Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:3 - ಕನ್ನಡ ಸಮಕಾಲಿಕ ಅನುವಾದ

3 ನೀವು ಮನುಷ್ಯರನ್ನು ಪುನಃ ಮಣ್ಣಿಗೆ ಸೇರಿಸುತ್ತೀರಿ. “ಮನುಷ್ಯ ಪುತ್ರರೇ, ಮಣ್ಣಿಗೆ ಮರಳಿರಿ,” ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ, ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ I ‘ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ’ ಎನ್ನುತಿಹೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮನುಷ್ಯರೇ, ಸಾಯಿರಿ ಎಂದು ಆಜ್ಞಾಪಿಸಿ ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರಿಗೆ ಜನ್ಮನೀಡುವಾತನೂ ನೀನೇ; ಅವರನ್ನು ಮತ್ತೆ ಧೂಳನ್ನಾಗಿ ಮಾಡುವಾತನೂ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:3
8 ತಿಳಿವುಗಳ ಹೋಲಿಕೆ  

ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.


ಅವರ ಶ್ವಾಸವು ಹೋಗಲು ಮಣ್ಣಿಗೆ ಸೇರುತ್ತಾರೆ, ಅದೇ ದಿವಸದಲ್ಲಿ ಅವರ ಆಲೋಚನೆಗಳೆಲ್ಲಾ ನಾಶವಾಗುತ್ತವೆ.


ನೀವು ನಿಮ್ಮ ಮುಖವನ್ನು ಮರೆಮಾಡಲು, ಅವು ಹೆದರುತ್ತವೆ. ನೀವು ಅವುಗಳ ಶ್ವಾಸವನ್ನು ತೆಗೆದುಬಿಡಲು, ಸತ್ತು ಹೋಗಿ, ಮಣ್ಣುಪಾಲಾಗುತ್ತವೆ.


ದೇವರ ಕೈಯಲ್ಲಿ ಎಲ್ಲಾ ಜೀವಿಗಳ ಪ್ರಾಣವೂ ಎಲ್ಲಾ ಮನುಷ್ಯರ ಶ್ವಾಸವೂ ಇವೆ.


ಯೆಹೋವ ದೇವರಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಸೇರಿರುವ ಈ ದುಷ್ಟ ಸಭೆಗೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಮರುಭೂಮಿಯಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು