಸರುಗಳನ್ನು ಜೀವಿತರ ಪಟ್ಟಿಯಿಂದ ಶಾಶ್ವತವಾಗಿ ಅಳಿಸಿಹಾಕಿರುವೆ. ಅಧ್ಯಾಯವನ್ನು ನೋಡಿ |
ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ, “ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ, ತನ್ನ ಸೇವಕನನ್ನು ಕೇಡು ಮಾಡಗೊಡದ ಹಾಗೆ ತಡೆದ ಯೆಹೋವ ದೇವರು ಸ್ತುತಿಹೊಂದಲಿ. ಏಕೆಂದರೆ ಯೆಹೋವ ದೇವರು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದರು,” ಎಂದನು. ದಾವೀದನು ಅಬೀಗೈಲಳನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ಅವಳ ಸಂಗಡ ಮಾತನಾಡಲು ಸೇವಕರನ್ನು ಕಳುಹಿಸಿದನು.