Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 93:2 - ಕನ್ನಡ ಸಮಕಾಲಿಕ ಅನುವಾದ

2 ದೇವರೇ, ನಿಮ್ಮ ಸಿಂಹಾಸನವು ಪೂರ್ವಕಾಲದಿಂದ ಸ್ಥಿರವಾಗಿದೆ. ಯುಗಯುಗದಿಂದ ನೀವು ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಸಿಂಹಾಸನ ಸ್ಥಿರ ಆದಿಯಿಂದ I ನೀನಿರುವೆ ಪ್ರಭು ಅನಾದಿಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪೂರ್ವದಿಂದಲೂ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಅನಾದಿಯಿಂದ ನೀನು ಇದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ. ಆದಿಯಿಂದಲೂ ಇರುವಾತನು ನೀನೊಬ್ಬನೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 93:2
15 ತಿಳಿವುಗಳ ಹೋಲಿಕೆ  

ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನ್ಯಾಯದಂಡವೇ ನಿಮ್ಮ ರಾಜದಂಡವಾಗಿದೆ.


ಬೆಟ್ಟಗಳು ಹುಟ್ಟುವುದಕ್ಕಿಂತ ಮುಂಚೆಯೂ ನೀವು ಲೋಕವನ್ನೂ ನಿರ್ಮಿಸುವುದಕ್ಕಿಂತ ಮುಂಚೆಯೂ ಯುಗಯುಗಾಂತರಕ್ಕೂ ನೀವು ದೇವರಾಗಿದ್ದೀರಿ.


ಕ್ರಿಸ್ತ ಯೇಸುವು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾರೆ, ನಿರಂತರವೂ ಹಾಗೆಯೇ ಇರುವರು.


“ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ:


ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು.


“ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.


ನಿಮ್ಮ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿಮ್ಮ ಅಧಿಪತ್ಯವು ಎಲ್ಲಾ ತಲತಲಾಂತರಗಳಲ್ಲಿ ಇರುವುದು. ಯೆಹೋವ ದೇವರು ತಮ್ಮ ಎಲ್ಲಾ ಪ್ರತಿಜ್ಞೆಗಳಲ್ಲಿ ನಂಬಿಗಸ್ತರಾಗಿರುತ್ತಾರೆ. ಎಲ್ಲಾ ಕಾರ್ಯಗಳಲ್ಲಿಯೂ ಅವರ ಅನುಗ್ರಹ ಉಳಿದಿದೆ.


ನನ್ನ ಜೊತೆಗಾರನು ತನ್ನ ಸ್ನೇಹಿತನ ಮೇಲೆ ದಾಳಿಮಾಡಿದ್ದಾನೆ. ತಾನು ಮಾಡಿದ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.


“ನಾನು ನೋಡುತ್ತಿದ್ದ ಹಾಗೆಯೇ, “ಸಿಂಹಾಸನಗಳನ್ನು ಜೋಡಿಸಿದರು. ಅದರ ಮೇಲೆ ಪುರಾತನ ಮನುಷ್ಯನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ, ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ, ಆತನ ಸಿಂಹಾಸನವು ಅಗ್ನಿ ಜ್ವಾಲೆಯಂತೆಯೂ, ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು