Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 3:5 - ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಸಾಯಿಸಿರಿ. ಜಾರತ್ವ ಬಂಡುತನ ಕಾಮಾಭಿಲಾಷೆ ದುರಾಶೆ ವಿಗ್ರಹಾರಾಧನೆಗೆ ಸಮವಾಗಿರುವ ಲೋಭ ಇವುಗಳನ್ನು ವಿಸರ್ಜಿಸಿಬಿಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಸೆ ಹೊವ್ನ್, ತುಮ್ಚ್ಯಾಕ್ಡೆ ಹೊತ್ತಿ ಬುರ್ಶಿ ಕಾಮಾ, ಲೈಂಗಿಕ್ ಪಾಪ್, ಬುರ್ಶಿ ಕಾಮಾ, ಸಂಬೊಗ್ ಕರ್ತಲಿ ಆಶಾ, ಬುರ್ಶಿ ಆಶಾ, ಮುರ್ತಿಯಾಂಚ್ಯಾ ಫುಜೆಕ್ ಸಮಾ ಹೊವ್ನ್ ಹೊತ್ತ್ಯಾ ಬುರ್ಶಾ ಆಶೆಕ್ ಮರುನ್ ಸೊಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 3:5
34 ತಿಳಿವುಗಳ ಹೋಲಿಕೆ  

ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.


ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.


ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.


ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಲೈಂಗಿಕ ಅನೈತಿಕತೆಯಿಂದ ಓಡಿಹೋಗಿರಿ. ಮನುಷ್ಯನು ಮಾಡುವ ಇತರ ಎಲ್ಲಾ ಪಾಪಗಳು ಅವನ ದೇಹದ ಹೊರಗಿರುತ್ತವೆ, ಆದರೆ ಲೈಂಗಿಕ ಅನೈತಿಕತೆಯು, ತನ್ನ ದೇಹಕ್ಕೆ ವಿರುದ್ಧವಾಗಿ ಪಾಪಕ್ಕೆ ನಡೆಸುತ್ತದೆ.


ಅವರು ಸರ್ವ ಸೂಕ್ಷ್ಮತೆಯನ್ನು ಕಳೆದುಕೊಂಡು, ತಮ್ಮನ್ನು ಕಾಮುಕತನಕ್ಕೆ ಒಪ್ಪಿಸಿಕೊಟ್ಟು, ಎಲ್ಲಾ ಅಶುದ್ಧತ್ವವನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ.


ನಾನು ತಿರುಗಿ ಬಂದಾಗ, ಹಿಂದೆ ನಿಮ್ಮಲ್ಲಿ ಅಶುದ್ಧತ್ವ, ಲೈಂಗಿಕ ಅನೈತಿಕತೆ, ಪೋಕರಿತನ ಮುಂತಾದ ಪಾಪಗಳನ್ನು ಮಾಡಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಬಿಡುವನು ಎಂದು ದುಃಖಪಡಬೇಕಾಗಿರುವುದರಿಂದ ನಾನು ಭಯಪಡುತ್ತೇನೆ.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಆದರೆ ನನ್ನ ಅವಯವಗಳಲ್ಲಿ ಬೇರೊಂದು ನಿಯಮವನ್ನು ಕಾಣುತ್ತಿದ್ದೇನೆ. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಹೋರಾಡುತ್ತಾ ನನ್ನ ಅವಯವಗಳಲ್ಲಿ ಸೇರಿಕೊಂಡಿರುವ ಪಾಪದ ನಿಯಮಕ್ಕೆ ಸೆರೆಯವನನ್ನಾಗಿ ಮಾಡುತ್ತಿದೆ.


ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಬರಲು ಕಾರಣಗಳೇನು? ನಿಮ್ಮಲ್ಲಿ ಹೋರಾಡುವ ದುರಾಶೆಗಳಿಂದ ಅಲ್ಲವೇ?


“ಆಹಾರವು ಹೊಟ್ಟೆಗಾಗಿಯೂ, ಹೊಟ್ಟೆಯು ಆಹಾರಕ್ಕಾಗಿಯೂ ಇದೆ,” ಎಂದು ನೀವು ಹೇಳುತ್ತೀರಿ. ಆದರೆ ದೇವರು ಇವೆರಡನ್ನೂ ನಾಶಮಾಡುವರು. ದೇಹವು ಲೈಂಗಿಕ ಅನೈತಿಕತೆಗಾಗಿರುವಂಥದ್ದಲ್ಲ, ಆದರೆ ಕರ್ತ ದೇವರಿಗೋಸ್ಕರವಾಗಿದೆ. ಕರ್ತದೇವರು ದೇಹಕ್ಕೋಸ್ಕರ ಇದ್ದಾರೆ.


ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು.


ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.


ಯಾವ ಕಾಮುಕರಾಗಲಿ, ಏಸಾವನಂಥ ಪ್ರಾಪಂಚಿಕರಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆಯಿಂದ ನೋಡಿಕೊಳ್ಳಿರಿ. ಅವನು ಒಂದು ತುತ್ತು ಅನ್ನಕ್ಕಾಗಿ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.


ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು.


ಯೆಹೂದ್ಯರಲ್ಲದವರಲ್ಲಿ ನಡೆಯದೇ ಇರುವಂಥ ಅನೈತಿಕತೆ ನಿಮ್ಮಲ್ಲಿದೆಯೆಂದು ವಾಸ್ತವವಾಗಿ ವರದಿ ಬಂದಿದೆ: ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ.


ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.


ಅವರು ಸಕಲ ವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ, ದುಷ್ಟತ್ವ, ಹೊಟ್ಟೆಕಿಚ್ಚು, ಕೊಲೆ, ಜಗಳ, ಕಪಟ, ಹಗೆತನಗಳಿಂದಲೂ ತುಂಬಿದವರಾದರು.


ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗೆ ಒಪ್ಪಿಸಿಬಿಟ್ಟರು. ಹೇಗೆಂದರೆ ಅವರ ಸ್ತ್ರೀಯರು ಸಹ ಸ್ವಾಭಾವಿಕವಾದ ಭೋಗವನ್ನು ಬಿಟ್ಟು, ಅಸ್ವಾಭಾವಿಕವಾದದ್ದನ್ನು ಅನುಸರಿಸಿದರು.


ನೀವು ದೇವರನ್ನರಿಯದ ಯೆಹೂದ್ಯರಲ್ಲದವರಂತೆ ಕಾಮಾಭಿಲಾಷೆಗೆ ಒಳಪಡಬಾರದು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.


ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”


ಅದರ ಮೊಗ್ಗುಗಳೂ ಕೊಂಬೆಗಳೂ ಅದರಿಂದಲೇ ಬಂದಿದ್ದವು. ದೀಪಸ್ತಂಭವನ್ನೆಲ್ಲಾ ಶುದ್ಧ ಬಂಗಾರದ ಒಂದೇ ಅಚ್ಚಿನಲ್ಲಿ ಬರೆದ ಕಲಾಕೃತಿಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು