Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 99:2 - ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಚೀಯೋನಿನಲ್ಲಿ ಮಹೋನ್ನತರಾಗಿದ್ದಾರೆ. ಎಲ್ಲಾ ಜನಗಳ ಮೇಲೆ ಉನ್ನತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸಿಯೋನಿನಲಿ ಪ್ರಭು ಶ್ರೇಷ್ಠನು I ರಾಷ್ಟ್ರಗಳಲ್ಲೆಲ್ಲಾ ಉತ್ಕೃಷ್ಠನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಚೀಯೋನಿನ ಯೆಹೋವನು ದೊಡ್ಡವನು! ಆತನು ಜನಾಂಗಗಳಿಗೆಲ್ಲಾ ಮಹಾನಾಯಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 99:2
15 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರೇ, ನೀವು ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ; ಎಲ್ಲಾ ದೇವರುಗಳ ಮೇಲೆ ನೀವು ಅತ್ಯಂತ ಮಹೋನ್ನತರಾಗಿದ್ದೀರಿ.


ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”


ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”


ಯೆಹೋವ ದೇವರು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವರು; ಅವರ ಮಹಿಮೆಯು ಆಕಾಶಗಳ ಮೇಲೆ ಮೆರೆಯುತ್ತದೆ.


ದೇವರು ತಮ್ಮ ಶಕ್ತಿಯಿಂದ ಎಂದೆಂದಿಗೂ ಆಳುವವರಾಗಿದ್ದಾರೆ. ದೇವರ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ದೇವರಿಗೆ ವಿರೋಧವಾಗಿ ದಂಗೆಕೋರರು ಏಳದಿರಲಿ.


ಪರಿಪೂರ್ಣ ಸೌಂದರ್ಯದ ಚೀಯೋನಿನಿಂದ ದೇವರು ಪ್ರಕಾಶಿಸುತ್ತಿದ್ದಾರೆ.


“ಯೆಹೋವ ದೇವರು ಯಾಕೋಬನಲ್ಲಿ ಆಪತ್ತನ್ನು ಕಾಣಲಿಲ್ಲ. ಇಸ್ರಾಯೇಲಿನಲ್ಲಿ ವಿಪತ್ತನ್ನು ನೋಡಲಿಲ್ಲ. ಅವರ ದೇವರಾದ ಯೆಹೋವ ದೇವರು ಅವರ ಸಂಗಡ ಇದ್ದಾರೆ. ಅರಸನ ಜಯಧ್ವನಿಯು ಅವರಲ್ಲಿ ಉಂಟು.


ಜನರನ್ನು ನಮ್ಮ ಕೆಳಗೆ ತಂದಿದ್ದಾರೆ. ಜನಾಂಗಗಳನ್ನು ನಮಗೆ ಅಧೀನಮಾಡಿದ್ದಾರೆ.


ದೇವರು ಜನಾಂಗಗಳನ್ನು ಆಳುತ್ತಾರೆ. ದೇವರು ತಮ್ಮ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು