Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:16 - ಕನ್ನಡ ಸಮಕಾಲಿಕ ಅನುವಾದ

16 ದೇವರು ತಮ್ಮ ಪುತ್ರನನ್ನು ನನ್ನಲ್ಲಿ ಪ್ರಕಟಿಸಿ, ಯೆಹೂದ್ಯರಲ್ಲದವರಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಮನಸ್ಸು ಮಾಡಿದರು. ಕೂಡಲೇ ದೇವರ ಪುತ್ರ ಆಗಿರುವವರ ಪ್ರಕಟಣೆಯ ತರುವಾಯ ನಾನು ಯಾವ ಮನುಷ್ಯರನ್ನು ವಿಚಾರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನು ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರಬೇಕೆಂದು ದೇವರು ತಮ್ಮ ಮಗನನ್ನು ನನಗೆ ಶ್ರುತಪಡಿಸಿದರು. ಆಗ ಸಲಹೆಗಾಗಿ ನಾನು ಯಾರ ಬಳಿಗೂ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತನ್ನ ಮಗನನ್ನು ನಾನು ಅನ್ಯಜನರಲ್ಲಿ ಪ್ರಸಿದ್ಧಿಪಡಿಸುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಫೈಸಿದಾಗಲೇ ನಾನು ಮನುಷ್ಯರ ಆಲೋಚನೆಯನ್ನು ವಿಚಾರಿಸದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆತನ ಮಗನ ವಿಷಯವಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂಬುದು ದೇವರ ಚಿತ್ತವಾಗಿತ್ತು. ಆದ್ದರಿಂದ ದೇವರು ತನ್ನ ಮಗನನ್ನು ನನಗೆ ತೋರಿಸಿದನು. ಆತನು ನನ್ನನ್ನು ಕರೆದಾಗ ನಾನು ಯಾರಿಂದಲೂ ಸಲಹೆಯನ್ನಾಗಲಿ ಸಹಾಯವನ್ನಾಗಲಿ ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಪ್ನಾಚ್ಯಾ ಲೆಕಾಕ್ ಮಾಕಾ ದಾಕ್ವುಚೆ ಮನುನ್. ತೆಚ್ಯಾ ವಿಶಯಾತ್ಲಿ ಬರಿ ಖಬರ್; ಮಿಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಸಾಂಗುಕ್ ಪಾಜೆ ಮನುನ್ ದೆವಾನ್ ಮಾಕಾ ಅದ್ದಿಚ್ ಎಚುನ್ ಕಾಡಲ್ಲ್ಯಾನ್, ತನ್ನಾ ಖಲ್ಯಾಬಿ ಮಾನ್ಸಾಕ್ನಾ ಮಿಯಾ ಸಲಹಾ ಘೆವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:16
30 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.


ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.


ಈ ಕಾರಣದಿಂದ ಯೆಹೂದ್ಯರಲ್ಲದವರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ಯೆಹೂದ್ಯರಲ್ಲದವರಾಗಿರುವ ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಾನು ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿರುವಷ್ಟರ ಮಟ್ಟಿಗೆ ನನ್ನ ಸೇವೆಯನ್ನು ಪ್ರಭಾವಗೊಳಿಸುತ್ತೇನೆ.


“ಆಗ ಕರ್ತ ಯೇಸುವು, ‘ಹೋಗು, ನಾನು ಯೆಹೂದ್ಯರಲ್ಲದವರ ಬಳಿಗೆ ನಿನ್ನನ್ನು ದೂರಪ್ರದೇಶಗಳಿಗೆ ಕಳುಹಿಸುವೆನು,’ ಎಂದು ನನಗೆ ಹೇಳಿದರು.”


ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ, ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.


ಅವನು ತನ್ನ ತಂದೆತಾಯಿಗಳ ಬಗ್ಗೆ, ‘ಅವರಿಗಾಗಿ ನನಗೆ ಗೌರವವಿಲ್ಲ.’ ಅವನು ತನ್ನ ಸಹೋದರರನ್ನೂ ಗುರುತಿಸಲಿಲ್ಲ ತನ್ನ ಸ್ವಂತ ಮಕ್ಕಳನ್ನೂ ಅರಿಯಲಿಲ್ಲ, ಏಕೆಂದರೆ ಅವನು ನಿಮ್ಮ ವಾಕ್ಯವನ್ನು ಕೈಗೊಂಡು ನಿಮ್ಮ ಒಡಂಬಡಿಕೆಯನ್ನು ಕಾಪಾಡಿದ್ದಾನೆ.


ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ


ಈ ಸುವಾರ್ತೆಯನ್ನು ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಯೆಹೂದ್ಯರಲ್ಲದವರಿಗೆ ಉಪದೇಶಕನಾಗಿಯೂ ದೇವರಿಂದ ನೇಮಕವಾದೆನು.


ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.


ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.


ಹದಿನಾಲ್ಕು ವರ್ಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ಪುನಃ ಯೆರೂಸಲೇಮಿಗೆ ಹೋದೆನು.


ಇನ್ನು ಮೇಲೆ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವುದಿಲ್ಲ. ಒಂದು ಕಾಲದಲ್ಲಿ ಕ್ರಿಸ್ತ ಯೇಸುವನ್ನು ನಾವು ಶರೀರ ಸಂಬಂಧವಾಗಿ ಅರಿತಿದ್ದೆವು. ಆದರೆ ಇನ್ನು ಮುಂದೆ ಕ್ರಿಸ್ತ ಯೇಸುವನ್ನು ಶರೀರ ಸಂಬಂಧವಾಗಿ ನಾವು ಅರಿತುಕೊಳ್ಳುವುದಿಲ್ಲ.


ಪ್ರಿಯರೇ, ನಾನು ಹೇಳುವುದೇನೆಂದರೆ, ರಕ್ತಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರವು. ಅಳಿಯುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲಾರದು.


ದಿನದಿನವೂ ಅವರು ದೇವಾಲಯಗಳಲ್ಲಿ ಮತ್ತು ಮನೆಯಿಂದ ಮನೆಗೆ ಹೋಗಿ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದನ್ನೂ ಬೋಧಿಸುವುದನ್ನೂ ನಿಲ್ಲಿಸಲೇ ಇಲ್ಲ.


ತಡಮಾಡದೆ, ಯೇಸುವೇ “ದೇವಪುತ್ರ” ಎಂದು ಸಭಾಮಂದಿರಗಳಲ್ಲಿ ಸಾರಲು ಪ್ರಾರಂಭಿಸಿದನು.


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು