ಕೊಲೊಸ್ಸೆಯವರಿಗೆ 1:22 - ಕನ್ನಡ ಸಮಕಾಲಿಕ ಅನುವಾದ22 ಈಗಲಾದರೋ ದೇವರು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿಂದಾರಹಿತರನ್ನಾಗಿಯೂ ತಮ್ಮ ಸನ್ನಿಧಿಯಲ್ಲಿ ನಿಲ್ಲಿಸಿಕೊಳ್ಳುವಂತೆ, ಕ್ರಿಸ್ತನ ಮಾಂಸದೇಹದ ಮರಣದಿಂದ ಈಗ ನಿಮ್ಮನ್ನು ಸಂಧಾನಪಡಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಈಗಲಾದರೋ ಯೇಸುಕ್ರಿಸ್ತರ ದೈವಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆತನು ನಿಮ್ಮನ್ನು ಸಹ ತನ್ನ ಕುಮಾರನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ಈಗ ಸಂಧಾನಪಡಿಸಿಕೊಂಡಿದ್ದಾನೆ; ಮತ್ತು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಈಗಲಾದರೋ ಕ್ರಿಸ್ತನು ಶರೀರಧಾರಿಯಾಗಿ ಈ ಲೋಕದಲ್ಲಿದ್ದಾಗ ತನ್ನ ಪ್ರಾಣವನ್ನೇ ಕೊಡುವುದರ ಮೂಲಕ ನಿಮಗೂ ದೇವರಿಗೂ ಸಂಧಾನ ಮಾಡಿದ್ದಾನೆ. ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿಷ್ಕಳಂಕರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ದೇವರ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಅತ್ತಾ ತರಬಿ ಕ್ರಿಸ್ತ್ ಮಾನುಸ್ ಹೊವ್ನ್ ಹ್ಯಾ ಜಗಾತ್ ರಾತಾನಾ ಅಪ್ಲೊ ಜಿವ್ ದಿಲ್ಲ್ಯಾ ವೈನಾ ತುಮ್ಕಾ ಅನಿ ದೆವಾಕ್ ರಾಜಿ ಕರ್‍ಲ್ಯಾನ್, ತುಮ್ಕಾ ಪವಿತ್ರ್, ನಿರ್ದೊಸಿ ಅನಿ ಚುಕ್ ನಸಲ್ಲೆ ಸಾರ್ಕೆ ಕರುನ್, ದೆವಾಚ್ಯಾ ಇದ್ರಾಕ್ ಇಬೆ ಕರುಚೆ ಮನ್ತಲಿ ಇಚ್ಛ್ಯಾ ಹೊಲ್ಲಿ. ಅಧ್ಯಾಯವನ್ನು ನೋಡಿ |