Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:13 - ಕನ್ನಡ ಸಮಕಾಲಿಕ ಅನುವಾದ

13 ದುಷ್ಟನಿಗಾಗಿ ಕುಣಿಯು ಅಗಿಯುವವರೆಗೆ ಅಂಥವನಿಗೆ ವಿಶ್ರಾಂತಿಯನ್ನು ಕೊಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೆಮ್ಮದಿ ನೀಡುವೆ ಅವನು ಸಂಕಟದಲಿರುವಾಗ I ದುರುಳರಿಗೆ ನೀನು ಗುಂಡಿಯನು ತೋಡುವಾಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ಸಮಾಧಾನಪಡಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಪತ್ತಿನಲ್ಲಿಯೂ ಸಮಾಧಾನದಿಂದಿರಲು ನೀನು ಅವನಿಗೆ ಸಹಾಯಮಾಡುವೆ. ದುಷ್ಟರು ಸಮಾಧಿಗಳಿಗೆ ಸೇರುವವರೆಗೆ ಸಮಾಧಾನದಿಂದಿರಲು ನೀನು ಅವನಿಗೆ ನೆರವು ನೀಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:13
16 ತಿಳಿವುಗಳ ಹೋಲಿಕೆ  

ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.


ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.


ರಾಷ್ಟ್ರಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲೇ ಅವರ ಕಾಲುಗಳು ಸಿಕ್ಕಿಕೊಂಡಿವೆ.


ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ.


ನಾನು ಕೇಳಿದಾಗ ನನ್ನ ಹೃದಯ ಬಡಿದುಕೊಂಡಿತು; ಆ ಶಬ್ದಕ್ಕೆ ನನ್ನ ತುಟಿಗಳು ಕದಲಿದವು; ನನ್ನ ಎಲುಬುಗಳು ಕ್ಷಯಗೊಂಡವು; ನನ್ನ ಕಾಲುಗಳು ನಡುಗಿದವು; ಆದರೂ ನಮ್ಮ ಮೇಲೆ ದಾಳಿಮಾಡುವ ಜನರ ಮೇಲೆ ನಾಶನ ಬರುವುದನ್ನು ನೋಡಲು ತಾಳ್ಮೆಯಿಂದ ಕಾದಿರುವೆನು.


ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”


ಆದ್ದರಿಂದ ದೇವಜನರಿಗೆ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಇದೆ.


ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ, ಕೂಗು ಅವರ ಮನೆಗಳೊಳಗಿಂದ ಕೇಳ ಬರಲಿ. ಏಕೆಂದರೆ, ನನ್ನನ್ನು ಹಿಡಿಯುವುದಕ್ಕೆ ಕುಳಿ ಅಗೆದಿದ್ದಾರೆ. ನನ್ನ ಕಾಲುಗಳಿಗೆ ಉರುಲುಗಳನ್ನು ಒಡ್ಡಿದ್ದಾರೆ.


ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಏಕೆಂದರೆ, ಅವರು ನನ್ನ ಪ್ರಾಣಕ್ಕೆ ಕುಳಿಯನ್ನು ಅಗೆದಿದ್ದಾರೆ. ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವುದಕ್ಕೂ, ನಿನ್ನ ಉಗ್ರವನ್ನು ಅವರಿಂದ ತಿರುಗಿಸುವುದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.


ಕೇಡಿನ ದಿವಸಗಳಲ್ಲಿ ನನಗೆ ಒಳಸಂಚು ಮಾಡುವವರ ಅಕ್ರಮವು ನನ್ನನ್ನು ಸುತ್ತಿಕೊಳ್ಳುವಾಗ ನಾನು ಏಕೆ ಭಯಪಡಬೇಕು?


ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು