Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:13 - ಕನ್ನಡ ಸಮಕಾಲಿಕ ಅನುವಾದ

13 ಅವರು ಯೆಹೋವ ದೇವರ ಆಲಯದಲ್ಲಿ ನೆಟ್ಟ ಸಸಿಗಳಂತಿರುವರು. ನಮ್ಮ ದೇವರ ಅಂಗಳಗಳಲ್ಲಿ ಅವರು ವೃದ್ಧಿ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13-14 ಅವರಿರುವರು ಪ್ರಭುವಿನಾಲಯದಲೆ ನೆಟ್ಟ ಸಸಿಗಳಂತೆ I ನಮ್ಮ ದೇವಾಂಗಳದಿ ಹುಲುಸಾಗಿ ಬೆಳೆವ ಮರಗಳಂತೆ I ಫಲಿಸುವರು ಮುಪ್ಪಿನಲೂ, ಶೋಭಿಸುವರು ಪಚ್ಚೆಪಸಿರಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನ ಆಲಯದಲ್ಲಿ [ಸಸಿಗಳಂತೆ] ನೆಡಲ್ಪಟ್ಟವರು ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:13
14 ತಿಳಿವುಗಳ ಹೋಲಿಕೆ  

ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು


ನಾವು ಕ್ರಿಸ್ತ ಯೇಸುವಿನೊಂದಿಗೆ ಸೇರಿ ಅವರ ಮರಣದಲ್ಲಿ ಪಾಲುಗಾರರಾದರೆ, ಅವರ ಪುನರುತ್ಥಾನದಲ್ಲಿಯೂ ಪಾಲುಗಾರರಾಗುವೆವು.


ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ, ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ; ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


ಯೆಹೋವ ದೇವರ ಆಲಯದ ಅಂಗಳಗಳಲ್ಲಿ ಯೆರೂಸಲೇಮ ಮಧ್ಯದಲ್ಲಿಯೇ ಯೆಹೋವ ದೇವರಿಗೆ ಸಲ್ಲಿಸುವೆನು. ಯೆಹೋವ ದೇವರನ್ನು ಸ್ತುತಿಸಿರಿ.


ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವ ಯೆಹೋವ ದೇವರ ಸೇವಕರೇ, ಸ್ತುತಿಸಿರಿ.


ಯಾಜಕರ ಅಂಗಳವನ್ನೂ, ದೊಡ್ಡ ಅಂಗಳವನ್ನೂ, ಅಂಗಳಗಳಿಗೋಸ್ಕರ ಬಾಗಿಲುಗಳನ್ನೂ ಮಾಡಿಸಿ, ಆ ಬಾಗಿಲುಗಳನ್ನು ಕಂಚಿನಿಂದ ಹೊದಿಸಿದನು.


ಕೆಲವು ಕೊಂಬೆಗಳು ಮುರಿದುಹೋಗಿರುವುದಾದರೆ, ಕಾಡು ಓಲಿವ್ ಮರದಂತಿರುವ ನೀನು ಅವುಗಳ ನಡುವೆ ಕಸಿಮಾಡಿ ಉತ್ತಮ ಓಲಿವ್ ಮರದ ರಸವತ್ತಾದ ಬೇರಿನಲ್ಲಿ ಪಾಲುಹೊಂದಿರಲಾಗಿ,


ಏಕೆಂದರೆ ಮೊರ್ದೆಕೈ ಅರಮನೆಯಲ್ಲಿ ಪ್ರಮುಖನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತಗಳಿಗೂ ಹರಡಿತು. ಈ ಮೊರ್ದೆಕೈ ಅಧಿಕವಾಗಿ ಅಧಿಕಾರವಂತನಾದನು.


ನನ್ನ ವಧುವೇ, ನಿನ್ನ ತುಟಿಗಳಿಂದ ಜೇನು ಸುರಿಯುತ್ತಿದೆ. ಹಾಲೂ, ಜೇನೂ ನಿನ್ನ ನಾಲಿಗೆ ಅಡಿಯಲ್ಲಿವೆ. ನಿನ್ನ ವಸ್ತ್ರಗಳ ಸುವಾಸನೆಯು ಲೆಬನೋನಿನ ಸುಗಂಧದಂತಿದೆ.


ಅವನ ಕಾಲುಗಳು ಶುದ್ಧ ಬಂಗಾರದ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ತೋರಿಕೆಯು ಲೆಬನೋನಿನ ದೇವದಾರುಗಳ ಹಾಗೆ ಶ್ರೇಷ್ಠವಾಗಿವೆ.


ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು. ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಆಳಕ್ಕೆ ಹರಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು