Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:19 - ಕನ್ನಡ ಸಮಕಾಲಿಕ ಅನುವಾದ

19 “ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ನಿಯಮದ ಮೂಲಕ, ನಿಯಮದ ಪಾಲಿಗೆ ಸತ್ತವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ಧರ್ಮಶಾಸ್ತ್ರದ ಮೂಲಕ, ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನಂತೂ ದೇವರಿಗಾಗಿ ಜೀವಿಸುವದಕ್ಕೋಸ್ಕರ ಧರ್ಮಪ್ರಮಾಣದ ಮೂಲಕವಾಗಿ ಧರ್ಮಪ್ರಮಾಣದ ಪಾಲಿಗೆ ಸತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಧರ್ಮಶಾಸ್ತ್ರಕ್ಕಾಗಿ ಜೀವಿಸುವುದನ್ನು ತೊರೆದುಬಿಟ್ಟೆನು. ನನ್ನನ್ನು ಧರ್ಮಶಾಸ್ತ್ರವೇ ಕೊಂದಿತು. ಈಗ ನಾನು ದೇವರಿಗಾಗಿ ಜೀವಿಸಬೇಕೆಂದು ಧರ್ಮಶಾಸ್ತ್ರದ ಪಾಲಿಗೆ ಸತ್ತುಹೋದೆನು. ನಾನು ಕ್ರಿಸ್ತನೊಂದಿಗೆ ಶಿಲುಬೆಗೇರಿಸಲ್ಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ದೆವಾಸಾಟ್ನಿ ಮಿಯಾ ಜಿವನ್ ಕರುಸಾಟಿ ಖಾಯ್ದ್ಯಾಚ್ಯಾ ವೈನಾ ಖಾಯ್ದ್ಯಾಕ್ ಮಿಯಾ ಮರ್‍ಲಾ ಅನಿ ಹೆಚ್ಯಾ ವೈನಾ ಕ್ರಿಸ್ತಾಚ್ಯಾ ವಾಂಗ್ಡಾ ಮಾಕಾ ಕುರ್ಸಾರ್ ಮಾರುನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:19
28 ತಿಳಿವುಗಳ ಹೋಲಿಕೆ  

ಆದ್ದರಿಂದ, ನನ್ನ ಪ್ರಿಯರೇ, ನೀವು ದೇವರಿಗೆ ಫಲಕೊಡುವವರಾಗಬೇಕೆಂದು ಸತ್ತವರೊಳಗಿಂದ ಎದ್ದುಬಂದಾತನಿಗೆ ಸೇರಿದವರಾಗಲು ಕ್ರಿಸ್ತ ಯೇಸುವಿನ ದೇಹದ ಮೂಲಕ ನಿಯಮದ ಪಾಲಿಗೆ ಸತ್ತಿರಿ.


ಎಂದಿಗೂ ಹಾಗಾಗದಿರಲಿ! ನಾವು ಪಾಪದ ಪಾಲಿಗೆ ಸತ್ತೆವು, ನಾವು ಇನ್ನೂ ಪಾಪದಲ್ಲಿ ಜೀವಿಸುವುದು ಹೇಗೆ?


ನಾವು ಎಚ್ಚರವಾಗಿದ್ದರೂ ನಿದ್ರೆಯಲ್ಲಿದ್ದರೂ ತಮ್ಮ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಅವರು ನಮಗಾಗಿ ಸತ್ತರು.


ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ, ತಮಗಾಗಿ ಸತ್ತು ಪುನರುತ್ಥಾನವಾಗಿ ಬಂದ ಕ್ರಿಸ್ತ ಯೇಸುವಿಗೋಸ್ಕರವೇ ಜೀವಿಸಬೇಕೆಂದು ಕ್ರಿಸ್ತ ಯೇಸು ಎಲ್ಲರಿಗೋಸ್ಕರ ಸತ್ತರು.


ಅದೇ ರೀತಿಯಲ್ಲಿ, ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ಕ್ರಿಸ್ತ ಯೇಸುವಿನಲ್ಲಿ ದೇವರಿಗಾಗಿ ಜೀವಿಸುವವರೆಂದೂ ಎಣಿಸಿಕೊಳ್ಳಿರಿ.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ಈ ಕಾರಣದಿಂದಲೇ ಈಗ ಸತ್ತಿರುವವರಿಗೂ ಸಹ ಬದುಕಿದ್ದಾಗ ಸುವಾರ್ತೆ ಸಾರಲಾಯಿತು. ಆದ್ದರಿಂದ ಎಲ್ಲಾ ಮನುಷ್ಯರಿಗೆ ನೇಮಿಸಿದ ನ್ಯಾಯತೀರ್ಪಿನಂತೆ ಅವರು ದೇಹದಲ್ಲಿ ಮರಣ ಹೊಂದಿದ್ದರೂ, ತಮ್ಮ ಆತ್ಮದಲ್ಲಿ ದೇವರಿಗಾಗಿ ಜೀವಿಸುವರು.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಪ್ರಾಪಂಚಿಕ ಬಾಲಬೋಧನೆಗಳಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದೀರಿ. ಹಾಗಾದರೆ ನೀವು ಇನ್ನೂ ಪ್ರಾಪಂಚಿಕ ನಿಯಮಗಳಿಗೆ ಅಧೀನರಾಗಿರುವುದೇಕೆ?


ಹೀಗಿರಲಾಗಿ ನಿಯಮವು ನಮ್ಮ ಪೋಷಕನಂತಿತ್ತು. ನಾವು ನಂಬಿಕೆಯ ಮೂಲಕ ನೀತಿವಂತರಾಗುವುದಕ್ಕಾಗಿ ಕ್ರಿಸ್ತ ಯೇಸುವಿನ ಬಳಿಗೆ ತರುವ ತನಕ ನಮ್ಮನ್ನು ಪೋಷಿಸುತ್ತದೆ.


ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.


ಏಕೆಂದರೆ ನೀವು ಸತ್ತಿರುವಿರಲ್ಲಾ, ನಿಮ್ಮ ಜೀವವು ಕ್ರಿಸ್ತ ಯೇಸುವಿನೊಂದಿಗೆ ದೇವರಲ್ಲಿ ಮರೆಯಾಗಿದೆ.


ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ.


ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ನಿಯಮವು ಆತ್ಮಿಕವಾದದ್ದೆಂದು ಬಲ್ಲೆವು. ಆದರೆ ನರಮಾನವನಾದ ನಾನು ಪಾಪಕ್ಕೆ ಗುಲಾಮನಂತೆ ಮಾರಿಕೊಂಡವನಾಗಿದ್ದೇನೆ.


ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.


ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.


ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ನಿಯಮಕ್ಕೆ ಅಧೀನನಲ್ಲದಿದ್ದರೂ ನಿಯಮಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವಂತೆ ಅವರಿಗಾಗಿ ನಿಯಮಕ್ಕೆ ಅಧೀನನಂತಾದೆನು.


ನನಗಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಹೆಚ್ಚಳ ಪಡುವುದು ಬೇಡವೇ ಬೇಡ. ಅವರ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು