Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:9 - ಕನ್ನಡ ಸಮಕಾಲಿಕ ಅನುವಾದ

9 ಆದಕಾರಣ ನಾವೂ ಸಹ ನಿಮ್ಮ ಬಗ್ಗೆ ಕೇಳಿದ ದಿನದಿಂದ ನಿಮಗಾಗಿ ಪ್ರಾರ್ಥಿಸುವುದನ್ನು ಬಿಡಲಿಲ್ಲ. ನೀವು ದೇವರಾತ್ಮ ನೀಡುವ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ, ದೇವರ ಚಿತ್ತದ ತಿಳುವಳಿಕೆಯಿಂದ ತುಂಬಿರಬೇಕೆಂದು ನಾವು ದೇವರಿಗೆ ಬೇಡಿಕೊಳ್ಳುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗಿರುವುದರಿಂದ ಈ ವಿಷಯವನ್ನು ನಾವು ಕೇಳಿದ ದಿನದಿಂದಲೂ ನಿಮಗಾಗಿ ಸದಾ ಪ್ರಾರ್ಥಿಸುತ್ತಲೇ ಇದ್ದೇವೆ. ನೀವು ಪರಿಪೂರ್ಣ ವಿವೇಕದಿಂದಲೂ ಆಧ್ಯಾತ್ಮಿಕ ಜ್ಞಾನದಿಂದಲೂ ದೇವರ ಚಿತ್ತವನ್ನು ಸಂಪೂರ್ಣವಾಗಿ ಅರಿಯಬೇಕೆಂಬುದೇ ನಮ್ಮ ಕೋರಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಮ್ಮ ಬಗ್ಗೆ ಈ ಸಂಗತಿಗಳನ್ನು ಕೇಳಿದ ದಿನದಿಂದ, ನಿಮಗೋಸ್ಕರ ಎಡಬಿಡದೆ ಪ್ರಾರ್ಥಿಸುತ್ತಿದ್ದೇವೆ. ದೇವರು ಅಪೇಕ್ಷಿಸುವ ಸಂಗತಿಗಳೆಲ್ಲವನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳಬೇಕೆಂತಲೂ ಆತ್ಮಿಕ ಸಂಗತಿಗಳಲ್ಲಿ ಮಹಾಜ್ಞಾನವನ್ನು ಮತ್ತು ತಿಳುವಳಿಕೆಯನ್ನು ಹೊಂದಿಕೊಳ್ಳಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮ್ಚ್ಯಾ ವಿಶಯಾತ್ ಹಿ ಸಂಗ್ತಿಯಾ ಆಯ್ಕಲ್ಲ್ಯಾ ದಿಸಾಕ್ನಾ ತುಮ್ಚ್ಯಾಸಾಟ್ನಿ ಚುಕಿನಸ್ತಾನಾ ಮಾಗ್ನಿ ಕರ್ತಾಂವ್, ದೆವ್ ಆಶಾ ಕರ್‍ತಲಿ ಸಂಗ್ತಿಯಾ ಸಗ್ಳಿ ತುಮಿ ಫುರಾ ಕಳ್ವುನ್ ಘೆವ್ಚೆ ಮನುನ್ದ ಆತ್ಮಿಕ್ ಸಂಗ್ತಿಯಾತ್ನಿ ಮೊಟೆ ಶಾನೆಪಾನ್ ಅನಿ ಬುದ್ದ್ ಘೆವ್ಚೆ ಮನುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:9
35 ತಿಳಿವುಗಳ ಹೋಲಿಕೆ  

ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ಪ್ರತಿಯೊಂದು ಅವಕಾಶವನ್ನೂ ಸದುಪಯೋಗ ಮಾಡಿಕೊಂಡು ಹೊರಗಿನವರೊಂದಿಗೆ ಜಾಣತನದಿಂದ ನಡೆದುಕೊಳ್ಳಿರಿ.


ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.


ನೀವು ನಿಮ್ಮ ಒಳ್ಳೆಯ ನಡತೆಯಿಂದ, ತಿಳುವಳಿಕೆಯಿಲ್ಲದೆ ಮಾತಾಡುವ ಮೂಢಜನರ ಬಾಯಿ ಮುಚ್ಚುವಂತೆ ಮಾಡುವುದೇ ದೇವರ ಚಿತ್ತ.


ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ, ಯೆಹೋವ ದೇವರಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. ಉತ್ತಮವಾದ, ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.


ನಮ್ಮ ದೇವರು ನೀಡಿರುವ ಕರೆಯುವಿಕೆಗೆ ನಿಮ್ಮನ್ನು ಯೋಗ್ಯರೆಂದು ಎಣಿಸಿ, ಒಳಿತನ್ನು ಮಾಡಲು ನಿಮ್ಮ ಎಲ್ಲಾ ಇಷ್ಟಾರ್ಥವನ್ನೂ ವಿಶ್ವಾಸದಿಂದ ಆಗಿರುವ ನಿಮ್ಮ ಎಲ್ಲಾ ಕಾರ್ಯಗಳನ್ನೂ ದೇವರು ತಮ್ಮ ಶಕ್ತಿಯಿಂದ ಪರಿಪೂರ್ಣಗೊಳಿಸುವಂತೆ ನಾವು ಯಾವಾಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡುತ್ತೇವೆ.


ನಿಮ್ಮ ಚಿತ್ತದಂತೆ ಮಾಡುವುದಕ್ಕೆ ನನಗೆ ಬೋಧಿಸಿರಿ, ಏಕೆಂದರೆ ನೀವು ನನ್ನ ದೇವರು; ನಿಮ್ಮ ಒಳ್ಳೆಯ ಆತ್ಮವು ನನ್ನನ್ನು ಸಮಹಾದಿಯಲ್ಲಿ ನಡೆಸಲಿ.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ಅವರು ಮಾಡಿದ ವಾಗ್ದಾನವನ್ನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ:


ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಆನಂದದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.


ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಯಜಮಾನರನ್ನು ಮೆಚ್ಚಿಸುವವರಂತೆ ಕಣ್ಣಿಗೆ ಕಾಣುವಾಗ ಮಾತ್ರ ಅವರಿಗೆ ಸೇವೆಮಾಡದೆ, ಕ್ರಿಸ್ತನ ದಾಸರಿಗೆ ತಕ್ಕಂತೆ ಮನಃಪೂರ್ವಕವಾಗಿ ದೇವರ ಚಿತ್ತವನ್ನು ನೆರವೇರಿಸಿರಿ.


ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.


ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.


ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.


ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು.


ನಿಮ್ಮಲ್ಲಿ ಒಬ್ಬನೂ ಕ್ರಿಸ್ತ ಯೇಸುವಿನ ದಾಸನೂ ಆಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ದೇವರ ಚಿತ್ತದ ಬಗ್ಗೆ ಪರಿಪಕ್ವರಾಗಿ, ಪೂರ್ಣ ನಿಶ್ಚಯವುಳ್ಳವರಾಗಿ ನಿಂತು, ಎಲ್ಲಾ ವಿಷಯಗಳಲ್ಲಿ ನಿಮಗೋಸ್ಕರ ಆಸಕ್ತಿಯಿಂದ ಪ್ರಾರ್ಥನೆಗಳಲ್ಲಿ ಯಾವಾಗಲೂ ಹೋರಾಡುತ್ತಾನೆ.


ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಆದಕಾರಣ ಬುದ್ಧಿಹೀನರಾಗಿರದೆ ಕರ್ತನ ಚಿತ್ತವೇನೆಂಬುದನ್ನು ತಿಳಿದವರಾಗಿರಿ.


ಕರ್ತನಿಗೆ ಮೆಚ್ಚಿಗೆಯಾದದ್ದು ಏನೆಂಬುದನ್ನು ಪರಿಶೋಧಿಸಿರಿ.


ದೇವರು ಆ ಕೃಪೆಯನ್ನು ನಮ್ಮಲ್ಲಿ ಸಮೃದ್ಧಿಯಾಗಿ ಸುರಿಸಿದ್ದಾರೆ. ಎಲ್ಲಾ ಜ್ಞಾನ ವಿವೇಕಗಳೊಂದಿಗೆ


ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.


ನನ್ನ ಒಳನೋಟ ನನ್ನ ಬೋಧಕರೆಲ್ಲರಿಗಿಂತ ದೊಡ್ಡದಾಗಿದೆ. ಏಕೆಂದರೆ ನಿಮ್ಮ ಶಾಸನಗಳು ನನ್ನ ಧ್ಯಾನವಾಗಿವೆ.


ನೀವು ಕ್ರಿಸ್ತ ಯೇಸುವಿನಲ್ಲಿ ಜ್ಞಾನದಲ್ಲಿಯೂ ಮಾತುಗಳಲ್ಲಿಯೂ ಎಲ್ಲಾ ಸಮೃದ್ಧಿಯನ್ನು ಹೊಂದಿದ್ದೀರಿ.


ಹೀಗೆ ಪೇತ್ರನು ಸೆರೆಮನೆಯಲ್ಲಿ ಬಂಧಿಸಲಾಗಿದ್ದಾಗ, ದೇವರ ಸಭೆಯು ಅವನಿಗೋಸ್ಕರವಾಗಿ ಆಸಕ್ತಿಯಿಂದ ದೇವರಿಗೆ ಪ್ರಾರ್ಥಿಸುತ್ತಿತ್ತು.


ನಿನ್ನ ವಿಶ್ವಾಸದಲ್ಲಿ ಅನ್ಯೋನ್ಯತೆಯು ನಿನ್ನ ಎಲ್ಲಾ ಒಳ್ಳೆಯದರ ಆಳವಾದ ತಿಳುವಳಿಕೆಯನ್ನು ಕ್ರಿಸ್ತ ಯೇಸುವಿಗಾಗಿ ಪರಿಣಾಮಗೊಳಿಸಿ ಹಂಚುವಂತೆ ನಾನು ಪ್ರಾರ್ಥಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು