Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:13 - ಕನ್ನಡ ಸಮಕಾಲಿಕ ಅನುವಾದ

13 ನಾನು ಯೆಹೂದ್ಯ ವಿಶ್ವಾಸದಲ್ಲಿದ್ದಾಗ ನನ್ನ ಹಿಂದಿನ ನಡತೆಯನ್ನು ನೀವು ಕೇಳಿದ್ದೀರಷ್ಟೇ. ನಾನು ದೇವರ ಸಭೆಯನ್ನು ಮಿತಿಮೀರಿ ಹಿಂಸೆಪಡಿಸಿ ಹಾಳುಮಾಡಲು ಯತ್ನಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹಿಂದೊಮ್ಮೆ ನಾನು ಯೆಹೂದ್ಯ ಮತಸ್ಥನಾಗಿದ್ದಾಗ ನನ್ನ ನಡತೆ ಹೇಗಿತ್ತೆಂದು ನೀವು ಚೆನ್ನಾಗಿ ಬಲ್ಲಿರಿ. ಆಗ ನಾನು ದೇವರ ಸಭೆಯನ್ನು ಕ್ರೂರವಾಗಿ ಹಿಂಸಿಸಿದೆ; ಅದನ್ನು ಧ್ವಂಸಮಾಡಲು ಪ್ರಯತ್ನಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಿಂದೆ ನಾನು ಯೆಹೂದ್ಯಮತದಲ್ಲಿದ್ದಾಗ ನನ್ನ ನಡತೆ ಎಂಥದೆಂದು ನೀವು ಕೇಳಿದ್ದೀರಷ್ಟೆ. ನಾನು ದೇವರ ಸಭೆಯನ್ನು ಅತ್ಯಂತವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಹಿಂದಿನ ಜೀವಿತದ ಬಗ್ಗೆ ನೀವು ಕೇಳಿದ್ದೀರಿ. ನಾನು ಯೆಹೂದ್ಯಧರ್ಮಕ್ಕೆ ಸೇರಿದವನಾಗಿದ್ದೆನು. ದೇವರ ಸಭೆಯನ್ನು ಬಹಳವಾಗಿ ಹಿಂಸಿಸಿದೆನು. ಕ್ರೈಸ್ತ ಸಭೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಿಯಾ ಅದ್ದಿ ಜುದೆವಾಂಚೊ ಹೊವ್ನ್ ಹೊತ್ತ್ಯಾ ತನ್ನಾ, ಮಾಜಿ ಚಲ್ನುಕ್ ಕಸ್ಲಿ ಹೊತ್ತಿ ಮನುನ್ ತುಮಿ ಆಯಿಕ್ಲ್ಯಾಶಿ ತವ್ಡೆಚ್, ಮಿಯಾ ದೆವಾಚ್ಯಾ ತಾಂಡ್ಯಾಂಚ್ಯಾ ಲೊಕಾಕ್ನಿ ಲೈ ತರಾಸ್ ದಿವ್ನ್ ನಾಸ್ ಕರುನ್ಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:13
14 ತಿಳಿವುಗಳ ಹೋಲಿಕೆ  

ಆದರೆ ಸೌಲನು ಸಭೆಯನ್ನು ಹಾಳುಮಾಡಲು ಪ್ರಾರಂಭಿಸಿದನು. ಅವನು ಮನೆಮನೆಗಳಿಗೆ ಹೋಗಿ ಸ್ತ್ರೀಪುರುಷರನ್ನು ಹೊರಗೆಳೆದು ಅವರನ್ನು ಸೆರೆಮನೆಯಲ್ಲಿ ಹಾಕಿಸಿದನು.


ನಾನಾದರೋ ಅಪೊಸ್ತಲರಲ್ಲಿ ಕನಿಷ್ಠನು, ಅಪೊಸ್ತಲನೆನಿಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ, ಏಕೆಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿದೆನು.


ಸೌಲನು ಯೆರೂಸಲೇಮಿಗೆ ಬಂದು, ಶಿಷ್ಯರ ಜೊತೆಯಲ್ಲಿರಲು ಪ್ರಯತ್ನಿಸಿದನು. ಆದರೆ ಅವನು ನಿಜವಾಗಿಯೂ ಶಿಷ್ಯನೆಂದು ನಂಬದೆ ಅವರು ಅವನಿಗೆ ಭಯಪಟ್ಟಿದ್ದರು.


ಅವನ ಮಾತುಗಳನ್ನು ಕೇಳಿದವರಿಗೆ ಅತ್ಯಾಶ್ಚರ್ಯವಾಯಿತು. ಅವರು, “ಈ ಹೆಸರನ್ನು ಹೇಳುವವರೆಲ್ಲರಿಗೆ ಯೆರೂಸಲೇಮಿನಲ್ಲಿ ತೊಂದರೆಕೊಟ್ಟು ಗೊಂದಲವೆಬ್ಬಿಸಿದವನು ಇವನೇ ಅಲ್ಲವೇ? ಅಂಥವರನ್ನು ಸೆರೆಹಿಡಿದು ಮುಖ್ಯಯಾಜಕರ ಬಳಿಗೆ ಎಳೆದೊಯ್ಯಲು ಇಲ್ಲಿಗೆ ಬಂದವನಲ್ಲವೇ?” ಎಂದು ಪ್ರಶ್ನಿಸಿಕೊಂಡರು.


ಮೊದಲು ದೇವದೂಷಕನೂ ಹಿಂಸಕನೂ ಅಪಮಾನ ಮಾಡುವವನೂ ಆಗಿದ್ದ ನಾನು ಅಜ್ಞಾನಿಯಾಗಿ ಅಪನಂಬಿಕೆಯಲ್ಲಿ ಹಾಗೆ ವರ್ತಿಸಿದ್ದರೂ ದೇವರು ನನಗೆ ಕರುಣೆತೋರಿದರು.


ಆಸಕ್ತಿಯನ್ನು ನೋಡಿದರೆ, ನಾನು ಸಭೆಯ ಹಿಂಸಕನು; ಮೋಶೆಯ ನಿಯಮದಲ್ಲಿರುವ ನೀತಿಯ ಅನುಸಾರವಾಗಿ ನಾನು ನಿರ್ದೋಷಿ.


ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಆದರೆ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನನಗೆ ಧಾರಾಳವಾಗಿ ಸುರಿಯಲಾಯಿತು. ಮಾತ್ರವಲ್ಲದೆ ವಿಶ್ವಾಸ ಪ್ರೀತಿಯೊಂದಿಗೆ ಅತ್ಯಧಿಕವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು