Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:11 - ಕನ್ನಡ ಸಮಕಾಲಿಕ ಅನುವಾದ

11 ಕೇಫನು ಅಂತಿಯೋಕ್ಯ ಎಂಬ ಪಟ್ಟಣಕ್ಕೆ ಬಂದಾಗ ಅವನು ತಪ್ಪುಮಾಡಿದವನಾಗಿ ಇದ್ದುದರಿಂದ, ನಾನು ಅವನನ್ನು ಬಹಿರಂಗವಾಗಿ ಎದುರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದರೆ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಆತನು ತಪ್ಪಿತಸ್ಥನೆಂಬುದು ಸಿದ್ಧವಾಗಿದ್ದುದರಿಂದ ನಾನು ಆತನನ್ನು ಮುಖಾಮುಖಿಯಾಗಿ ಖಂಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದರಿಂದ ನಾನು ಅವನನ್ನು ಮುಖಾಮುಖಿಯಾಗಿ ಎದುರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ, ಅವನು ತಪ್ಪಿತಸ್ಥನೆಂದು ಸ್ಪಷ್ಟವಾಗಿ ತೋರಿದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖರೆ ಪೆದ್ರು ಅಂತಿಯೊಕಾತ್ ಯೆಲ್ಲ್ಯಾ ತನ್ನಾ, ಮಿಯಾ ತೆಚ್ಯಾ ಇದ್ರಾಕುಚ್ ವಿರೊಧ್ ರ್‍ಹಾಲೊ. ಕಶ್ಯಾಕ್ ಮಟ್ಲ್ಯಾರ್ ತೊ ಸಮಾ ನ್ಹಯ್ ಹೊತ್ತೆ ಕರುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:11
31 ತಿಳಿವುಗಳ ಹೋಲಿಕೆ  

ಪಾಪಮಾಡುವ ಹಿರಿಯರನ್ನು ಎಲ್ಲರ ಮುಂದೆಯೇ ಗದರಿಸು. ಇದರಿಂದ ಇತರರಿಗೂ ಎಚ್ಚರಿಕೆಯಾಗುವುದು.


ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.


ಇನ್ನು ಮೇಲೆ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವುದಿಲ್ಲ. ಒಂದು ಕಾಲದಲ್ಲಿ ಕ್ರಿಸ್ತ ಯೇಸುವನ್ನು ನಾವು ಶರೀರ ಸಂಬಂಧವಾಗಿ ಅರಿತಿದ್ದೆವು. ಆದರೆ ಇನ್ನು ಮುಂದೆ ಕ್ರಿಸ್ತ ಯೇಸುವನ್ನು ಶರೀರ ಸಂಬಂಧವಾಗಿ ನಾವು ಅರಿತುಕೊಳ್ಳುವುದಿಲ್ಲ.


ಕೆಲವು ಜನರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು ಅಲ್ಲಿಯ ಸಹೋದರರಿಗೆ, “ಮೋಶೆ ಬೋಧಿಸಿದ ಪದ್ಧತಿಯಂತೆ ನೀವು ಸುನ್ನತಿ ಹೊಂದದಿದ್ದರೆ ನೀವು ರಕ್ಷಣೆ ಹೊಂದಲಾರಿರಿ,” ಎಂದು ಬೋಧಿಸತೊಡಗಿದರು.


ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.


ಅದಕ್ಕೆ ಬದಲಾಗಿ, ಯೆಹೂದ್ಯರಿಗೆ ಸುವಾರ್ತೆ ಸಾರುವುದು ಪೇತ್ರನಿಗೆ ಒಪ್ಪಿಸಿಕೊಟ್ಟಂತೆಯೇ, ಯೆಹೂದ್ಯರಲ್ಲದವರಿಗೆ ಸುವಾರ್ತೆ ಸಾರುವುದು ನನಗೆ ಒಪ್ಪಿಸಲಾಯಿತು ಎಂಬುದನ್ನು ಸಭೆಯ ನಾಯಕರು ಸಹ ಗ್ರಹಿಸಿಕೊಂಡರು.


ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲು ಒಪ್ಪಲಿಲ್ಲ.


ನೀವೇ ನನ್ನನ್ನು ಹೊಗಳಿಕೊಳ್ಳುವಂತೆ ಮಾಡಿ, ನಾನು ಬುದ್ಧಿಹೀನನಾಗಿ ನಡೆಯಲು ಒತ್ತಾಯಿಸಿದ್ದೀರಿ. ನನಗೆ ನಿಮ್ಮಿಂದಲೇ ಹೊಗಳಿಕೆಯು ಬೇಕಾಗಿತ್ತು. ಏಕೆಂದರೆ ನಾನು ಕೇವಲ ಅತ್ಯಲ್ಪನಾದರೂ “ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ” ಕಡಿಮೆ ಅಲ್ಲ.


ಆಗ ಯೇಸು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನೀನು ನನಗೆ ಅಡ್ಡಿಯಾಗಿದ್ದೀ; ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.


“ಅತ್ಯಂತ ಮಹಾ ಅಪೊಸ್ತಲರು” ಎಂದೆನಿಸಿದ ಇತರ ಅಪೊಸ್ತಲರಿಗಿಂತಲೂ ನಾನು ಕಡಿಮೆಯಾದವನಲ್ಲ ಎಂದು ಭಾವಿಸುತ್ತೇನೆ.


ಸ್ತೆಫನನ ಮರಣದ ನಂತರ ಸಂಭವಿಸಿದ ಹಿಂಸೆಯ ನಿಮಿತ್ತ ಚದರಿಹೋದವರು ಫೊಯಿನಿಕೆ, ಸೈಪ್ರಸ್ ಮತ್ತು ಅಂತಿಯೋಕ್ಯದವರೆಗೆ ಪ್ರಯಾಣಮಾಡಿದರು. ಹೀಗೆ ಅವರು ಯೆಹೂದ್ಯರಿಗೆ ಮಾತ್ರವೇ ವಾಕ್ಯವನ್ನು ಸಾರಿದರು.


ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು.


ಆದರೆ ಯೋನನು ಯೆಹೋವ ದೇವರ ಸಮ್ಮುಖದಿಂದ ತಾರ್ಷೀಷಿಗೆ ಓಡಿಹೋಗುವುದಕ್ಕೆ ಎದ್ದು, ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು, ಪ್ರಯಾಣದ ದರವನ್ನು ಕೊಟ್ಟು, ಯೆಹೋವ ದೇವರ ಸಮ್ಮುಖದಿಂದ ತಪ್ಪಿಸಿಕೊಂಡು ಹೋಗಲು, ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ತಾರ್ಷೀಷಿಗೆ ಹೋಗುವುದಕ್ಕೆ ಅದನ್ನು ಹತ್ತಿದನು.


“ಆದ್ದರಿಂದ ಈಗ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು, ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು. ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಗೆ ಭಯಪಡಬೇಡ.


ಆಗ ಯೆಹೋವ ದೇವರು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ, “ನನ್ನಲ್ಲಿ ವಿಶ್ವಾಸವಿಡದೆ ಹೋದಕಾರಣ ನೀವು ಇಸ್ರಾಯೇಲರ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧನಾಗಿ ಗೌರವಿಸುವುದಕ್ಕೆ, ನಾನು ಅವರಿಗೆ ಕೊಡುವ ದೇಶದಲ್ಲಿ ನೀವು ಅವರನ್ನು ಸೇರಿಸುವುದಿಲ್ಲ,” ಎಂದರು.


ಅವನನ್ನು ಯೇಸುವಿನ ಬಳಿಗೆ ಕರೆತಂದನು. “ಮೆಸ್ಸೀಯ” ಎಂದರೆ ಕ್ರಿಸ್ತ ಎಂದು ಅರ್ಥ. ಯೇಸು ಅವನನ್ನು ನೋಡಿ, “ನೀನು ಯೋಹಾನನ ಮಗ ಸೀಮೋನನು. ನಿನ್ನನ್ನು ‘ಕೇಫ’ ಎಂದು ಕರೆಯುವರು,” ಎಂದು ಹೇಳಿದರು. “ಕೇಫ” ಎಂದರೆ ಪೇತ್ರ ಇಲ್ಲವೆ ಬಂಡೆ ಎಂದರ್ಥ.


ಆದರೆ ಅವರಲ್ಲಿ, ಕೆಲವರು ಅಂದರೆ ಸೈಪ್ರಸ್ ಮತ್ತು ಕುರೇನೆದ ಪುರುಷರು ಅಂತಿಯೋಕ್ಯಕ್ಕೆ ಹೋಗಿ ಗ್ರೀಕರಿಗೂ ಕರ್ತ ಯೇಸುವಿನ ಶುಭಸಮಾಚಾರ ಸಾರಲು ಪ್ರಾರಂಭಿಸಿದರು.


ಈ ಸಮಾಚಾರ ಯೆರೂಸಲೇಮಿನ ಸಭೆಯವರಿಗೆ ತಿಳಿಯಿತು. ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿಕೊಟ್ಟರು.


ಈ ಸಮಯದಲ್ಲಿ ಯೆರೂಸಲೇಮಿನಿಂದ ಕೆಲವು ಪ್ರವಾದಿಗಳು ಅಂತಿಯೋಕ್ಯಕ್ಕೆ ಬಂದರು.


ಆದರೆ ಫರಿಸಾಯರ ಪಂಗಡಕ್ಕೆ ಸೇರಿದ ಕೆಲವು ವಿಶ್ವಾಸಿಗಳು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದವರು ಸುನ್ನತಿ ಹೊಂದಬೇಕು ಮತ್ತು ಮೋಶೆಯ ನಿಯಮಕ್ಕೆ ವಿಧೇಯರಾಗಬೇಕು,” ಎಂದರು.


ಮೂರು ವರ್ಷಗಳ ನಂತರವೇ ನಾನು ಕೇಫನನ್ನು ಪರಿಚಯಮಾಡಿಕೊಳ್ಳಲು ಯೆರೂಸಲೇಮಿಗೆ ಹೋಗಿ ಅವನೊಂದಿಗೆ ಹದಿನೈದು ದಿವಸ ಇದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು