Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:1 - ಕನ್ನಡ ಸಮಕಾಲಿಕ ಅನುವಾದ

1 ಬುದ್ಧಿಯಿಲ್ಲದ ಗಲಾತ್ಯದವರೇ, ನಿಮಗೆ ಮಾಟಮಾಡಿಸಿದವರು ಯಾರು? ಯೇಸು ಕ್ರಿಸ್ತರು ಶಿಲುಬೆಗೆ ಹಾಕಿಸಿಕೊಂಡದ್ದನ್ನು ನಾನು ನಿಮ್ಮ ಕಣ್ಣೆದುರಿನಲ್ಲಿಯೇ ಚಿತ್ರೀಕರಿಸಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎಲೈ ಬುದ್ಧಿಯಿಲ್ಲದ ಗಲಾತ್ಯದವರೇ, ಯಾರು ನಿಮ್ಮನ್ನು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ವರ್ಣಿಸಲ್ಪಟ್ಟನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಕ್ರಿಸ್ತನು ಶಿಲುಬೆಯ ಮೇಲೆ ಮರಣ ಹೊಂದಿದ್ದರ ಬಗ್ಗೆ ಗಲಾತ್ಯದಲ್ಲಿರುವ ನಿಮಗೆ ಬಹು ಸ್ಪಷ್ಟವಾಗಿ ತಿಳಿಸಲಾಯಿತು. ಆದರೆ ನೀವು ಬಹು ಬುದ್ಧಿಹೀನರಾಗಿದ್ದೀರಿ. ನಿಮ್ಮನ್ನು ಮೋಸಗೊಳಿಸಲು ಬೇರೊಬ್ಬನಿಗೆ ಅವಕಾಶ ಮಾಡಿಕೊಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅರೆ ಬುದ್ದ್ ನತ್ತ್ಯಾ ಗಾಲಾತ್‌ಕಾರಾನು!, ತುಮ್ಕಾ ಕೊನ್ ಪಸ್ವುಲೆ? ಕುರ್ಸಾರ್ ಮಾರಲ್ಲ್ಯಾ ಜೆಜು ಕ್ರಿಸ್ತಾಚ್ಯಾ ವಿಶಯಾತ್ ತುಮ್ಚ್ಯಾ ಡೊಳ್ಯಾಚ್ಯಾ ಇದ್ರಾಕ್ ಬರೆ ಕರುನ್ ಸೊಡ್ಸುನ್ ಥವಲ್ಲೆ ಹಾಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:1
38 ತಿಳಿವುಗಳ ಹೋಲಿಕೆ  

ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.


ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.


ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?


ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು.


ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?


ನೀವು ಇಷ್ಟು ಬುದ್ಧಿಯಿಲ್ಲದವರಾಗಿದ್ದೀರಾ? ನೀವು ಪವಿತ್ರ ಆತ್ಮರಲ್ಲಿ ಪ್ರಾರಂಭಿಸಿ ಈಗ ಮಾನವೀಯವಾಗಿ ಪರಿಪೂರ್ಣರಾಗಬೇಕೆಂದ್ದೀರಾ?


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.


ಆದಕಾರಣ ನೀವು ಹೇಗೆ ಜೀವಿಸಬೇಕೆಂದು ಜಾಗರೂಕರಾಗಿರಿ. ಅಜ್ಞಾನಿಗಳಂತಿರದೆ, ಜಾಣರಾಗಿ ಜೀವಿಸಿರಿ.


ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ.


ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.


ನೀವು ಈ ರೊಟ್ಟಿಯನ್ನು ತಿಂದು, ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ, ಕರ್ತದೇವರ ಮರಣವನ್ನು ಅವರು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.


ಶಿಲುಬೆಗೆ ಹಾಕಲಾದ ಯೇಸು ಕ್ರಿಸ್ತನನ್ನೇ ಹೊರತು ನಿಮ್ಮಲ್ಲಿ ಬೇರೆ ಯಾವುದನ್ನೂ ತಿಳಿಯದವನಾಗಿರುವೆನೆಂದು ತೀರ್ಮಾನಿಸಿಕೊಂಡೆನು.


ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.


ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ.


ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು.


ಏಕೆಂದರೆ ಎಲ್ಲಾ ದೇಶಗಳೂ ಆಕೆಯ ಜಾರತ್ವಗಳೆಂಬ ಅತ್ಯಾಸಕ್ತಿಯ ದ್ರಾಕ್ಷಾರಸವನ್ನು ಕುಡಿದಿವೆ. ಭೂಲೋಕದ ಅರಸರು ಆಕೆಯೊಂದಿಗೆ ವ್ಯಭಿಚಾರ ಮಾಡಿದರು, ಭೂಲೋಕದ ವರ್ತಕರು ಆಕೆಯ ಭೋಗ ವಸ್ತುಗಳಿಂದ ಸಿರಿವಂತರಾದರು,” ಎಂದು ಕೂಗಿದನು.


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.


ಸಮುಯೇಲನು ಸೌಲನಿಗೆ, “ನೀನು ಬುದ್ಧಿಹೀನವಾದ ಕೆಲಸಮಾಡಿದ್ದೀ; ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಯೆಹೋವ ದೇವರು ಇಸ್ರಾಯೇಲರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವುದಕ್ಕೆ ಇದ್ದರು.


ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, “ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?” ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ.


ಯೆಹೋವ ದೇವರಿಗೆ ಪ್ರತಿಯಾಗಿ ಹೀಗೆ ವರ್ತಿಸುವುದು ಸರಿಯೋ? ಜ್ಞಾನವಿಲ್ಲದ ಬುದ್ಧಿಹೀನ ಜನರೇ, ದೇವರು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೋ? ನಿಮ್ಮನ್ನು ಸೃಷ್ಟಿಸಿ ಸ್ಥಿರಪಡಿಸಿದ್ದು ದೇವರಲ್ಲವೋ?


ಆಗ ಯೇಸು ಅವರಿಗೆ, “ಎಂಥ ಬುದ್ಧಿಹೀನರು ನೀವು, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವುದರಲ್ಲಿ ಮಂದ ಹೃದಯದವರೇ!


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ, ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಸಮಾನ.


ಏಷ್ಯಾ ಪ್ರಾಂತದಲ್ಲಿ ಸುವಾರ್ತೆ ಸಾರಬಾರದೆಂದು ಪವಿತ್ರಾತ್ಮ ತಡೆದದ್ದರಿಂದ ಪೌಲ ಮತ್ತು ಅವನ ಜೊತೆಯವರು ಫ್ರುಗ್ಯ ಹಾಗೂ ಗಲಾತ್ಯ ಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.


ನನ್ನ ಜೊತೆಯಲ್ಲಿರುವ ಎಲ್ಲಾ ಪ್ರಿಯರೂ, ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದು:


ಆದರೆ ಪ್ರಿಯರೇ, ನಾನು ಸುನ್ನತಿಯಾಗಬೇಕೆಂದು ಇನ್ನೂ ಬೋಧಿಸುವವನಾಗಿದ್ದರೆ, ಈಗಲೂ ನನಗೆ ಹಿಂಸೆಯಾಗುತ್ತಿರುವುದು ಏಕೆ? ಹಾಗಾದರೆ ಶಿಲುಬೆಯ ಸಂದೇಶ ಸಾರುವುದರಿಂದ ಯಾವ ಆತಂಕವೂ ಉಂಟಾಗುತ್ತಿರಲಿಲ್ಲವಲ್ಲಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು