Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 93:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ. ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ. ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಮಹಿಮಾವಸ್ತ್ರವನ್ನು ಧರಿಸಿದ್ದಾನೆ, ಧರಿಸಿದ್ದಾನೆ. ಶೌರ್ಯವನ್ನು ನಡುಕಟ್ಟಾಗಿ ಬಿಗಿದಿದ್ದಾನೆ; ಭೂಲೋಕವು ಸ್ಥಿರವಾಗಿರುವದು, ಕದಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 93:1
30 ತಿಳಿವುಗಳ ಹೋಲಿಕೆ  

“ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಆದ್ದರಿಂದ ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ; ಅವರು ಜನರಿಗೆ ನೀತಿಯಲ್ಲಿ ನ್ಯಾಯತೀರಿಸುತ್ತಾರೆ,” ಎಂದು ಎಲ್ಲಾ ಜನಾಂಗಗಳಲ್ಲಿ ಹೇಳಿರಿ.


ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ.


ಐಶ್ವರ್ಯವೂ, ಘನವೂ ನಿಮ್ಮ ಬಳಿಯಿಂದ ಬರುತ್ತವೆ. ನೀವು ಸಮಸ್ತವನ್ನು ಆಳಿಕೆಮಾಡುವವರು. ಶಕ್ತಿಯೂ, ಪರಾಕ್ರಮವೂ ನಿಮ್ಮ ಕೈಯಲ್ಲಿ ಇವೆ. ಎಲ್ಲರಿಗೂ ಉನ್ನತಿಯನ್ನೂ, ಬಲವನ್ನೂ ಕೊಡುವುದು ನಿಮ್ಮ ಕೈಯಲ್ಲಿ ಇದೆ.


ತರುವಾಯ ಜನರ ದೊಡ್ಡ ಗುಂಪಿನ ಶಬ್ದವನ್ನು ಕೇಳಿದೆನು. ಅದು ಹೀಗೆ ಹೇಳಿತು: “ಹಲ್ಲೆಲೂಯಾ! ಸರ್ವಶಕ್ತ ಆಗಿರುವ ನಮ್ಮ ಕರ್ತದೇವರು ಆಳುತ್ತಾರೆ.


ಯೆಹೋವ ದೇವರು ಪರಲೋಕದಲ್ಲಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ, ಅವರ ಸಾಮ್ರಾಜ್ಯದ ಆಳಿಕೆಯು ಎಲ್ಲರ ಮೇಲೆ ಇರುವುದು.


ಬೆಟ್ಟಗಳನ್ನು ನಿಮ್ಮ ಶಕ್ತಿಯಿಂದ ರೂಪಿಸಿದವರು ನೀವೇ. ಜಲದಿಂದ ನಡು ಕಟ್ಟಿಕೊಂಡಿರುವವರೂ ನೀವೇ.


ಆಕಾಶಗಳನ್ನು ನಿರ್ಮಿಸಿದ ಯೆಹೋವ ದೇವರು ಇಂತೆನ್ನುತ್ತಾನೆ, “ದೇವರು ತಾನೇ ಭೂಮಿಯನ್ನು ನಿರ್ಮಿಸಿ, ಅದನ್ನು ಉಂಟುಮಾಡಿದನು. ಆತನೇ ಅದನ್ನು ಸ್ಥಾಪಿಸಿದನು. ಅದನ್ನು ವ್ಯರ್ಥವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದನು. ನಾನೇ ಯೆಹೋವ ದೇವರು, ನಾನಲ್ಲದೆ ಇನ್ನಾರೂ ಇಲ್ಲ.


ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನುಷ್ಯನನ್ನು ಸೃಷ್ಟಿಸಿದೆನು. ನಾನೇ, ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು. ನಾನು ಅದರ ನಕ್ಷತ್ರಸೈನ್ಯಕ್ಕೆಲ್ಲಾ ಅಪ್ಪಣೆಕೊಟ್ಟೆನು.


ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ.


ಅವರು ದಂಡನೆಗೆ ತುತ್ತಾಗಲಿ. ಅವರು ನಿರ್ನಾಮವಾಗಿಬಿಡಲಿ. ಆಗ ಯಾಕೋಬರನ್ನು ಆಳುವವರು ದೇವರೇ ಎಂಬುದು ಇಡೀ ಲೋಕಕ್ಕೇ ಗೊತ್ತಾಗಲಿ.


ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ.


ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು. ಪ್ರತೀಕಾರದ ವಸ್ತ್ರಗಳನ್ನು ಹೊದಿಕೆಯಾಗಿ ಹೊದ್ದುಕೊಂಡು, ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.


ಯೆಹೋವ ದೇವರು ಹೇಳುವುದೇನೆಂದರೆ: “ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡಿ, ಭೂಮಿಯನ್ನು ಸ್ಥಾಪಿಸುವುದಕ್ಕೂ, ಹಾಳಾಗಿರುವ ಸ್ಥಳಗಳನ್ನು ಸೊತ್ತಾಗಿ ಹೊಂದುವುದಕ್ಕೂ, ಜನರ ಒಡಂಬಡಿಕೆಯನ್ನಾಗಿಯೂ ನೇಮಿಸಿದ್ದೇನೆ.


ನೀತಿಯೇ ಅವರಿಗೆ ನಡುಕಟ್ಟು, ನಂಬಿಗಸ್ತಿಕೆಯೇ ಅವರ ಸೊಂಟದ ಪಟ್ಟಿ.


ನಿಮ್ಮ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿಮ್ಮ ಅಧಿಪತ್ಯವು ಎಲ್ಲಾ ತಲತಲಾಂತರಗಳಲ್ಲಿ ಇರುವುದು. ಯೆಹೋವ ದೇವರು ತಮ್ಮ ಎಲ್ಲಾ ಪ್ರತಿಜ್ಞೆಗಳಲ್ಲಿ ನಂಬಿಗಸ್ತರಾಗಿರುತ್ತಾರೆ. ಎಲ್ಲಾ ಕಾರ್ಯಗಳಲ್ಲಿಯೂ ಅವರ ಅನುಗ್ರಹ ಉಳಿದಿದೆ.


ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ, ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ.


ಹಾಗಾದರೆ, ಮಹಿಮೆ ಘನತೆಗಳಿಂದ ನಿನ್ನನ್ನು ಅಲಂಕರಿಸಿಕೋ; ನೀನು ಗೌರವ ಪ್ರಭಾವಗಳನ್ನೂ ಧರಿಸಿಕೋ.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರವನ್ನು ತೊಟ್ಟುಕೊಂಡವನಾಗಿ, ತನ್ನ ಮಹಾ ಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? “ನೀತಿಯನ್ನು ಘೋಷಿಸುವವನೂ, ರಕ್ಷಿಸಲು ಬಲಿಷ್ಠನೂ ನಾನೇ.”


ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಒಳ್ಳೆಯ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!


ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?


ಭೂಮಿಯೂ ಅದರ ನಿವಾಸಿಗಳೆಲ್ಲರೂ ಬೆರಗಾಗಿದ್ದಾರೆ. ನಾನು ಅದರ ಸ್ತಂಭಗಳನ್ನು ನಿಲ್ಲಿಸಿದ್ದೇನೆ.


ಆಕಾಶಗಳನ್ನು ನೆಡುವುದಕ್ಕೂ, ಭೂಮಿಯ ಅಸ್ತಿವಾರವನ್ನು ಹಾಕುವುದಕ್ಕೂ, ಚೀಯೋನಿಗೆ ನೀನು ನನ್ನ ಜನರೆಂದು ಹೇಳುವುದಕ್ಕೂ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು, ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.”


ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ. ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ.


ಆಕಾಶವು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ. ಯೆಹೋವ ದೇವರು ಆಳುತ್ತಾರೆಂದು ಜನಾಂಗಗಳಲ್ಲಿ ಹೇಳಲಿ.


ಸಮುದ್ರಗಳ ಘೋಷವನ್ನೂ, ಅವುಗಳ ತೆರೆಗಳ ಘೋಷವನ್ನೂ, ಪ್ರಜೆಗಳ ಕೋಲಾಹಲವನ್ನೂ ಶಮನಗೊಳಿಸುವವರು ನೀವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು