ಕೀರ್ತನೆಗಳು 96:4 - ಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಏಕೆನೆ ಮಹಾತ್ಮನು ಪ್ರಭು, ಬಲು ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ದೊಡ್ಡವನೂ ಬಹಳವಾಗಿ ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಭಯಂಕರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನು ದೊಡ್ಡವನೂ ಸ್ತುತಿಗೆ ಯೋಗ್ಯನೂ ಆಗಿದ್ದಾನೆ. ಬೇರೆಲ್ಲ ದೇವರುಗಳಿಗಿಂತ ಆತನೇ ಭಯಂಕರನು. ಅಧ್ಯಾಯವನ್ನು ನೋಡಿ |
ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.