Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:14 - ಕನ್ನಡ ಸಮಕಾಲಿಕ ಅನುವಾದ

14 ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರ ಈ ನಡತೆ, ಶುಭಸಂದೇಶದ ಸತ್ಯಕ್ಕೆ ಅನುಗುಣವಾದುದಲ್ಲ ಎಂದು ನನಗೆ ಮನದಟ್ಟಾಯಿತು. ಆಗ ನಾನು ಅವರೆಲ್ಲರ ಸಮ್ಮುಖದಲ್ಲೇ ಕೇಫನಿಗೆ: “ನೀನು ಯೆಹೂದ್ಯನಾಗಿದ್ದೂ ಯೆಹೂದ್ಯರಂತೆ ನಡೆಯದೆ ಅನ್ಯಧರ್ಮೀಯರಂತೆ ನಡೆದುಕೊಳ್ಳುತ್ತ ಇದ್ದಿಯಲ್ಲವೇ? ಹೀಗಿರುವಲ್ಲಿ ಅನ್ಯಧರ್ಮೀಯರು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ನೀನು ಒತ್ತಾಯಪಡಿಸುವುದಾದರೂ ಹೇಗೆ?” ಎಂದು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯುವದಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ - ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ - ನೀವು ಯೆಹೂದ್ಯರ ಪದ್ಧತಿಗಳನ್ನು ಅನುಸರಿಸಬೇಕೆಂದು ನೀನು ಬಲಾತ್ಕಾರ ಮಾಡುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಬರ್‍ಯಾ ಖಬ್ರಿಚ್ಯಾ ಖರ್‍ಯಾಚ್ಯಾ ಪರ್‍ಕಾರ್ ತೆನಿ ನಿಟ್ಟ್ ಚಲಿನಾ ಹೊಲ್ಯಾತ್ ಮನುನ್ ಮಾಕಾ ದಿಸಲ್ಲ್ಯಾ ತನ್ನಾ ಸಗ್ಳ್ಯಾಂಚ್ಯಾ ಇದ್ರಾಕ್ ಪೆದ್ರುಕ್ ಮಿಯಾ; “ತಿಯಾ ಜಲ್ಮಾನ್ ಜುದೆವ್ ಹೊವ್ನ್, ಜುದೆವಾಂಚ್ಯಾ ಸಾರ್ಕೆ ಚಲಿನೆ, ಜುದೆವ್ ನ್ಹಯ್ ಅಸಲ್ಲ್ಯಾಂಚ್ಯಾ ಸಾರ್ಕೆ ಚಲ್ತೆ. ತಸೆ ಹೊಲ್ಯಾರ್ ತಿಯಾ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಜುದೆವಾಂಚ್ಯಾ ಸಾರ್ಕೆ ಚಲುಕ್ ಜಬರ್ದಸ್ತಿ ಕಶ್ಯಾಕ್ ಕರ್ತೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:14
30 ತಿಳಿವುಗಳ ಹೋಲಿಕೆ  

ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲು ಒಪ್ಪಲಿಲ್ಲ.


ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ಪಾಪಮಾಡುವ ಹಿರಿಯರನ್ನು ಎಲ್ಲರ ಮುಂದೆಯೇ ಗದರಿಸು. ಇದರಿಂದ ಇತರರಿಗೂ ಎಚ್ಚರಿಕೆಯಾಗುವುದು.


ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡುವವರೂ ತಮಗೆ ಕ್ರಿಸ್ತ ಯೇಸುವಿನ ಶಿಲುಬೆಯ ನಿಮಿತ್ತ ಹಿಂಸೆಯಾಗಬಾರದೆಂಬುದಕ್ಕಾಗಿಯೇ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಿಮ್ಮನ್ನು ಒತ್ತಾಯ ಮಾಡುತ್ತಾರೆ.


ನೀತಿವಂತರಿಗೋಸ್ಕರ ದೇವರು ಸುಜ್ಞಾನವನ್ನು ಕೂಡಿಸಿಡುವರು, ನಿರ್ದೋಷಿಯಾಗಿ ನಡೆದುಕೊಳ್ಳುವವರಿಗೆ ದೇವರು ಗುರಾಣಿಯಾಗಿದ್ದಾರೆ.


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


“ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿರಿ.” ಹೀಗೆ ಮಾಡಿದರೆ ಕುಂಟ ಕಾಲು ಉಳುಕಿಹೋಗದೆ ವಾಸಿಯಾಗುವುದು.


ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.


ಅದಕ್ಕೆ ಬದಲಾಗಿ, ಯೆಹೂದ್ಯರಿಗೆ ಸುವಾರ್ತೆ ಸಾರುವುದು ಪೇತ್ರನಿಗೆ ಒಪ್ಪಿಸಿಕೊಟ್ಟಂತೆಯೇ, ಯೆಹೂದ್ಯರಲ್ಲದವರಿಗೆ ಸುವಾರ್ತೆ ಸಾರುವುದು ನನಗೆ ಒಪ್ಪಿಸಲಾಯಿತು ಎಂಬುದನ್ನು ಸಭೆಯ ನಾಯಕರು ಸಹ ಗ್ರಹಿಸಿಕೊಂಡರು.


ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು.


ನಮ್ಮಿಂದ ಕೆಲವರು ನಮ್ಮ ಅಪ್ಪಣೆಯಿಲ್ಲದೆ ತಮ್ಮ ಮಾತುಗಳಿಂದ ನಿಮ್ಮ ಮನಸ್ಸಿಗೆ ತೊಂದರೆ ಕೊಟ್ಟರೆಂದು ನಾವು ಕೇಳಿದೆವು.


ಯಥಾರ್ಥ ನಡತೆಯವರು ಸುರಕ್ಷಿತವಾಗಿ ಜೀವಿಸುತ್ತಾರೆ; ಆದರೆ ವಕ್ರಮಾರ್ಗಗಳಲ್ಲಿ ನಡೆಯುವವನು ಬಯಲಿಗೆ ಬರುವನು.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; ನನ್ನ ತಲೆ ಅದನ್ನು ಬೇಡವೆನ್ನದಿರಲಿ; ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು.


ಜನನಾಯಕರೇ, ನೀವು ನ್ಯಾಯವಾಗಿ ತೀರ್ಪನ್ನು ನುಡಿಯುತ್ತೀರೋ? ಜನರಲ್ಲಿ ನೀವು ಯಥಾರ್ಥವಾಗಿ ನ್ಯಾಯತೀರಿಸುವಿರೋ?


ದೋಷವಿಲ್ಲದವರಾಗಿ ಜೀವಿಸಿ, ನೀತಿಯನ್ನು ನಡೆಸಿ, ತಮ್ಮ ಹೃದಯದಿಂದ ಸತ್ಯವನ್ನಾಡುವವರೇ;


“ ‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.


ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಅವನನ್ನು ಬಲಾತ್ಕಾರ ಮಾಡಲಿಲ್ಲ.


ಕೆಲವು ಜನರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು ಅಲ್ಲಿಯ ಸಹೋದರರಿಗೆ, “ಮೋಶೆ ಬೋಧಿಸಿದ ಪದ್ಧತಿಯಂತೆ ನೀವು ಸುನ್ನತಿ ಹೊಂದದಿದ್ದರೆ ನೀವು ರಕ್ಷಣೆ ಹೊಂದಲಾರಿರಿ,” ಎಂದು ಬೋಧಿಸತೊಡಗಿದರು.


ಆದರೆ ಫರಿಸಾಯರ ಪಂಗಡಕ್ಕೆ ಸೇರಿದ ಕೆಲವು ವಿಶ್ವಾಸಿಗಳು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದವರು ಸುನ್ನತಿ ಹೊಂದಬೇಕು ಮತ್ತು ಮೋಶೆಯ ನಿಯಮಕ್ಕೆ ವಿಧೇಯರಾಗಬೇಕು,” ಎಂದರು.


ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ಮೂರು ವರ್ಷಗಳ ನಂತರವೇ ನಾನು ಕೇಫನನ್ನು ಪರಿಚಯಮಾಡಿಕೊಳ್ಳಲು ಯೆರೂಸಲೇಮಿಗೆ ಹೋಗಿ ಅವನೊಂದಿಗೆ ಹದಿನೈದು ದಿವಸ ಇದ್ದೆನು.


ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಲಾದ ನಿರೀಕ್ಷೆಯಿಂದಲೇ ಈ ವಿಶ್ವಾಸವೂ ಪ್ರೀತಿಯೂ ಬುಗ್ಗೆಯಾಗಿ ಒದಗಿಬರುತ್ತದೆ. ಈ ನಿರೀಕ್ಷೆಯ ಬಗ್ಗೆ ಸುವಾರ್ತೆಯ ಸತ್ಯ ಸಂದೇಶವನ್ನು ಮೊದಲೇ ನೀವು ಕೇಳಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು