Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 98:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಏಕೆಂದರೆ ಅವರು ಅದ್ಭುತಗಳನ್ನು ಮಾಡಿದ್ದಾರೆ; ಅವರ ಬಲಗೈಯೂ, ಅವರ ಪರಿಶುದ್ಧ ಭುಜವು ಅವರಿಗೆ ಜಯವನ್ನು ತಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡಿಸಿದ್ದಾನೆ. ಆತನ ಬಲಗೈಯೂ ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಗೆ ಹೊಸಹಾಡನ್ನು ಹಾಡಿರಿ. ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ! ಆತನ ಬಲಗೈಯೂ ಪರಿಶುದ್ಧ ಬಾಹುವೂ ಆತನಿಗೆ ಜಯವನ್ನು ಉಂಟುಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 98:1
39 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನಿಮ್ಮ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳದ್ದಾಗಿದೆ; ಯೆಹೋವ ದೇವರೇ, ನಿಮ್ಮ ಬಲಗೈ ಶತ್ರುವನ್ನು ಜಜ್ಜಿ ಪುಡಿ ಮಾಡಿತು.


ಯೆಹೋವ ದೇವರು ತಮ್ಮ ಪವಿತ್ರ ಬಾಹುವನ್ನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತೋರಿಸಿಕೊಂಡಿದ್ದಾನೆ ಮತ್ತು ಭೂಮಿಯ ಅಂತ್ಯದವರೆಗೂ ನಮ್ಮ ದೇವರ ರಕ್ಷಣೆಯನ್ನು ಕಾಣುವರು.


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲಾದ ಆ ಒಂದು ಲಕ್ಷ ನಲವತ್ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಹಾಡಿರಿ.


ದೇವರಿಗೆ ಹೊಸಹಾಡನ್ನು ಹಾಡಿರಿ. ದೊಡ್ಡ ಶಬ್ದದಿಂದ ಇಂಪಾಗಿ ಹಾಡಿರಿ.


ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.


ಪರಾಕ್ರಮಿಯಾದ ದೇವರು ನನಗೆ ಮಹಾಕಾರ್ಯಗಳನ್ನು ಮಾಡಿದ್ದಾರೆ, ಅವರ ಹೆಸರು ಪವಿತ್ರವಾದದ್ದು.


ವಿಶ್ವಾಸದ್ರೋಹಿ ಇಸ್ರಾಯೇಲ್ ಮಗಳೇ ಎಷ್ಟರವರೆಗೆ ಅಡ್ಡಾಡುವೆ? ಏಕೆಂದರೆ ಯೆಹೋವ ದೇವರು ಭೂಮಿಯಲ್ಲಿ ಹೊಸದನ್ನು ಸೃಷ್ಟಿಸುತ್ತಾರೆ. ಹೆಂಗಸು ಗಂಡಸನ್ನು ಕಾಪಾಡುವಳು.”


ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು. ಆಗ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನು ಉಂಟುಮಾಡಿತು. ನನ್ನ ಕೋಪವೇ ನನಗೆ ಆಧಾರವಾಯಿತು.


ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರಮಾಡಿರಿ.


ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ, ಭಕ್ತರ ಸಭೆಯಲ್ಲಿ ದೇವರ ಸ್ತೋತ್ರವನ್ನೂ ಹಾಡಿರಿ.


ಯೆಹೋವ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ವೈಭವ ಹೊಂದಿದವರೂ, ಮಹಿಮೆಯಲ್ಲಿ ಅತಿಶಯರೂ, ಅದ್ಭುತಗಳನ್ನು ಮಾಡುವವರೂ ಆದ ನಿಮ್ಮ ಹಾಗೆ ಯಾರಿದ್ದಾರೆ?


ಮಧ್ಯಸ್ಥಿಕನು ಒಬ್ಬನೂ ಇಲ್ಲವೆಂದು ಕಂಡು ಸ್ಥಬ್ಧನಾದನು. ಆದ್ದರಿಂದ ಆತನ ಸ್ವಹಸ್ತವೇ ಆತನಿಗೆ ರಕ್ಷಣೆಯ ಸಾಧನವಾಯಿತು. ಆತನ ನೀತಿಯೇ ಆತನಿಗೆ ಆಧಾರವಾಯಿತು.


ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ ನಾನು ನಿಮ್ಮನ್ನು ಸ್ತುತಿಸುತ್ತೇನೆ; ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು, ನಾನು ಪೂರ್ಣವಾಗಿ ತಿಳಿದಿದ್ದೇನೆ.


ಅವರೊಬ್ಬರೇ ಮಹಾ ಅದ್ಭುತಗಳನ್ನು ಮಾಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


ನೀವು ದೊಡ್ಡವರೂ ಅದ್ಭುತಗಳನ್ನು ಮಾಡುವವರೂ ಆಗಿದ್ದೀರಿ. ನೀವೊಬ್ಬರೇ ದೇವರು.


ಅದ್ಭುತಗಳನ್ನು ಮಾಡುವ ದೇವರು ನೀವೇ. ಜನರಲ್ಲಿ ನಿಮ್ಮ ಬಲವನ್ನು ತಿಳಿಯಮಾಡಿದ್ದೀರಿ.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ಹೀಗೆ ಕರ್ತ ಯೇಸುವಿನ ವಾಕ್ಯವು ವಿಸ್ತಾರವಾಗಿ ಹರಡುತ್ತಾ ಪ್ರಬಲವಾಯಿತು.


ನಾನು ನೋಡಲು, ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಸವಾರಿ ಮಾಡುವವನು ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲಾಗಿತ್ತು. ಅವನು ಜಯಿಸುವವನಾಗಿ ಜಯಿಸುವುದಕ್ಕೊಸ್ಕರ ಹೊರಟನು.


ದೇವರಾದ ನನಗಿರುವ ಭುಜಬಲ ನಿನಗಿದೆಯೋ? ನನ್ನ ಧ್ವನಿಯ ಹಾಗೆ ನೀನು ಗುಡುಗಬಲ್ಲೆಯೋ?


ಅದ್ಭುತಗಳನ್ನು ಮಾಡುವುದರಲ್ಲಿ ಸರಿಸಾಟಿಯಿಲ್ಲದ ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ.


ನೀತಿಯೂ, ನ್ಯಾಯವೂ ನಿಮ್ಮ ಸಿಂಹಾಸನದ ಅಸ್ತಿವಾರವಾಗಿವೆ. ಪ್ರೀತಿಯೂ, ಸತ್ಯತೆಯೂ ನಿಮ್ಮ ಮುಂದೆ ಹೋಗುತ್ತವೆ.


ಯೆಹೋವ ದೇವರಿಗೆ ಹಾಡಿರಿ. ಏಕೆಂದರೆ, ಅವರು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾರೆ. ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು