Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 91:15 - ಕನ್ನಡ ಸಮಕಾಲಿಕ ಅನುವಾದ

15 ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 91:15
31 ತಿಳಿವುಗಳ ಹೋಲಿಕೆ  

‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’


ಅವರು ಕರೆಯುವುದಕ್ಕಿಂತ ಮುಂಚೆ ನಾನು ಉತ್ತರಕೊಡುವೆನು. ಅವರು ಇನ್ನೂ ಮಾತನಾಡುತ್ತಿರುವಾಗಲೇ ನಾನು ಕೇಳುವೆನು.


ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ, ನೀವು ನನ್ನನ್ನು ಬದುಕಿಸಿ, ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿಮ್ಮ ಕೈಯನ್ನು ಚಾಚಿದ್ದೀರಿ; ನಿಮ್ಮ ಬಲಗೈಯಿಂದ ನನ್ನನ್ನು ರಕ್ಷಿಸಿದ್ದೀರಿ.


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀವು ನನ್ನೊಂದಿಗಿರುವುದರಿಂದ ನಾನು ಕೇಡಿಗೆ ಹೆದರೆನು; ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ ನನ್ನನ್ನು ಸಂತೈಸುತ್ತವೆ.


ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.


ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ನಿಮ್ಮ ಮನೆಗೆ ಚದುರಿಹೋಗಿ ನನ್ನನ್ನು ಒಬ್ಬಂಟಿಗನನ್ನಾಗಿ ಬಿಡುವ ಗಳಿಗೆ ಬರುತ್ತದೆ. ಹೌದು, ಈಗಲೇ ಬಂದಿದೆ. ಆದರೂ ನಾನು ಒಬ್ಬಂಟಿಗನಲ್ಲ. ಏಕೆಂದರೆ ತಂದೆ ನನ್ನ ಸಂಗಡ ಇದ್ದಾರೆ.


ಯೆಹೋವ ದೇವರು ಅವರಿಗೆ ಸಹಾಯಮಾಡಿ ಅವರನ್ನು ಬಿಡಿಸುವರು. ದುಷ್ಟರಿಂದ ಅವರನ್ನು ತಪ್ಪಿಸಿ ಬಿಡಿಸುವರು. ಏಕೆಂದರೆ ಅವರು ದೇವರಲ್ಲಿ ಆಶ್ರಯ ಪಡೆದಿದ್ದಾರೆ.


ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಆಗ ನೀನು ಕರೆದರೆ ಯೆಹೋವ ದೇವರು ಉತ್ತರಕೊಡುವರು. ನೀನು ಕೂಗುವೆ, ಆಗ ಅವರು, ‘ನಾನು ಇಲ್ಲಿ ಇದ್ದೇನೆ,’ ಅನ್ನುವರು. “ನೀನು ನಿನ್ನ ಮಧ್ಯದೊಳಗಿಂದ ದಬ್ಬಾಳಿಕೆಯ ನೊಗವನ್ನೂ, ಬೆರಳ ಸನ್ನೆಯನ್ನೂ, ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,


ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?


“ನಾನು ನೀತಿವಂತನೂ, ನಿರ್ದೋಷಿಯಾದರೂ ಗೆಳೆಯರ ಗೇಲಿ ಪರಿಹಾಸ್ಯಕ್ಕೆ ಗುರಿಯಾದೆನು; ನಾನು ದೇವರಿಗೆ ಪ್ರಾರ್ಥಿಸಿದೆ; ದೇವರು ನನಗೆ ಉತ್ತರಕೊಟ್ಟರು;


ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ, ನಿಮ್ಮ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿದವು, ಭೂಲೋಕದ ಅಸ್ತಿವಾರಗಳು ಬಯಲಾದವು.


ದೇವರು ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವರು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು