Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:11 - ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ನಿಯಮದಿಂದ ದೇವರ ಮುಂದೆ ಯಾರೂ ನೀತಿವಂತರೆಂಬ ನಿರ್ಣಯವನ್ನು ಹೊಂದುವುದಿಲ್ಲವೆಂಬುದು ಸ್ಪಷ್ಟವಾಗಿದೆ. ಏಕೆಂದರೆ, “ನೀತಿವಂತನು ನಂಬಿಕೆಯಿಂದಲೇ ಬದುಕುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ, ಧರ್ಮಶಾಸ್ತ್ರ ವಿಧಿಸುವುದನ್ನು ಪೂರೈಸುವುದರಿಂದ ಯಾರೂ ದೇವರೊಡನೆ ಸತ್ಸಂಬಂಧ ಪಡೆಯಲಾರರು ಎಂಬುದು ಸಹ ಸ್ಪಷ್ಟವಾಗಿದೆ. ಏಕೆಂದರೆ, “ಯಾರು ದೇವರೊಡನೆ ಸತ್ಸಂಬಂಧವನ್ನು ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಕರ್ಮಮಾರ್ಗದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ ನೀತಿವಂತನು ನಂಬಿಕೆಯಿಂದಲೇ ಬದುಕುವನೆಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಧರ್ಮಶಾಸ್ತ್ರದ ಮೂಲಕ ಯಾವನೂ ನೀತಿವಂತನಾಗಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಪವಿತ್ರ ಗ್ರಂಥವು ಹೇಳುವಂತೆ, “ನಂಬಿಕೆಯ ಮೂಲಕ ನೀತಿವಂತನಾದವನು ಸದಾಕಾಲ ಜೀವಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖಾಯ್ದ್ಯಾಂಚ್ಯಾ ವೈನಾ ಕೊನ್‍ಬಿ ನಿತಿವಂತ್ ಹೊಯ್ನಾ ಮನ್ತಲೆ ಕಳುನ್‍ ಯೆಲೆ. ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ “ದೆವಾಚ್ಯಾ ವಾಂಗ್ಡಾ ನಿತಿವಂತ್ ಮನುನ್ ಥವಲ್ಲೊ ಮಾನುಸ್, ಫಕತ್ ವಿಶ್ವಾಸಾ ವೈನಾ ಯೆವ್ಡೆಚ್ ಝಿತ್ತೊ ರ್‍ಹಾತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:11
20 ತಿಳಿವುಗಳ ಹೋಲಿಕೆ  

ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ. ಆದರೆ ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.


ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.


ಆದರೆ, “ನನ್ನ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಹಿಂಜರಿದರೆ, ಅವನಲ್ಲಿ ನನಗೆ ಸಂತೋಷವಿರುವುದಿಲ್ಲ.”


ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.


ಪಾಪಮಾಡದೆ ಒಳ್ಳೆಯದನ್ನೇ ನಡೆಸುವ ನೀತಿವಂತನು, ಭೂಮಿಯ ಮೇಲೆ ಒಬ್ಬನೂ ಇಲ್ಲ.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು.


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.


“ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುತ್ತೇನೆ.


ದೇವರ ಸಂಗಡ ವ್ಯಾಜ್ಯವಾಡಲು ಮನುಷ್ಯನು ಬಯಸಿದರೂ, ದೇವರ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ಕೊಡಲಾರನು.


“ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,


ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.


ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು