Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:16 - ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಭೂಪರಲೋಕಗಳಲ್ಲಿರುವ ಕಾಣುವಂತವುಗಳಾಗಲಿ, ಕಾಣದಂತವುಗಳಾಗಲಿ ಸಮಸ್ತವು ಇವರ ಮೂಲಕವೇ ಸೃಷ್ಟಿಸಲಾಯಿತು. ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಕ್ರಿಸ್ತನಲ್ಲಿಯೇ ಸೃಷ್ಟಿಗೊಂಡವು. ಸರ್ವವೂ ಕ್ರಿಸ್ತರಿಂದಲೂ ಕ್ರಿಸ್ತರಿಗಾಗಿಯೂ ಸೃಷ್ಟಿಹೊಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಭೂಪರಲೋಕಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನಗಳಾಗಲಿ ಪ್ರಭುತ್ವಗಳಾಗಲಿ ದೊರೆತನಗಳಾಗಲಿ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನ ಮುಖಾಂತರವಾಗಿಯೂ ಆತನಿಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು, ದೃಶ್ಯ ಮತ್ತು ಅದೃಶ್ಯವಾದವುಗಳು, ಆತ್ಮಿಕ ಶಕ್ತಿಗಳು, ಪ್ರಭುತ್ವಗಳು ಆತನ ಶಕ್ತಿಯಿಂದ ನಿರ್ಮಿತವಾಗಿವೆ. ಅಧಿಪತಿಗಳು ಮತ್ತು ಅಧಿಕಾರಿಗಳು ಆತನ ಶಕ್ತಿಯಿಂದ ನಿರ್ಮಿತರಾದರು. ಸಮಸ್ತವೂ ಕ್ರಿಸ್ತನ ಮೂಲಕವಾಗಿ ಆತನಿಗೋಸ್ಕರ ಸೃಷ್ಟಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜಿಮ್ನಿರ್ ಅನಿ ಸರ್‍ಗಾತ್ ಹೊತ್ತೆ ಸಗ್ಳೆ ದಿಸ್ತಲೆ ಅನಿ ದಿಸಿ ನಸಲೆ, ಆತ್ಮಿಕ್ ಬಳಾ, ಪದ್ವಿಯಾ ಸಗ್ಳಿ ತೆಚ್ಯಾ ಬಳಾನ್ ರಚುನ್ ಹೊಲ್ಯಾತ್, ಸಗ್ಳೆಬಿ ತೆಚ್ಯಾ ವೈನಾ ತೆಚ್ಯಾಸಾಟ್ನಿ ರಚುನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:16
29 ತಿಳಿವುಗಳ ಹೋಲಿಕೆ  

ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ. ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್.


ಆ ವಾಕ್ಯವೆಂಬುವವರ ಮೂಲಕವಾಗಿಯೇ ಸಮಸ್ತವೂ ಸೃಷ್ಟಿಯಾಯಿತು. ಸೃಷ್ಟಿಯಾದವುಗಳಲ್ಲಿ ಯಾವುದೂ ಅವರಿಲ್ಲದೆ ಸೃಷ್ಟಿಯಾಗಲಿಲ್ಲ.


ನಮಗಾದರೋ ತಂದೆ ದೇವರು ಒಬ್ಬರೇ ಇರುತ್ತಾರೆ. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರಿಗಾಗಿಯೇ ನಾವು ಜೀವಿಸುತ್ತೇವೆ. ನಮಗಿರುವ ಕರ್ತದೇವರು ಒಬ್ಬರೇ. ಅವರೇ ಕ್ರಿಸ್ತ ಯೇಸು. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.


ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.


ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು.


ಆ ರಹಸ್ಯವೋ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕಾಲವು ಪರಿಪೂರ್ಣಗೊಂಡಾಗ ಕ್ರಿಸ್ತನಲ್ಲಿ ಒಂದುಗೂಡಿಸುವುದಾಗಿದೆ.


“ನಿನ್ನನ್ನು ಗರ್ಭದಿಂದ ರೂಪಿಸಿದವರೂ ನಿನ್ನ ವಿಮೋಚಕರೂ ಆದ ಯೆಹೋವ ದೇವರು ಇಂತೆನ್ನುತ್ತಾರೆ: “ಎಲ್ಲವನ್ನು ಉಂಟುಮಾಡಿದ ಯೆಹೋವ ದೇವರು ನಾನೇ. ನಾನೊಬ್ಬನೇ ಆಕಾಶವನ್ನು ವಿಸ್ತರಿಸಿ, ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.


ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.


ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ.


ನೀವು ಕ್ರಿಸ್ತ ಯೇಸುವಿನಲ್ಲಿ ಪರಿಪೂರ್ಣರಾಗಿದ್ದೀರಿ. ಅವರೇ ಎಲ್ಲಾ ಆಳಿಕೆಗೂ, ಅಧಿಕಾರಕ್ಕೂ ಶಿರಸ್ಸಾಗಿದ್ದಾರೆ.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.


ಹೀಗಿರುವುದರಿಂದ ಮೇಲಿನ ಆಕಾಶದಲ್ಲಿಯೂ, ಕೆಳಗಿನ ಭೂಮಿಯಲ್ಲಿಯೂ ಯೆಹೋವ ದೇವರೇ ದೇವರೆಂದೂ ಮತ್ತೊಬ್ಬರಿಲ್ಲವೆಂಬುದನ್ನೂ ನೀವು ಈಗ ಗ್ರಹಿಸಿಕೊಂಡು ಮನಸ್ಸಿಗೆ ತಂದುಕೊಳ್ಳಿರಿ.


ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,


ಕ್ರಿಸ್ತ ಯೇಸು ಶಿಲುಬೆಯ ಮೇಲೆ ಸುರಿಸಿದ ರಕ್ತದ ಮೂಲಕವಾಗಿ, ದೇವರು ಸಮಾಧಾನವನ್ನು ಉಂಟುಮಾಡಿ, ಕ್ರಿಸ್ತನ ಮೂಲಕವೇ ಭೂಪರಲೋಕಗಳಲ್ಲಿರುವ ಎಲ್ಲವನ್ನೂ ತಮ್ಮೊಂದಿಗೆ ಸಂಧಾನಪಡಿಸಿಕೊಂಡರು.


ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು.


ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.


ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ,


ನೀವು ಒಬ್ಬರೇ ದೇವರಾಗಿದ್ದೀರಿ. ನೀವು ಆಕಾಶವನ್ನೂ ಅದರ ಸಮಸ್ತ ಸೈನ್ಯವನ್ನೂ, ಭೂಮಿಯನ್ನೂ, ಅದರಲ್ಲಿರುವ ಪ್ರತಿಯೊಂದನ್ನೂ, ಸಮುದ್ರಗಳನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿದ್ದೀರಿ. ಅವುಗಳಿಗೆಲ್ಲಾ ಜೀವ ಕೊಡುವವರು ನೀವೇ. ಇದಲ್ಲದೆ ಆಕಾಶಗಳ ಸೈನ್ಯವು ನಿಮ್ಮನ್ನು ಆರಾಧಿಸುತ್ತವೆ.


ಆ ವಾಕ್ಯವೆಂಬುವವರು ಲೋಕದಲ್ಲಿದ್ದರು ಮತ್ತು ಲೋಕವು ಅವರ ಮೂಲಕ ಉಂಟಾಯಿತು. ಆದರೂ ಲೋಕವು ಅವರ ಗುರುತು ಹಿಡಿಯಲಿಲ್ಲ.


ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು