Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 2:19 - ಕನ್ನಡ ಸಮಕಾಲಿಕ ಅನುವಾದ

19 ಇಂಥವರು ಶಿರಸ್ಸಾಗಿರುವ ಕ್ರಿಸ್ತ ಯೇಸುವಿನನೊಂದಿಗೆ ಸಂಬಂಧ ಕಳೆದುಕೊಂಡವರಾಗಿದ್ದಾರೆ. ಏಕೆಂದರೆ, ಕ್ರಿಸ್ತನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಪೋಷಣೆ ಪಡೆದು ಒಂದಾಗಿ ಜೋಡಿಸಲಾಗಿ ದೇವರು ಬೆಳೆಸುವಂತೆ ಬೆಳೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಂಥವನು ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಈ ಶಿರಸ್ಸಿನಿಂದಲೇ ಇಡೀ ದೇಹವು, ಕೀಲು-ನರಗಳ ಮೂಲಕ ಒಂದಾಗಿ ಸೇರಿ, ಪೋಷಣೆ ಪಡೆದು, ದೇವರು ನಿಯೋಜಿಸಿರುವ ಪ್ರಕಾರ ಬೆಳೆಯುತ್ತಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಜನರು ತಮ್ಮನ್ನು ಕ್ರಿಸ್ತನೆಂಬ ಶಿರಸ್ಸಿನ ಅಧೀನಕ್ಕೆ ಒಳಪಡಿಸುವುದಿಲ್ಲ. ಇಡೀ ದೇಹವು ಆತನನ್ನೇ ಅವಲಂಬಿಸಿಕೊಂಡಿದೆ. ಆತನಿಂದಲೇ ದೇಹದ ಅಂಗಾಂಗಗಳು ಇತರ ಅಂಗಗಳ ಬಗ್ಗೆ ಚಿಂತಿಸುತ್ತವೆ ಮತ್ತು ಪರಸ್ಪರ ಸಹಾಯ ಮಾಡುತ್ತವೆ. ಇದರಿಂದ ದೇಹವು ಬಲಗೊಂಡು ಒಂದಾಗಿ ಕೂಡಿಸಲ್ಪಡುತ್ತದೆ. ಹೀಗೆ, ದೇವರ ಇಚ್ಛೆಯಂತೆ ದೇಹವು ಬೆಳೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತಿ ಲೊಕಾ ಅಪ್ನಾಕುಚ್ ಅಪ್ನಿ ಕ್ರಿಸ್ತ್ ಮನ್ತಲ್ಯಾ ಟಕ್ಲ್ಯಾಕ್ ಖಾಲ್ತಿ ಕರುನ್ ದಿವ್ಕನ್ಯಾತ್, ಸಗ್ಳೆ ಆಂಗ್ ತೆಕಾಚ್ ಠಿಕುನ್ ಹಾಯ್, ಅಸ್ಲಿ ಲೊಕಾ ಕ್ರಿಸ್ತ್ ಮನುನ್ ಸಾಂಗ್ತಲ್ಯಾ ಟಕ್ಲ್ಯಾಚ್ಯಾ ವಾಂಗ್ಡಾ ಸಮಂದ್ ಕಳ್ದುನ್ ಘೆತಾತ್, ತ್ಯಾ ಟಕ್ಲ್ಯಾಕ್ನಾ ಆಂಗ್ ಸಗ್ಳ್ಯಾ ಸಂದಾ ಅನಿ ಘರಾಕ್ನಿ ಪಾಜೆ ಹೊಲ್ಲೊ ಬಳ್ ದಿವ್ನ್ ಅನಿ ಜೊಡುನ್ ಆಂಗ್ ಹೊವ್ನ್, ತ್ಯಾ ದೆವಾಚ್ಯಾ ದಯೆನ್ ಮೊಟೆ ಹೊವ್ನಗೆತ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 2:19
33 ತಿಳಿವುಗಳ ಹೋಲಿಕೆ  

ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.


ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರಿ, ಒಬ್ಬರಿಗೊಬ್ಬರೂ ಕರುಣೆಯುಳ್ಳವರಾಗಿದ್ದು ಸಹೋದರರಂತೆ ಪ್ರೀತಿಸಿರಿ. ಕನಿಕರವೂ ದೀನತೆ ಉಳ್ಳವರಾಗಿರಿ,


ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ.


ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ನೀವು ಪ್ರೀತಿಸುತ್ತಿರುವುದು ನಿಜವೆ. ಆದರೂ ಪ್ರಿಯರೇ, ನೀವು ಪ್ರೀತಿಯಲ್ಲಿ ಇನ್ನೂ ಸಮೃದ್ಧಿಯಾಗಬೇಕೆಂದು ನಾವು ನಿಮ್ಮನ್ನು ಉತ್ತೇಜಿಸುತ್ತೇವೆ.


ನಮ್ಮ ಪ್ರೀತಿಯು ನಿಮ್ಮ ಕಡೆಗೆ ಸಮೃದ್ಧಿಯಾಗಿರುವಂತೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ತುಂಬಿರುವಂತೆ ಕರ್ತ ಯೇಸು ನಿಮಗೆ ಅನುಗ್ರಹಿಸಲಿ.


ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.


ಕ್ರಿಸ್ತ ಯೇಸು ಸಭೆಯೆಂಬ ದೇಹಕ್ಕೆ ಶಿರಸ್ಸಾಗಿದ್ದಾರೆ. ಎಲ್ಲದರಲ್ಲಿಯೂ ಇವರೇ ಪ್ರಥಮ ಸ್ಥಾನಹೊಂದಿರುವಂತೆ, ಆರಂಭವೂ ಸತ್ತು ಎದ್ದು ಬಂದವರಲ್ಲಿ ಪ್ರಥಮವಾದವರು ಆಗಿದ್ದಾರೆ. ಹೀಗೆ ಇವರು ಎಲ್ಲದರಲ್ಲಿಯೂ ಸರ್ವಶ್ರೇಷ್ಠರಾಗಿದ್ದಾರೆ.


ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಏಕೆಂದರೆ, ಯಾರೂ ಸ್ವಂತ ಶರೀರವನ್ನು ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ತಮ್ಮ ಶರೀರವನ್ನು ಪೋಷಿಸಿ ಸಂರಕ್ಷಿಸುತ್ತಾರೆ. ಅದೇ ಪ್ರಕಾರ ಕರ್ತ ಯೇಸು ಸಭೆಯನ್ನು ಪೋಷಿಸಿ, ಸಂರಕ್ಷಿಸುವವರಾಗಿದ್ದಾರೆ.


ಸಮಾಧಾನದ ಬಂಧನದಲ್ಲಿದ್ದವರಾಗಿ, ಪವಿತ್ರಾತ್ಮ ದೇವರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ.


ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಅಧೀನಮಾಡಿ, ಅವರನ್ನು ಎಲ್ಲದರ ಮೇಲೆ ಶಿರಸ್ಸಾಗಿರಲು ಸಭೆಗೋಸ್ಕರ ನೇಮಿಸಿದ್ದಾರೆ.


ನಾನು ಬೀಜವನ್ನು ಬಿತ್ತಿದೆನು, ಅಪೊಲ್ಲೋಸನು ನೀರು ಹಾಕಿದನು, ಆದರೆ ಬೆಳೆಸಿದವರು ದೇವರೇ.


ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಕೆಲವು ಕೊಂಬೆಗಳು ಮುರಿದುಹೋಗಿರುವುದಾದರೆ, ಕಾಡು ಓಲಿವ್ ಮರದಂತಿರುವ ನೀನು ಅವುಗಳ ನಡುವೆ ಕಸಿಮಾಡಿ ಉತ್ತಮ ಓಲಿವ್ ಮರದ ರಸವತ್ತಾದ ಬೇರಿನಲ್ಲಿ ಪಾಲುಹೊಂದಿರಲಾಗಿ,


ವಿಶ್ವಾಸಿಗಳೆಲ್ಲರ ಹೃದಯ ಹಾಗೂ ಮನಸ್ಸುಗಳು ಒಂದಾಗಿದ್ದವು. ಯಾವನೂ ತನ್ನ ಆಸ್ತಿಯನ್ನು ತನ್ನದೇ ಎಂದು ಹಕ್ಕು ಸಾಧಿಸಲಿಲ್ಲ. ಆದರೆ ಅವರೆಲ್ಲರೂ ತಮಗಿದ್ದ ಎಲ್ಲವನ್ನು ಹಂಚಿಕೊಂಡರು.


ತಂದೆಯೇ, ನೀವು ನನ್ನನ್ನು ಕಳುಹಿಸಿದ್ದೀರಿ ಎಂದು ಲೋಕವು ನಂಬುವುದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವ ಹಾಗೆಯೇ ಅವರು ಸಹ ನಮ್ಮಲ್ಲಿ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಪ್ರತಿ ಪುರುಷನಿಗೂ ಕ್ರಿಸ್ತನು ಶಿರಸ್ಸು, ಸ್ತ್ರೀಗೆ ಪುರುಷನು ಶಿರಸ್ಸು ಮತ್ತು ಕ್ರಿಸ್ತನಿಗೆ ದೇವರು ಶಿರಸ್ಸಾಗಿದ್ದಾರೆ, ಎಂಬುದನ್ನು ನೀವು ತಿಳಿಯಬೇಕೆಂಬುದು ನನ್ನ ಅಪೇಕ್ಷೆ.


ಎಲ್ಲವನ್ನು ಎಲ್ಲಾ ವಿಧದಲ್ಲಿಯೂ ತುಂಬಿಸುವ ದೇವರಿಂದ ಕ್ರಿಸ್ತನ ದೇಹವಾಗಿರುವ ಸಭೆಯು ಪರಿಪೂರ್ಣ ಉಳ್ಳದ್ದಾಗಿದೆ.


ಕ್ರಿಸ್ತನಲ್ಲಿ ಕಟ್ಟಡವೆಲ್ಲವೂ ಒಂದಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.


ಆದರೆ, ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ಹಾಕಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು