Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:10 - ಕನ್ನಡ ಸಮಕಾಲಿಕ ಅನುವಾದ

10 ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೇಮನಿಷ್ಠೆಗಳನ್ನು ಆಧಾರಮಾಡಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ಧರ್ಮಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತನೆಂದು ಶಾಸ್ತ್ರದಲ್ಲಿ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆ ಕೊನ್ ಖಾಯ್ದ್ಯಾಕ್ನಿ ಖಾಯ್ಲ್ ಹೊವ್ನ್ ಚಲ್ತಲ್ಯಾ ವರ್‍ತಿ ಹೊಂದುನ್ ಹಾತ್, ತೆನಿ ಸರಾಪಾತ್ ಹಾತ್, ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ “ಜೆ ಕೊನ್ ಪುಸ್ತಕಾತ್ ಲಿವಲ್ಲ್ಯಾ ಸಗ್ಳ್ಯಾ ಖಾಯ್ದ್ಯಾಕ್ನಿ ಕನ್ನಾಬಿ ಖಾಯ್ಲ್ ಹೊವ್ನ್ ಚಲಿನಸ್ತಾನಾ ರ್‍ಹಾತಾ, ತೊ ದೆವಾಚ್ಯಾ ಸರಾಪಾತ್ ರ್‍ಹಾತಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:10
18 ತಿಳಿವುಗಳ ಹೋಲಿಕೆ  

ಅವರು, “ದೇವರ ನಿಯಮದ ಈ ಮಾತುಗಳನ್ನು ಸನ್ಮಾನಿಸಿ ಕೈಗೊಳ್ಳದೆ ಇರುವವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ನೀನು ಅವರಿಗೆ ಹೇಳಬೇಕಾದುದು: ಇಸ್ರಾಯೇಲ್ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.


ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.


ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು.


ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ, ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.


ನೀನು ಈಗ ಶಾಪಗ್ರಸ್ತನಾಗಿದ್ದಿ. ನೀನು ಸುರಿಸಿದ ನಿನ್ನ ತಮ್ಮನ ರಕ್ತವನ್ನು ಸ್ವೀಕರಿಸಲು ಬಾಯಿತೆರೆದಿರುವ ಭೂಮಿಯಿಂದ ತಿರಸ್ಕಾರವಾಗಿದ್ದಿ.


ಕಲ್ಲಿನ ಮೇಲೆ ಅಕ್ಷರಗಳನ್ನು ಕೆತ್ತಿಸಿದ್ದೂ, ಮರಣವನ್ನುಂಟುಮಾಡುವಂಥದ್ದೂ ಆಗಿರುವ ಆ ಸೇವೆಯು ಮಹಿಮೆಯಿಂದ ಕೂಡಿದ್ದಾಗಿತ್ತು. ಕುಂದಿಹೋಗುವಂಥ ಆ ಮಹಿಮೆಯಿಂದ ತುಂಬಿದ ಮೋಶೆಯ ಮುಖವನ್ನು ಇಸ್ರಾಯೇಲರಿಗೆ ದಿಟ್ಟಿಸಿ ನೋಡಲು ಸಾಧ್ಯವಾಗಲಿಲ್ಲ.


ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು