Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 94:16 - ಕನ್ನಡ ಸಮಕಾಲಿಕ ಅನುವಾದ

16 ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧವಾಗಿ ಏಳುವವನ್ಯಾರು? ಅಪರಾಧ ಮಾಡುವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನ್ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದುರುಳರಿಗೆದುರಾಗಿ ನನ್ನ ಪಕ್ಷ ವಹಿಸುವರಾರು? I ಕೆಡುಕರಿಗೆ ವಿರುದ್ಧ ನನ್ನ ಪರ ನಿಲ್ಲುವವರಾರು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದುಷ್ಟರಿಗೆ ವಿರೋಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರೋಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ. ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 94:16
19 ತಿಳಿವುಗಳ ಹೋಲಿಕೆ  

ಯೆಹೋವ ದೇವರ ದೂತನು ಹೀಗೆ ಹೇಳುತ್ತಾನೆ, ‘ನೀವು ಮೆರೋಜನ್ನು ಶಪಿಸಿರಿ. ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ, ಏಕೆಂದರೆ ಅವರು ಯೆಹೋವ ದೇವರ ಸಹಾಯಕ್ಕೂ, ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಯೆಹೋವ ದೇವರ ಸಹಾಯಕ್ಕೂ ಬಾರದೆ ಹೋದರು.’


ಆದ್ದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಉಪಚರಿಸಬೇಕು.


“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.


“ಗೋಡೆಯನ್ನು ಕಟ್ಟಿ ನಾಡನ್ನು ನಾನು ಹಾಳುಮಾಡದಂತೆ ನಾಡಿನ ಪರವಾಗಿ ಪೌಳಿಗೋಡೆಯ ಬಿರುಕಿನಲ್ಲಿ ನಿಲ್ಲುವ ಒಬ್ಬ ಮನುಷ್ಯನನ್ನು ಅವರೊಳಗೆ ನಾನು ಹುಡುಕಿದೆನು. ಆದರೆ ಯಾರೂ ಸಿಕ್ಕಲಿಲ್ಲ.


“ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ, ನ್ಯಾಯವನ್ನು ಮಾಡುವವನೂ, ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ, ತಿಳಿದು ಹುಡುಕಿರಿ; ಸಿಕ್ಕಿದರೆ ಅವಳಿಗೆ ಮನ್ನಿಸುವೆನು.


ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು. ಆಗ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನು ಉಂಟುಮಾಡಿತು. ನನ್ನ ಕೋಪವೇ ನನಗೆ ಆಧಾರವಾಯಿತು.


ಮಧ್ಯಸ್ಥಿಕನು ಒಬ್ಬನೂ ಇಲ್ಲವೆಂದು ಕಂಡು ಸ್ಥಬ್ಧನಾದನು. ಆದ್ದರಿಂದ ಆತನ ಸ್ವಹಸ್ತವೇ ಆತನಿಗೆ ರಕ್ಷಣೆಯ ಸಾಧನವಾಯಿತು. ಆತನ ನೀತಿಯೇ ಆತನಿಗೆ ಆಧಾರವಾಯಿತು.


ಕೆಡುಕನ್ನು ಮಾಡುವವರಿಂದ ನನ್ನನ್ನು ಬಿಡಿಸಿರಿ. ಕೊಲೆಪಾತಕರಿಂದ ನನ್ನನ್ನು ರಕ್ಷಿಸಿರಿ.


ಯೆಹೋವ ದೇವರೇ, ಎದ್ದು ಅವರನ್ನು ಎದುರಿಸಿ ಕೆಳಗೆ ಕೆಡವಿಬಿಡಿರಿ; ನಿಮ್ಮ ಖಡ್ಗದ ಮೂಲಕ ನನ್ನನ್ನು ದುಷ್ಟರಿಂದ ಕಾಪಾಡಿರಿ.


ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೇಷ್ಠರನ್ನೂ, ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೇ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ, ಅವರಿಗೆ ವಿರೋಧವಾಗಿ ಮಹಾ ಸಭೆಯನ್ನು ಕೂಡಿಸಿದೆ.


ಯೇಹುವು ಅಲ್ಲಿಂದ ಹೋಗಿ, ತನ್ನನ್ನು ಎದುರುಗೊಳ್ಳಲು ಬಂದ ರೇಕಾಬನ ಮಗ ಯೆಹೋನಾದಾಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ, “ನನ್ನ ಹೃದಯವು ನಿನ್ನ ಹೃದಯದ ಸಂಗಡ ಇರುವ ಹಾಗೆ ನಿನ್ನ ಹೃದಯವು ಯಥಾರ್ಥವಾಗಿ ಇದೆಯೋ?” ಎಂದನು. ಯೆಹೋನಾದಾಬನು, “ಇದೆ,” ಎಂದನು. “ಹಾಗಾದರೆ ನಿನ್ನ ಕೈ ಕೊಡು,” ಎಂದನು. ಇವನು ತನ್ನ ಕೈ ಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಹತ್ತಿಸಿಕೊಂಡು ಅವನಿಗೆ,


ಯೇಹುವು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ, “ನನ್ನ ಕಡೆ ಇರುವವರು ಯಾರು?” ಎಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿಯಲ್ಲಿಂದ ಅವನನ್ನು ನೋಡಿದರು.


ಇದಲ್ಲದೆ ಮಂಜೂಷವು ಹೊರಡುವಾಗ ಮೋಶೆಯು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಎದ್ದೇಳಿರಿ, ನಿಮ್ಮ ಶತ್ರುಗಳು ಚದರಿಹೋಗಲಿ. ನಿಮ್ಮನ್ನು ಹಗೆ ಮಾಡುವವರು ನಿಮ್ಮ ಎದುರಿನಿಂದ ಓಡಿಹೋಗಲಿ.”


ಯೆಹೋವ ದೇವರು ನನ್ನ ಪರವಾಗಿದ್ದಾರೆ, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು