Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:12 - ಕನ್ನಡ ಸಮಕಾಲಿಕ ಅನುವಾದ

12 ನಿಯಮವು ನಂಬಿಕೆಯನ್ನು ಆಧಾರಗೊಂಡದ್ದಲ್ಲ. ಆದರೆ, “ನಿಯಮಗಳ ಕ್ರಿಯೆಗಳನ್ನು ಮಾಡುವವನು ಅವುಗಳ ಮೂಲಕ ಬದುಕುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಧರ್ಮಶಾಸ್ತ್ರ ವಿಶ್ವಾಸವನ್ನು ಆಧರಿಸಿಲ್ಲ, ಬದಲಿಗೆ, “ಅದರ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕವಾಗಿ ಜೀವಿಸುತ್ತಾನೆ,” ಎಂದು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ಕರ್ಮಮಾರ್ಗಕ್ಕೆ ನಂಬಿಕೆಯು ಆಧಾರವಲ್ಲ, ಅದರ ನೇಮಗಳನ್ನು ಆಚರಿಸಿದವನೇ ಅವುಗಳ ಮೂಲಕ ಬದುಕುವನು ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಧರ್ಮಶಾಸ್ತ್ರವು ನಂಬಿಕೆಯ ಮಾರ್ಗವನ್ನು ಬಳಸದೆ, “ಈ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವವನ್ನು ಪಡೆದುಕೊಳ್ಳುತ್ತಾನೆ” ಎಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖರೆ ಖಾಯ್ದ್ಯಾಕ್ನಿ ಅನಿ ವಿಶ್ವಾಸಾಕ್ ಕಾಯ್ಬಿ ಸಮಂದ್ ನಾ, ತೆಚ್ಯಾ ಬದ್ಲಾಕ್ ಪವಿತ್ರ್ ಪುಸ್ತಕ್ ಮನ್ತಾ, “ಜೆ ಕೊನ್ ಖಾಯ್ದ್ಯಾಕ್ ಪಾಜೆ ಹೊಲ್ಲೆ ಸಗ್ಳೆ ಕರ್‍ತಾ, ತೊ ಝಿತ್ತೊ ರ್‍ಹಾತಾ,”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:12
13 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು.


“ನೀವು ಅವರನ್ನು ನಿಮ್ಮ ನಿಯಮಕ್ಕೆ ಮರಳಿ ಬರುವ ಹಾಗೆ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಗರ್ವಪಟ್ಟು, ನಿಮ್ಮ ಆಜ್ಞೆಗಳನ್ನು ಅನುಸರಿಸದೆ ಹೋದರು. ನಿಮ್ಮ ವಾಕ್ಯಗಳನ್ನು ಕೈಗೊಳ್ಳುವುದರಿಂದ ಮನುಷ್ಯರು ಬದುಕುವರು ಎಂಬುದನ್ನು ಅವರು ತಿಳಿದಿದ್ದರೂ, ಆ ನಿಮ್ಮ ವಾಕ್ಯಗಳಿಗೆ ವಿರೋಧವಾಗಿ ಪಾಪಮಾಡಿ, ತಮ್ಮ ಹೃದಯವನ್ನು ಕಠಿಣಪಡಿಸಿಕೊಂಡು ನಿಮ್ಮ ಮಾತನ್ನು ಕೇಳದೆ ಹೋದರು.


ನಿಯಮಕ್ಕೆ ಒಳಗಾಗುವವರೇ ಬಾಧ್ಯರಾದರೆ, ನಂಬಿಕೆಗೆ ಬೆಲೆಯಿಲ್ಲದಂತಾಯಿತು. ವಾಗ್ದಾನವೂ ನಿರರ್ಥಕ.


ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು, ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.


ಆ ಆಯ್ಕೆಯು ಕ್ರಿಯೆಗಳ ಆಧಾರದಿಂದಲ್ಲ, ಕೃಪೆಯಿಂದಲೇ ಆಗಿರುತ್ತದೆ. ಕ್ರಿಯೆಗಳಿಂದ ಅದು ಆಗಿದ್ದರೆ ಇನ್ನೆಂದಿಗೂ ಕೃಪೆಯಾಗಲಾರದು.


“ನೀನು ಒಳ್ಳೆಯದನ್ನು ಕುರಿತು ನನ್ನನ್ನು ಕೇಳುವುದೇಕೆ? ಒಬ್ಬಾತನೇ ಒಳ್ಳೆಯವನು. ಆದರೆ ನೀನು ಜೀವದಲ್ಲಿ ಪ್ರವೇಶಿಸಬೇಕಾದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆದುಕೋ,” ಎಂದು ಯೇಸು ಉತ್ತರಕೊಟ್ಟರು.


“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.


ಜೀವವನ್ನು ತರಲಿಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣವನ್ನು ಉಂಟುಮಾಡುವುದಾಯಿತು ಎಂದು ಕಂಡುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು