Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 95:7 - ಕನ್ನಡ ಸಮಕಾಲಿಕ ಅನುವಾದ

7 ಅವರು ನಮ್ಮ ದೇವರು; ನಾವು ಅವರ ಹುಲ್ಲುಗಾವಲಿನ ಪ್ರಜೆಗಳಾಗಿದ್ದೇವೆ, ನಾವು ಅವರು ಪರಿಪಾಲಿಸುವ ಮಂದೆಯೂ ಆಗಿದ್ದೇವೆ. ನೀವು ಈ ಹೊತ್ತು ಅವರ ಸ್ವರಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆತನೆಮ್ಮ ದೇವರು, ನಾವು ಆತನ ಕೈಮಂದೆ I ಆತನಿಂದಲೇ ಪಾಲನೆಪೋಷಣೆ ಪಡೆದ ಜನತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಮ್ಮ ದೇವರು ಆತನೇ, ನಾವು ಆತನವರೇ. ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 95:7
28 ತಿಳಿವುಗಳ ಹೋಲಿಕೆ  

ದೇವರು “ಈ ಹೊತ್ತೇ” ಎಂದು ಬೇರೊಂದು ದಿವಸವನ್ನು ಗೊತ್ತು ಮಾಡುತ್ತಾರೆ. ಈ ದಿನವನ್ನು ಕುರಿತೇ ಬಹುಕಾಲದ ನಂತರ ದಾವೀದನ ಮೂಲಕ ಮೊದಲೇ ಹೀಗೆ ಹೇಳಿದ್ದಾರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”


ಈಗಲೇ ಹೇಳಿದಂತೆ: “ನೀವು ಈ ಹೊತ್ತು ದೇವರ ಸ್ವರವನ್ನು ಕೇಳಿದರೆ, ತಿರುಗಿಬಿದ್ದಾಗ ನಡೆದಂತೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.


ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು.


ಏಕೆಂದರೆ, “ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ.” ಆದರೆ ಈಗ ನೀವು ತಿರುಗಿ ನಿಮ್ಮ ಆತ್ಮಗಳ ಕುರುಬ ಹಾಗೂ ಸಭಾಧ್ಯಕ್ಷರೂ ಆಗಿರುವ ಕ್ರಿಸ್ತ ಯೇಸುವಿನ ಬಳಿಗೆ ಬಂದಿದ್ದೀರಿ.


ದೇವರೇ, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಟ್ಟದ್ದೇಕೆ? ನಿಮ್ಮ ಮೇವಿನ ಕುರಿಮಂದೆಯ ವಿಷಯವಾಗಿ ಬೇಸರಗೊಳ್ಳುವುದು ಏಕೆ?


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ಯೆಹೋವ ದೇವರು ನನ್ನ ಕುರುಬ ಆಗಿದ್ದಾರೆ, ನನಗೆ ಕೊರತೆಯೇ ಇಲ್ಲ.


ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ.


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


ನಮ್ಮ ದೇವರು ಪರಲೋಕದಲ್ಲಿದ್ದಾರೆ; ಅವರು ಇಚ್ಛಿಸುವುದನ್ನೆಲ್ಲಾ ಮಾಡುತ್ತಾರೆ.


ಆಗ ನಿಮ್ಮ ಜನರೂ, ನಿಮ್ಮ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿಮ್ಮನ್ನು ಕೊಂಡಾಡಿ, ತಲತಲಾಂತರಕ್ಕೂ ನಿಮ್ಮ ಸ್ತೋತ್ರವನ್ನು ಸಾರುವೆವು.


“ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ; ಅವರು ನನ್ನ ರಕ್ಷಣೆಯಾದರು; ಅವರು ನನ್ನ ದೇವರು, ಅವರನ್ನು ಕೊಂಡಾಡುವೆನು; ಅವರು ನನ್ನ ತಂದೆಯ ದೇವರು, ನಾನು ಅವರನ್ನು ಘನಪಡಿಸುವೆನು.


“ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಭೂಮಿಯು ತನ್ನ ಬೆಳೆಯನ್ನು ಕೊಡುವುದು. ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವರು.


ಕೇಳಿರಿ, ಉತ್ಕೃಷ್ಟ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯುವೆನು.


ಅವರೇ ನಮ್ಮ ದೇವರಾದ ಯೆಹೋವ ಆಗಿದ್ದಾರೆ. ಅವರ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಇವೆ.


ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆಯನ್ನೂ ನಿನ್ನ ಕೋಲಿನಿಂದ ಮೇಯಿಸು. ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು