Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:23 - ಕನ್ನಡ ಸಮಕಾಲಿಕ ಅನುವಾದ

23 ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತುಮಿ ಆಯ್ಕಲ್ಯಾ ಬರ್‍ಯಾ ಖಬ್ರೆ ವೈರ್ ತುಮ್ಕಾ ಹೊತ್ತ್ಯಾ ವಿಶ್ವಾಸಾರ್ ಘಟ್ಟ್ ಇಬೆ ರ್‍ಹಾವ್ನ್ ತೆಚ್ಯಾಕ್ನಾ ಯೆಲ್ಲೊ ಬರೊಸೊ ಸೊಡುನ್ ಜಾಯ್ನಸ್ಲ್ಯಾರ್, ಹೆ ಹೊತಾ, ಹಿ ಬರಿ ಖಬರ್ ಜಗಾಚ್ಯಾ ಸಗ್ಳ್ಯಾ ಲೊಕಾಕ್ನಿ ಪರ್ಗಟ್ ಕರುನ್ ಹೊಲಾ, ಪಾವ್ಲು ಮನ್ತಲೊ ಮಿಯಾ ಹಿ ಬರಿ ಖಬರ್ ಪರ್ಗಟ್ ಕರ್‍ತಲೊ ಸೆವಕ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:23
72 ತಿಳಿವುಗಳ ಹೋಲಿಕೆ  

ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!


ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ಆದರೆ, “ನನ್ನ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಹಿಂಜರಿದರೆ, ಅವನಲ್ಲಿ ನನಗೆ ಸಂತೋಷವಿರುವುದಿಲ್ಲ.”


ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು


ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.”


ಈ ನಿರೀಕ್ಷೆಯು ನಮ್ಮ ಆತ್ಮಕ್ಕೆ ನಿಶ್ಚಯವಾದದ್ದೂ ಸ್ಥಿರವಾದದ್ದೂ ಆಗಿರುವ ಲಂಗರದ ಹಾಗಿದೆ. ಅದು ಅತಿ ಪರಿಶುದ್ಧಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದೂ ಆಗಿದೆ.


ಈ ಕಾರಣದಿಂದ, ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಶೋಧಿಸುವನೋ ಎಂಬ ಭಯದ ದೆಸೆಯಿಂದ, ನಾನು ಸಹ ಸಹಿಸಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವುದಕ್ಕೆ ತಿಮೊಥೆಯನನ್ನು ಕಳುಹಿಸಿದೆನು.


ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.


ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.


ಆಗ ಜಗತ್ತಿನ ಪ್ರತಿಯೊಂದು ದೇಶದಿಂದಲೂ ಬಂದ ದೇವಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿದ್ದರು.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ನಿಮಗೋಸ್ಕರವಾಗಿ ನನಗೆ ದೇವರು ಕೊಟ್ಟಿರುವ ಜವಾಬ್ದಾರಿಗೆ ಅನುಸಾರವಾಗಿ, ದೇವರ ವಾಕ್ಯವನ್ನು ಸಂಪೂರ್ಣವಾಗಿ ಸಾರಲು ನಾನು ಸಭೆಗೆ ಸೇವಕನಾದೆನು.


ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ನೀವು ಎಸೆಯಲಾದ ಕವಲುಬಳ್ಳಿಯಂತೆ ಒಣಗಿ ಹೋಗುವಿರಿ. ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು ಮತ್ತು ಅವುಗಳನ್ನು ಸುಟ್ಟುಹಾಕಲಾಗುವುದು.


ಆದರೆ ನಿನ್ನ ನಂಬಿಕೆಯು ಕುಂದದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು,” ಎಂದು ಹೇಳಿದರು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯೂ ದೇವರೂ ಆಗಿರುವವರಿಗೆ ಸ್ತೋತ್ರವಾಗಲಿ. ಅವರು ಕ್ರಿಸ್ತ ಯೇಸುವನ್ನು ತಮ್ಮ ಮಹಾ ಕರುಣಾನುಸಾರವಾಗಿ, ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಜೀವಕರವಾದ ನಿರೀಕ್ಷೆಗೆ ನಮ್ಮನ್ನು ತಿರುಗಿ ಹುಟ್ಟಿಸಿದ್ದಾರೆ.


ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.


ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ.


ನೀವು ಚೆನ್ನಾಗಿ ಓಡುತ್ತಿದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ತಡೆದವರು ಯಾರು?


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ಯೇಸು ಅವರಿಗೆ, “ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.


ಯೆಹೋವ ದೇವರನ್ನು ಅನುಸರಿಸದೆ ಹಿಂತಿರುಗಿ ಹೋಗುವವರನ್ನು ಯೆಹೋವ ದೇವರನ್ನು ಹುಡುಕದೆಯೂ ವಿಚಾರಿಸದೆಯೂ ಇರುವವರನ್ನೂ ಕಡಿದುಬಿಡುವೆನು.”


ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ.


ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.


ಆದರೆ ಕ್ರಿಸ್ತ ಯೇಸುವಿನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುತ್ತದೆ. ಆದುದರಿಂದ ಬೇರೆ ಯಾರೂ ನಿಮಗೆ ಬೋಧಿಸುವ ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಬೋಧಿಸುವುದು. ಆ ಬೋಧನೆಯು ಸುಳ್ಳಲ್ಲ, ಸತ್ಯವಾದದ್ದು. ಆದ್ದರಿಂದ ಅದು ನಿಮಗೆ ಬೋಧಿಸಿದ ಪ್ರಕಾರವೇ, ಕ್ರಿಸ್ತ ಯೇಸುವಿನಲ್ಲಿ ನೀವು ನೆಲೆಗೊಳ್ಳಿರಿ.


ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.


ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು.


ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.


ನನ್ನನ್ನು ಬಲಪಡಿಸುವ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವು ನನ್ನನ್ನು ನಂಬಿಗಸ್ತನೆಂದು ಎಣಿಸಿ ಸೇವೆಗೆ ನೇಮಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ,


ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ. ಏಕೆಂದರೆ ಇವುಗಳಿಗಾಗಿಯೇ ನಾವು ನೇಮಕವಾಗಿದ್ದೇವೆ ಎಂದು ನೀವೇ ಬಲ್ಲಿರಿ.


ಹೀಗೆ ದೇಹವೆಲ್ಲಾ ಕ್ರಿಸ್ತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಣೆಹೊಂದಿ, ಪ್ರತಿ ಅಂಗವೂ ತನ್ನ ಕೆಲಸವನ್ನು ಸೂಕ್ತವಾಗಿ ಮಾಡುವಂತೆ ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿ ಹೊಂದುತ್ತದೆ.


ಕ್ರಿಸ್ತನಲ್ಲಿ ಕಟ್ಟಡವೆಲ್ಲವೂ ಒಂದಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.


ನಾವಾದರೋ ನಂಬಿಕೆಯಿಂದ ನೀತಿವಂತರಾಗುವ ನಮ್ಮ ನಿರೀಕ್ಷೆಯನ್ನು ದೇವರ ಆತ್ಮನ ಮೂಲಕ ಆತುರದಿಂದ ಎದುರುನೋಡುತ್ತಿದ್ದೇವೆ.


ನಾವು ನಿಮ್ಮ ಮಧ್ಯದಲ್ಲಿ ಪ್ರಯಾಸಪಟ್ಟದ್ದು ವ್ಯರ್ಥವಾಯಿತೇನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.


ಅವರು ಕ್ರಿಸ್ತ ಯೇಸುವಿನ ಸೇವಕರೋ? ಅವರಿಗಿಂತ ಹೆಚ್ಚಾಗಿ ನಾನು ಸೇವೆ ಮಾಡಿದ್ದೇನೆ. ನಾನು ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. ನಾನು ಅತಿಯಾಗಿ ಪ್ರಯಾಸ ಪಟ್ಟಿರುತ್ತೇನೆ. ಅನೇಕಬಾರಿ ಸೆರೆಮನೆಗೆ ಹಾಕಲಾದೆನು. ಬಹು ಕ್ರೂರವಾದ ರೀತಿಯಲ್ಲಿ ಪೆಟ್ಟುಗಳನ್ನು ತಿಂದೆನು. ಅನೇಕಬಾರಿ ಮರಣವನ್ನು ಎದುರಿಸಿದೆನು.


ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


ಹಾಗಾದರೆ, ಅಪೊಲ್ಲೋಸನು ಯಾರು? ಪೌಲನು ಯಾರು? ಅವನವನಿಗೆ ಕರ್ತದೇವರು ನೇಮಿಸಿದ ಕಾರ್ಯದ ಪ್ರಕಾರ ಅವರವರ ಮುಖಾಂತರ ನೀವು ನಂಬಿದ್ದೀರಿ. ಅವರು ಕೇವಲ ಸೇವಕರಾಗಿದ್ದಾರೆ.


ಯೆಹೂದ್ಯರಲ್ಲದವರು ಪವಿತ್ರಾತ್ಮನಿಂದ ಪರಿಶುದ್ಧರಾಗಿ, ದೇವರಿಗೆ ಅಂಗೀಕೃತವಾದ ಕಾಣಿಕೆಗಳಾಗಬೇಕೆಂಬ ಕಾರಣದಿಂದ, ನಾನು ಯೆಹೂದ್ಯರಲ್ಲದವರಿಗೆ ಕ್ರಿಸ್ತ ಯೇಸುವಿನ ಸೇವಕನಾಗಿ ದೇವರ ಸುವಾರ್ತೆಯನ್ನು ಪ್ರಕಟಿಸಲು ದೇವರು ನನಗೆ ಕೃಪೆ ನೀಡಿದ್ದಾರೆ.


ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


ನೀನು ಎದ್ದು ನಿಂತುಕೋ, ನೀನು ಕಂಡಿದ್ದವುಗಳಿಗಾಗಿಯೂ ನಾನು ನಿನಗೆ ತೋರಿಸುವಂಥವುಗಳಿಗಾಗಿಯೂ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಲು ನಾನು ನಿನಗೆ ಕಾಣಿಸಿಕೊಂಡಿದ್ದೇನೆ.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.


ಈ ಅಪೊಸ್ತಲರ ಸೇವೆಯನ್ನು ವಹಿಸಿಕೊಳ್ಳುವುದಕ್ಕಾಗಿ, ನೀವು ಈ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಿಕೊಂಡಿರುವಿರಿ ಎಂಬುದನ್ನು ನಮಗೆ ತೋರಿಸಿರಿ,” ಎಂದು ಪ್ರಾರ್ಥನೆ ಮಾಡಿದರು.


ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದು ಈ ಸೇವೆಯಲ್ಲಿ ಪಾಲುಗಾರನಾಗಿದ್ದನು.”


ಅವರು ಆಳವಾಗಿ ಅಗೆದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ, ಮನೆ ಕಟ್ಟಿದವರಿಗೆ ಸಮಾನರಾಗಿದ್ದಾರೆ. ಪ್ರಳಯವು ಎದ್ದು, ಪ್ರವಾಹವು ಆ ಮನೆಗೆ ರಭಸವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು, ಏಕೆಂದರೆ ಅದು ಬಲವಾಗಿ ಕಟ್ಟಲಾಗಿತ್ತು.


ಒಬ್ಬ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಪಾಪವನ್ನು ಮಾಡಿದರೆ, ಅವನು ಅದಕ್ಕಾಗಿ ಸಾಯಬೇಕು; ಹೌದು, ಅವನು ಮಾಡಿದ ಪಾಪದಿಂದಲೇ ಅವನು ಸಾಯಬೇಕು.


ಯೆಹೋವ ದೇವರೇ, ಆಕಾಶದ ಕೆಳಗಿನಿಂದ ಕೋಪದಿಂದ ಅವರನ್ನು ಹಿಂಸಿಸಿ ಹಾಳುಮಾಡಿರಿ.


ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು, ದುಷ್ಟರ ಸಂಗಡ ದೇವರು ತೊಲಗಿಸಲಿ. ಇಸ್ರಾಯೇಲರ ಮೇಲೆ ಸಮಾಧಾನವಿರಲಿ.


ದೇವರ ಕರುಣೆಯ ನಿಮಿತ್ತ ನಾವು ಈ ಸೇವೆಯನ್ನು ಹೊಂದಿರುವುದರಿಂದ ನಾವು ಧೈರ್ಯಗೆಡುವವರಲ್ಲ.


ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ನಾನು ನಿಮ್ಮ ಬಳಿಯಲ್ಲಿ ಮುಖಾಮುಖಿಯಾಗಿ ಮಾತನಾಡುವಾಗ, “ಮೃದುವಾಗಿಯೂ” ನಿಮ್ಮಿಂದ ದೂರವಿರುವಾಗ “ಕಠಿಣನಾಗಿಯೂ ವರ್ತಿಸುವವನು” ಎಂತಲೂ ನೀವು ತಿಳಿದಿದ್ದೀರಿ. ಅಂಥ ಪೌಲನೆಂಬ, ನಾನು ಕ್ರಿಸ್ತ ಯೇಸುವಿನ ದೀನತ್ವದಿಂದಲೂ ಸಾತ್ವಿಕತೆಯಿಂದಲೂ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು