ಕೀರ್ತನೆಗಳು 99:1 - ಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ವಹಿಸಿಹನು ಪ್ರಭು ರಾಜ್ಯಾಧಿಕಾರವನು : ನಡುಗುತಿಹುದು ಜನಾಂಗವು I ಕೆರೂಬಿಯರ ಮಧ್ಯೆ ಆಸೀನನಾಗಿಹನು : ಕಂಪಿಸುತಿಹುದು ಜಗವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂವಿುಯು ಕಂಪಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ. ಅಧ್ಯಾಯವನ್ನು ನೋಡಿ |
ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ.