Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:1 - ಕನ್ನಡ ಸಮಕಾಲಿಕ ಅನುವಾದ

1 ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಗಲಾತ್ಯದಲ್ಲಿರುವ ಸಭೆಗಳಿಗೆ, ಪ್ರೇಷಿತನಾದ ಪೌಲನು ಎಲ್ಲಾ ಸಹೋದರರೊಡನೆ ಸೇರಿ ಬರೆಯುವ ಪತ್ರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನನ್ನನ್ನು ಅಪೊಸ್ತಲನನ್ನಾಗಿ ಆರಿಸಿದವರು ಮನುಷ್ಯರಲ್ಲ. ನಾನು ಮನುಷ್ಯರಿಂದ ಕಳುಹಿಸಲ್ಪಟ್ಟವನಲ್ಲ. ನನ್ನನ್ನು ಅಪೊಸ್ತಲನನ್ನಾಗಿ ಮಾಡಿದವರು ಯಾರೆಂದರೆ, ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು. ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಿಯಾ ಪಾವ್ಲು, ಅಪೊಸ್ತಲ್ ಹೊವ್ಕ್ ಬಲ್ವಲ್ಲೊ, ಮಾನ್ಸಾನಿ ಧಾಡಲ್ಲೊ ನ್ಹಯ್, ನಾಹೊಲ್ಯಾರ್ ಖಲ್ಯಾಬಿ ಮಾನ್ಸಾನ್ ಎಚುನ್ ಕಾಡಲ್ಲೊ ನ್ಹಯ್, ಖರೆ ಜೆಜು ಕ್ರಿಸ್ತಾನ್ ಅನಿ ತೆಕಾ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವಲ್ಲ್ಯಾ ದೆವ್ ಬಾಬಾನ್ ನೆಮಲ್ಲ್ಯಾ ಅಪೊಸ್ತಲ್ ಪಾವ್ಲುನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:1
35 ತಿಳಿವುಗಳ ಹೋಲಿಕೆ  

ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನಿಂದ ಅಪೊಸ್ತಲನಾಗಲು ಕರೆಯಲಾದ ಪೌಲನೆಂಬ ನಾನು ಮತ್ತು ನಮ್ಮ ಸಹೋದರ ಸೊಸ್ಥೆನನು,


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.


ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


ತಮ್ಮ ವಾಕ್ಯ ಸಾರುವುದರ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕರಾದ ದೇವರ ಆಜ್ಞೆಗನುಸಾರವಾಗಿ ನನಗೆ ಒಪ್ಪಿಸಿದರು.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ಕೊರಿಂಥದಲ್ಲಿರುವ ದೇವರ ಸಭೆಗೆ ಮತ್ತು ಅಖಾಯ ಪ್ರಾಂತದಲ್ಲಿರುವ ಎಲ್ಲಾ ಪವಿತ್ರ ಜನರಿಗೆ ಬರೆಯುವ ಪತ್ರ:


ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೆಂಬ ನಾನು,


ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.


“ಆಗ ನಾನು, ‘ಸ್ವಾಮಿ, ನಾನೇನು ಮಾಡಬೇಕು?’ ಎಂದು ಕೇಳಲು, “ ‘ಎದ್ದೇಳು, ದಮಸ್ಕದೊಳಗೆ ಹೋಗು, ನೀನು ಏನೇನು ಮಾಡಬೇಕಾಗಿದೆಯೋ ಅದೆಲ್ಲವನ್ನು ನಿನಗೆ ಅಲ್ಲಿ ಹೇಳಲಾಗುವುದು,’ ಎಂದು ಕರ್ತ ಯೇಸು ನನಗೆ ಹೇಳಿದರು.


ಎದ್ದೇಳು ಪಟ್ಟಣದೊಳಗೆ ಹೋಗು, ನೀನು ಏನು ಮಾಡಬೇಕು ಎಂಬುದನ್ನು ಅಲ್ಲಿ ನಿನಗೆ ತಿಳಿಸಲಾಗುವುದು,” ಎಂದು ಕರ್ತ ಯೇಸು ಹೇಳಿದರು.


“ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ:


ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.


ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ, ನಾನು ಅರೇಬಿಯಾಕ್ಕೆ ಹೋದೆನು. ಅನಂತರ ಪುನಃ ದಮಸ್ಕಕ್ಕೆ ಹಿಂದಿರುಗಿದೆನು.


ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು.


ಯೇಸು ತಿರುಗಿ ಅವರಿಗೆ, “ನಿಮಗೆ ಸಮಾಧಾನವಾಗಲಿ, ತಂದೆಯು ನನ್ನನ್ನು ಕಳುಹಿಸಿದಂತೆಯೇ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ,” ಎಂದರು.


ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಪುತ್ರನು ಮಾಡುತ್ತಾನೆ ಹೊರತು ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ತಂದೆ ಯಾವುದನ್ನೆಲ್ಲಾ ಮಾಡುವರೋ ಹಾಗೆಯೇ ಪುತ್ರನೂ ಮಾಡುವನು.


ಜೀವದ ಒಡೆಯನನ್ನು ನೀವು ಕೊಂದಿರಿ. ದೇವರಾದರೋ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಆದರೆ ದೇವರು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತಮ್ಮ ಕೃಪೆಯ ಮೂಲಕ ನನ್ನನ್ನು ಕರೆದು,


ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು