Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:12 - ಕನ್ನಡ ಸಮಕಾಲಿಕ ಅನುವಾದ

12 ನಾನು ಅದನ್ನು ಯಾವ ಮನುಷ್ಯನಿಂದಲೂ ಪಡೆಯಲಿಲ್ಲ, ನನಗೆ ಯಾವ ಮನುಷ್ಯನೂ ಉಪದೇಶಿಸಲಿಲ್ಲ, ಆದರೆ ನಾನು ಅದನ್ನು ಕ್ರಿಸ್ತ ಯೇಸುವಿನ ಪ್ರಕಟನೆಯಿಂದಲೇ ಸ್ವೀಕರಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನಗೆ ಸುವಾರ್ತೆ ದೊರೆತದ್ದು ಮನುಷ್ಯರಿಂದಲ್ಲ. ಯಾವನೂ ನನಗೆ ಸುವಾರ್ತೆಯನ್ನು ಉಪದೇಶಿಸಲಿಲ್ಲ. ನಾನು ಜನರಿಗೆ ಉಪದೇಶಿಸಬೇಕಾದ ಸುವಾರ್ತೆಯನ್ನು ಯೇಸು ಕ್ರಿಸ್ತನೇ ನನಗೆ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖಲ್ಯಾಬಿ ಮಾನ್ಸಾಕ್ನಾ ಮಿಯಾ ತಿ ಘೆವ್ಕ್ ನಾ, ನಾಹೊಲ್ಯಾರ್ ಕೊನ್‍ಬಿ ತಿ ಮಾಕಾ ಶಿಕ್ವುಕ್ ನಾ, ಖರೆ ಮಾಕಾ ತಿ ಪರ್ಗಟ್ ಹೊಲ್ಲಿ ಜೆಜು ಕ್ರಿಸ್ತಾಕ್ನಾಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:12
9 ತಿಳಿವುಗಳ ಹೋಲಿಕೆ  

ದೇವರು ತಮ್ಮ ಪುತ್ರನನ್ನು ನನ್ನಲ್ಲಿ ಪ್ರಕಟಿಸಿ, ಯೆಹೂದ್ಯರಲ್ಲದವರಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಮನಸ್ಸು ಮಾಡಿದರು. ಕೂಡಲೇ ದೇವರ ಪುತ್ರ ಆಗಿರುವವರ ಪ್ರಕಟಣೆಯ ತರುವಾಯ ನಾನು ಯಾವ ಮನುಷ್ಯರನ್ನು ವಿಚಾರಿಸಲಿಲ್ಲ.


ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ


ನನ್ನ ಹೊಗಳಿಕೆಯಲ್ಲಿ ಪ್ರಯೋಜನವಿಲ್ಲದಿದ್ದರೂ ಅದು ಅವಶ್ಯವಾಗಿದೆ. ನಾನು ಈಗ ಕರ್ತ ಯೇಸುವಿನಿಂದ ಹೊಂದಿದ ದರ್ಶನಗಳನ್ನು ಮತ್ತು ಪ್ರಕಟನೆಗಳನ್ನು ಕುರಿತು ಹೇಳುತ್ತೇನೆ.


ನಮಗಾದರೋ ದೇವರು ತಮ್ಮ ಪವಿತ್ರಾತ್ಮರ ಮೂಲಕ ಇವುಗಳನ್ನು ಪ್ರಕಟಿಸಿದ್ದಾರೆ. ಪವಿತ್ರಾತ್ಮರು ಎಲ್ಲಾ ವಿಷಯಗಳನ್ನು ಹಾಗೂ ದೇವರ ಆಳವಾದ ರಹಸ್ಯಗಳನ್ನು ಪರಿಶೋಧಿಸುವವರಾಗಿದ್ದಾರೆ.


ನಾನು ಕರ್ತ ದೇವರಿಂದಲೇ ಪಡೆದದ್ದನ್ನು ನಿಮಗೆ ಒಪ್ಪಿಸಿಕೊಟ್ಟಿದ್ದೇನೆ: ಕರ್ತ ಆಗಿರುವ ಯೇಸು ತಮ್ಮನ್ನು ಹಿಡಿದುಕೊಡಲಾದ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು,


ನೀವು ಹೊರಗಿನ ತೋರಿಕೆಗಳನ್ನು ಮಾತ್ರ ತೀರ್ಪುಮಾಡುವವರಾಗಿದ್ದೀರಿ. ಯಾರಾದರೂ ತಾನು ಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ತಾನು ಹೇಗೆ ಕ್ರಿಸ್ತ ಯೇಸುವಿನವನೋ, ಹಾಗೆಯೇ ನಾವೂ ಕ್ರಿಸ್ತ ಯೇಸುವಿನವರು ಎಂದು ಅವನು ತಿಳಿದುಕೊಳ್ಳಲಿ.


ನಾನು ನನಗೆ ದೊರೆತ ಪ್ರಕಟನೆಗೆ ಅನುಸಾರವಾಗಿ ಅಲ್ಲಿಗೆ ಹೋದೆನು. ಅಲ್ಲಿ ಇರುವ ಸಭೆಗೆ ಹೋಗಿ ಯೆಹೂದ್ಯರಲ್ಲದ ಜನರಿಗೆ ನಾನು ಸಾರುವ ಸುವಾರ್ತೆಯ ಬಗ್ಗೆ ವಿವರಿಸಿದೆನು. ಅಲ್ಲಿರುವ ಗಣ್ಯನಾಯಕರಿಗೆ ವೈಯಕ್ತಿಕವಾಗಿ ಅದರ ಬಗ್ಗೆ ವರದಿಮಾಡಿದೆನು. ಏಕೆಂದರೆ ನಾನು ಮಾಡಿದ ಸೇವೆ ಮತ್ತು ಮುಂದೆ ಮಾಡಲಿರುವ ಸೇವೆಯು ನಿಷ್ಫಲವಾಗಬಾರದೆಂಬ ಕಾರಣಕ್ಕಾಗಿ ಹೀಗೆ ಮಾಡಿದೆ.


ಅವರು ರಹಸ್ಯವನ್ನು ಪ್ರಕಟನೆಯಿಂದ ನನಗೆ ತಿಳಿಸಿದರೆಂದು ನಾನು ನಿಮಗೆ ಮೊದಲೇ ಸಂಕ್ಷೇಪವಾಗಿ ಬರೆದಿದ್ದೇನೆ.


ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು