Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:8 - ಕನ್ನಡ ಸಮಕಾಲಿಕ ಅನುವಾದ

8 ನಮ್ಮ ಅಕ್ರಮಗಳನ್ನು ನಿಮ್ಮ ಮುಂದೆ ಇಟ್ಟಿದ್ದೀರಿ. ನಾವು ಮುಚ್ಚಿಟ್ಟುಕೊಂಡಿರುವ ಪಾಪಗಳು ನಿಮ್ಮ ಸನ್ನಿಧಿಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿನ್ನ ನೋಟಕೆ ಮರೆಯಾಗಿಲ್ಲ ನಮ್ಮ ಪಾಪದೋಷಗಳು I ನಿನ್ನ ಮುಖಕಾಂತಿಗೆ ಬಟ್ಟಬಯಲಾಗಿವೆ ಗುಪ್ತಾಪರಾಧಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಮ್ಮ ಪಾಪಗಳೆಲ್ಲಾ ನಿನಗೆ ತಿಳಿದಿವೆ. ದೇವರೇ, ನಮ್ಮ ರಹಸ್ಯಪಾಪಗಳೆಲ್ಲಾ ನಿನ್ನ ಮುಂದೆ ಬಟ್ಟಬಯಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:8
23 ತಿಳಿವುಗಳ ಹೋಲಿಕೆ  

ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಇವೆ. ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ, ಅವರ ಅಕ್ರಮವು ನನ್ನ ದೃಷ್ಟಿಗೆ ಅಡಗಿರುವುದಿಲ್ಲ.


ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ, ದೇವರು ಆ ಎಲ್ಲಾ ಕಾರ್ಯಗಳನ್ನೂ ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಏಕೆಂದರೆ ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸುವಾಗಲೆಲ್ಲಾ, ನಮ್ಮ ಹೃದಯಕ್ಕಿಂತ ದೇವರು ದೊಡ್ಡವರಾಗಿದ್ದಾರೆಂತಲೂ ದೇವರು ಎಲ್ಲವನ್ನೂ ಬಲ್ಲವರಾಗಿದ್ದಾರೆಂತಲೂ ತಿಳಿದುಕೊಳ್ಳಿರಿ.


“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.


ಆಗ ದೇವರು ನನಗೆ, “ಮನುಷ್ಯಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವ ದೇವರು ನಾಡನ್ನು ತೊರೆದುಬಿಟ್ಟಿದ್ದಾರೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ನಿನ್ನ ಮಾರ್ಗಗಳು ಯೆಹೋವ ದೇವರ ಮುಂದೆಯೇ ಇವೆ. ಅವರು ನಿನ್ನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾರೆ.


ನಿಮ್ಮ ದ್ರಾಕ್ಷಿಬಳ್ಳಿ ಕಡಿದು ಬೆಂಕಿಯಿಂದ ಸುಡಲಾಗಿದೆ. ನೀವು ಖಂಡಿಸಲು ನಿಮ್ಮ ಜನರು ಬಾಧಿತರಾಗಿ ಹೋಗುವರು.


ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.


“ಏಕೆಂದರೆ ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಇರುತ್ತದೆ; ದೇವರು ಮನುಷ್ಯನ ಪ್ರತಿಯೊಂದು ಹೆಜ್ಜೆಯನ್ನೂ ನೋಡುತ್ತಾರೆ.


ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದುಬಂದರೆ, ಅವನು ಬಲಿಗಾಗಿ ಹೋತಗಳಲ್ಲಿ ಕಳಂಕರಹಿತವಾದ ಒಂದು ಹೋತವನ್ನು ತಂದು ಸಮರ್ಪಿಸಬೇಕು.


ಇಲ್ಲವೆ ಅವರು ಮಾಡಿದ ಪಾಪವು ಅವರಿಗೆ ತಿಳಿದುಬಂದರೆ, ಅವರು ಪಾಪ ಪರಿಹಾರಕ್ಕಾಗಿ ಕಳಂಕರಹಿತವಾದ ಒಂದು ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.


ಅದೇನೆಂದರೆ, ನಾನು ಒಂದು ವೇಳೆ ಪಾಪಮಾಡಿದರೆ, ನೀವು ಅದನ್ನು ಕಂಡುಹಿಡಿದು ನನ್ನ ಅಪರಾಧಕ್ಕಾಗಿ ನನ್ನನ್ನು ದಂಡಿಸದೇ ಬಿಡುವುದಿಲ್ಲ ಎಂಬುದೇ.


ಅವು ಯಾವಾಗಲೂ ಯೆಹೋವ ದೇವರ ಮುಂದೆ ಇರಲಿ; ದೇವರು ಅವರ ನೆನಪನ್ನು ಭೂಮಿಯೊಳಗಿಂದ ತೆಗೆದುಬಿಡಲಿ.


ನೀನು ಸಾಬೂನಿನಿಂದ ತೊಳೆದುಕೊಂಡರೂ, ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು