Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:16 - ಕನ್ನಡ ಸಮಕಾಲಿಕ ಅನುವಾದ

16 ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೂ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದರಿಂದ ನಾವು ಸಹ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿಸಲ್ಪಡುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು; ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹೊಲ್ಯಾರ್ಬಿ ಖಾಯ್ದೆ ಪಾಳುನ್ ನ್ಹಯ್, ಜೆಜು ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಮಾನುಸ್ ನಿತಿವಂತ್ ಹೊತಾ, ಮನುನ್ ಅಮ್ಕಾ ಗೊತ್ತ್ ಹಾಯ್, ತಸೆ ಮನುನ್ ಖಾಯ್ದೆ ನ್ಹಯ್ ಕ್ರಿಸ್ತಾತ್ ವಿಶ್ವಾಸ್ ದಿತಾ ತೆ ನಿತಿವಂತ್ಪಾನ್ ಅಮ್ಚೆ ಕರುನ್ ಘೆವ್‌ಸಾಟ್ನಿ ಕ್ರಿಸ್ತ್ ಜೆಜು ವರ್‍ತಿ ಅಮಿ ವಿಶ್ವಾಸ್ ಕರ್ತಾಂವ್, ಕಶ್ಯಾಕ್ ಮಟ್ಲ್ಯಾರ್ ಖಾಯ್ದೆ ಪಾಳುನ್ ಖಲ್ಯಾಬಿ ಮಾನ್ಸಾಕ್ ನಿತಿವಂತ್ಪಾನ್ ಜೊಡುನ್ ಘೆವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:16
41 ತಿಳಿವುಗಳ ಹೋಲಿಕೆ  

ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.


ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ಅಬ್ರಹಾಮನು ಕ್ರಿಯೆಗಳ ಮೂಲಕ ನೀತಿವಂತನೆಂದು ನಿರ್ಣಯ ಹೊಂದಿದವನಾಗಿದ್ದರೆ, ದೇವರ ಮುಂದೆ ಹೊಗಳಿಸಿಕೊಳ್ಳಲು ಅವನಿಗೆ ಆಸ್ಪದ ಇರುವುದಿಲ್ಲ.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಸುನ್ನತಿಯವರಿಗೂ ಸುನ್ನತಿಯಿಲ್ಲದವರಿಗೂ ಒಂದೇ ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ.


ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ಇದಾದನಂತರ ಯಾರೂ ಎಣಿಸಲಾಗದಂಥ ಮಹಾ ಜನಸಮೂಹವನ್ನು ಕಂಡೆನು. ಅವರು ಪ್ರತಿ ರಾಷ್ಟ್ರ, ಕುಲ, ಜನ ಮತ್ತು ಭಾಷೆಯವರಾಗಿದ್ದು, ಯಜ್ಞದ ಕುರಿಮರಿ ಆಗಿರುವವರ ಮುಂದೆಯೂ ಸಿಂಹಾಸನದ ಮುಂದೆಯೂ ನಿಂತಿದ್ದರು. ಅವರು ಬಿಳಿ ನಿಲುವಂಗಿಗಳನ್ನು ಧರಿಸಿದ್ದವರಾಗಿ, ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ನೀವು ನಿಯಮದ ಮೂಲಕ ನೀತಿವಂತರಾಗಬೇಕೆಂದು ಪ್ರಯತ್ನಿಸುವವರು, ಕ್ರಿಸ್ತ ಯೇಸುವಿನಿಂದ ಬೇರ್ಪಟ್ಟಿದ್ದೀರಿ. ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.


ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ?


ಹೀಗೆ ದೇವರು ನಿಯಮಕ್ಕೆ ಒಳಗಾದ ನಮ್ಮನ್ನು ವಿಮೋಚಿಸಿ, ನಾವು ಪುತ್ರರ ಸ್ಥಾನವನ್ನು ಹೊಂದುವಂತೆ ಮಾಡಿದರು.


ನಾನು ಈಗಾಗಲೇ ಅಪರಾಧಿ ಎಂದು ನಿರ್ಣಯವಾಗಿರುವಾಗ, ನಾನು ಏಕೆ ವ್ಯರ್ಥವಾಗಿ ಹೋರಾಡಬೇಕು?


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ನಮಗೋಸ್ಕರವೂ ಅಂದರೆ, ನಮ್ಮ ಕರ್ತ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿರುವ ದೇವರನ್ನು ನಂಬುವ ನಮ್ಮ ಪಾಲಿಗೂ ನೀತಿಯೆಂದು ಎಣಿಸಲಾಗುವುದು.


ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು